ಬಿದರಿ ಕಲಾವಿದರಿಗೆ ಸಾಲ ಸೌಲಭ್ಯ ಒದಗಿಸಿ: ಖಾಶೆಂಪೂರ
Team Udayavani, Sep 8, 2018, 11:34 AM IST
ಬೀದರ: ನಗರದಲ್ಲಿರುವ ಬಿದರಿ ಕುಶಲಕರ್ಮಿಗಳ ಶ್ರಮದಿಂದಾಗಿ ಬಿದರಿ ಕಲೆಗೆ ಜಾಗತಿಕ ಮನ್ನಣೆ ಸಿಕ್ಕಿದೆ. ಜಾಗತಿಕ ನಕಾಶೆಯಲ್ಲಿ ಬೀದರ ಹೆಸರಾಗಿದೆ. ಇದಕ್ಕೆ ಕಾರಣರಾದ ಕುಶಲಕರ್ಮಿಗಳ ಆರ್ಥಿಕ ಸ್ಥಿತಿಗತಿ ಸುಧಾರಿಸುವ ನಿಟ್ಟಿನಲ್ಲಿ ಅವರಿಗೆ ಸಾಲ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.
ನಗರದ ಕಚೇರಿಯಲ್ಲಿ ಗುರುವಾರ ಬಿದರಿ ಕುಶಲಕರ್ಮಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಿದರಿ ಕಲೆಯಿಂದಾಗಿ ಜಿಲ್ಲೆ ನಾಡಿನೆಲ್ಲೆಡೆ ಹೆಸರುವಾಸಿಯಾಗಿದೆ. ಈ ಕಲೆಯನ್ನು ನಂಬಿದ ಕಾರ್ಮಿಕರಿಗೆ ಅನುಕೂಲವಾಗುವ ದಿಶೆಯಲ್ಲಿ ತಲಾ 10 ಜನ ಸದಸ್ಯರನ್ನೊಳಗೊಂಡು ಒಂದು ಸ್ವಸಹಾಯ ಸಂಘ ರಚಿಸಿ, ತಲಾ 10 ಜನರ ಗುಂಪಿಗೆ 3 ಲಕ್ಷ ರೂ.ನಂತೆ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮತ್ತು ಡಿಸಿಸಿ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಈ ಕಲೆ ನೆಚ್ಚಿಕೊಂಡಿರುವ ಮಹಿಳಾ ಕಾರ್ಮಿಕರಿಗೆ ಬಡ್ಡಿ ರಹಿತವಾಗಿ ಸಾಲ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕುಶಲಕರ್ಮಿಗಳು ತಯಾರಿಸುವ ವಸ್ತುಗಳನ್ನು ಮಾರಾಟ ಮಾಡಲು ಮಾರಾಟ ಸಹಕಾರ ಸಂಘ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು ಎಂದು ಇದೇ ವೇಳೆ ಬಿದರಿ ಕಲೆ ಕಾರ್ಮಿಕರು ಸಚಿವರಲ್ಲಿ ಮನವಿ ಮಾಡಿದರು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಹಕಾರ ಇಲಾಖೆಯ ವಿಶ್ವನಾಥ ಮಲಕೋಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.