ಹೆಣ್ಣು ಮಕ್ಕಳ ನಿರ್ಲಕ್ಷಿಸದೇ ಶಿಕ್ಷಣ ಒದಗಿಸಿ
Team Udayavani, Nov 15, 2017, 12:45 PM IST
ಬೀದರ: ಹೆಣ್ಣು ಮಕ್ಕಳಲ್ಲಿ ಹೆಚ್ಚು ಪ್ರಮಾಣದಲ್ಲಿ ಸಾಮಾಜಿಕ ಕಳಕಳಿ ಇರುತ್ತದೆ. ಪೋಷಕರು ಅವರನ್ನು ನಿರ್ಲಕ್ಷ್ಯಾ ದಿಂದ ಕಾಣದೇ ಅವರಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಐ.ಎಸ್. ಪಾಂಚಾಳ ಹೇಳಿದರು.
ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ
ಅವರು, ತಮ್ಮ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು. ಮಕ್ಕಳು ತಮ್ಮಲ್ಲಿನ ಸುಪ್ತ ಪ್ರತಿಭೆ ಅನಾರಣಗೊಳಿಸಲು ಯಾವುದೇ ಕಾರಣಕ್ಕೂ ಹಿಂಜರಿಯಬಾರದು ಎಂದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕವಿತಾ ಹುಷಾರೆ ಮಾತನಾಡಿ, ಮಕ್ಕಳು ಸ್ವಇಚ್ಛೆಯಿಂದ ವಿವಿಧ ಸ್ಪರ್ಧೆಗಳಿಗೆ ಪಾಲ್ಗೊಳ್ಳುವಂತೆ ಪ್ರೇರಣೆ ನೀಡಬೇಕು ಎಂದು ಹೇಳಿದರು.
ಬಾಲನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ಮಕ್ಕಳ ಭವಿಷ್ಯ ಪಾಲಕರು ಮತ್ತು ಶಿಕ್ಷಕರನ್ನು ಅವಲಂಭಿಸಿರುತ್ತದೆ. ಇವರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಯಲು ಸಹಕರಿಸಬೇಕು ಎಂದು ಹೇಳಿದರು.
ಮಹೇಶ ಗೋರನಾಳ ಮಾತನಾಡಿ, ಮಕ್ಕಳಲ್ಲಿ ಭಾವೈಕ್ಯತೆ, ಸದ್ಭಾವನೆ, ಸನ್ನಡತೆಯ ಗುಣಗಳು ಬೆಳೆಯುವಂತೆ ನೋಡಿಕೊಳ್ಳಬೇಕಿದೆ ಎಂದರು. ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಫಾ| ಸ್ಟೀವನ್ ಮಾತನಾಡಿ, ಮಕ್ಕಳು ವಿದೇಶದ ಶೈಲಿಗಳಿಗೆ ಮಾರುಹೋಗುತ್ತಿರುವುದು ಮಾರಕವಾಗಿದೆ. ಇಂತಹ ಮಕ್ಕಳಿಗೆ ದೇಶದ ಮಹಾತ್ಮರ ಕುರಿತು ಮಾಹಿತಿ ನೀಡಿ ದೇಶಪ್ರೇಮ ಬೆಳೆಸಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಶಾಂತ ಬಿರಾದಾರ ಮಾತನಾಡಿ, ಬಾಲಮಂದಿರದ ಮಕ್ಕಳು ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಿವಿಧ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಬೇಕೆಂದು ಸಲಹೆ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಪಾಂಡುರಂಗ ಅಧ್ಯಕ್ಷತೆ ವಹಿಸಿದ್ದರು.
ಬಾಲನ್ಯಾಯ ಮಂಡಳಿ ಸದಸ್ಯ ಧನವಂತಿ ಪಾಟೀಲ, ಬಾಲಮಂದಿರದ ಸಿಬ್ಬಂದಿ ಮಂಜೂರಖಾನ್, ಆಕಾಶ ಕಲ್ಯಾಣಿ, ಸುಧಾಕರ ಎಲ್ಲಾನೋರ್, ರಘುನಾಥ, ಮಂಗಲಾ, ಆಕೀಬ್ ಜಾವೇದ್, ಅಭಿಲಾಷ, ಬಾಲಮಂದಿರದ ಮಕ್ಕಳು ಉಪಸ್ಥಿತರಿದ್ದರು. ಚಿನ್ನಮ್ಮಾ ಕೊಳ್ಳೆ ನಿರೂಪಿಸಿದರು. ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪುರೆ ಸ್ವಾಗತಿಸಿದರು. ಅಧೀಕ್ಷಕಿ ದ್ರೌಪತಿ ನಾಯಕ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.