ಅತಿವೃಷ್ಟಿಗೆ ಹಾಳಾದ ಬೆಳೆಗೆ ಪರಿಹಾರ ನೀಡಿ
Team Udayavani, Aug 25, 2020, 5:38 PM IST
ಭಾಲ್ಕಿ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾಳಾದ ಹೆಸರು ಸೇರಿದಂತೆ ಇತರ ಬೆಳೆಗಳಿಗೆ ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಿ ರೈತ ಸಮುದಾಯದ ನೆರವಿಗೆ ಮುಂದಾಗಬೇಕು ಎಂದು ರೈತ ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆಗ್ರಹಿಸಿದರು.
ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ, ರೈತ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದಾಗಿ ಊಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ತಿಲಾಂಜಲಿ ಇಟ್ಟು, ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುವ ಕಾಯ್ದೆ ರೂಪಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಹೆಚ್ಚಿನ ಸಂಖೆಯಲ್ಲಿದ್ದು, ಅವರ ಬದುಕು ಬೀದಿಗೆ ಬೀಳಲಿದೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಗಾರರ ಕೃಷಿ ಸಂಸ್ಕೃತಿ ಬೆಳೆಯುತ್ತಲಿದೆ. ಹಾಗಾಗಿ ಇಂತಹ ರೈತ ವಿರೋ ಧಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಕಬ್ಬು ಬೆಳೆಗೆ ತಗುಲುವ ವೆಚ್ಚ ಹೆಚ್ಚಿದ್ದು ಕಾರ್ಖಾನೆಗಳು ಎಫ್‌ಆರ್‌ಪಿ ದರವನ್ನು ಹೆಚ್ಚಿಸಬೇಕು. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಬಾರದು. ಸರ್ಕಾರದ ರೈತ ವಿರೋಧಿ ನಡೆಯನ್ನು ಸಂಘ ಖಂಡಿಸುತ್ತದೆ. ರೈತರಿಗೆ ನ್ಯಾಯ ದೊರಕಿಸಲು ರಾಜ್ಯ ಮಟ್ಟದಿಂದ ಎಲ್ಲ ಹಂತದವರೆಗೆ ಹೋರಾಟ ಮಾಡಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನೂತನ ಪದಾಧಿಕಾರಿಗಳು: ಸಿದ್ರಾಮಪ್ಪ ಆಣದೂರೆ (ಜಿಲ್ಲಾಧ್ಯಕ್ಷ), ಶ್ರೀಮಂತ ಬಿರಾದರ (ಕಾರ್ಯಾಧ್ಯಕ್ಷ), ದಯಾನಂದ ಸ್ವಾಮಿ (ಪ್ರಧಾನ ಕಾರ್ಯದರ್ಶಿ) ಪದಗ್ರಹಣ ಸ್ವೀಕರಿಸಿದರು. ಹಿರೇಮಠದ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಪ್ರಮುಖರಾದ ಭತ್ತರಹಳ್ಳಿ ಭೈರೇಗೌಡ, ಕಾರ್ತಿಕ, ಶೇಷಾರಾವ್ ಕಣಜಿ, ಬಾಬುರಾವ್ ಜೋಳದಪಕೆ, ಸತ್ಯವಾನ ಪಾಟೀಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.