ಪೊಲೀಸ್ ಸಿಬ್ಬಂದಿಗೆ ಅಗತ್ಯ ಸೌಕರ್ಯ ಕಲ್ಪಿಸಿ
Team Udayavani, Oct 22, 2018, 12:24 PM IST
ಬೀದರ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸ್ ಸಿಬ್ಬಂದಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶೆ ಮನಗೂಳಿ ಪ್ರೇಮಾವತಿ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ರವಿವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇಶ ರಕ್ಷಣೆಯಲ್ಲಿ ಸೈನಿಕರು ಮತ್ತು ಪೊಲೀಸರ ಪಾತ್ರ ಹೆಚ್ಚಿರುತ್ತದೆ. ಸೈನಿಕರು ಗಡಿಯಲ್ಲಿ ಹೋರಾಡಿದರೆ, ಪೊಲೀಸರು ಸಮಾಜದಲ್ಲಿರುವ ದುಷ್ಟಶಕ್ತಿಗಳ ವಿರುದ್ಧ ಹೋರಾಟ ನಡೆಸುತ್ತಾರೆ. ದೇಶ ಹಾಗೂ ಸಾರ್ವಜನಿಕರ ರಕ್ಷಣೆಗಾಗಿ ಹೋರಾಡುವ ಸಂದರ್ಭದಲ್ಲಿ ವೀರಮರಣ ಹೊಂದಿರುವ ಪೊಲೀಸರನ್ನು ಎಲ್ಲರೂ ಸ್ಮರಿಸಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಮಾತನಾಡಿ, ದೇಶದಾದ್ಯಂತ ಹುತಾತ್ಮರಾದ ಪೊಲೀಸರ ಪಟ್ಟಿ ವಾಚಿಸಿ, ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದ 414 ಪೊಲೀಸರು ಸೇವೆಯಲ್ಲಿ ವೀರಮರಣ ಹೊಂದಿದ್ದಾರೆ. ಅದರಲ್ಲಿ ರಾಜ್ಯದ 15 ಜನರು ಸೇರಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು, ಸಾರ್ವಜನಿಕರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದರು. ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಕವಾಯತು ತಂಡದಿಂದ ಮೂರು ಸುತ್ತು ಗುಂಡು ಹಾರಿಸಲಾಯಿತು. ಬೀದರ ಏರ್ ಫೋರ್ಸ್ ಸ್ಟೇಷನ್‌ನ ವಿಂಗ್ ಕಮಾಂಡರ್ ಎಂ.ಕೆ.ಮಿಶ್ರಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಶಿವಶರಣಪ್ಪ ವಾಲಿ, ಮುಖಂಡರಾದ ಗುರುನಾಥ ಕೊಳ್ಳೂರ್, ಬಾಬು ವಾಲಿ, ಶಾಹೀನ್ ಪಟೇಲ್, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.