ಸದಸ್ಯರಿಗೆ ಪ್ರಗತಿ ಕೆಲಸದ ಮಾಹಿತಿ ನೀಡಿ: ಸಂಧ್ಯಾರಾಣಿ


Team Udayavani, Nov 26, 2019, 1:07 PM IST

bidar-tdy-2

ಬೀದರ: ನಗರದ ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಸಂಧ್ಯಾರಾಣಿ ರಾಮ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆಯಿತು. ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ನಡೆಯುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜಿಪಂ ಸದಸ್ಯರು ಹಾಗೂ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್‌. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಮಿತಿ ಸದಸ್ಯರಾದ ಆನಂದ ವಿಠಲರಾವ್‌ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೆಲವು ತಾಲೂಕು ಕಚೇರಿಗಳಲ್ಲಿ ಸಂಬಂಧವೇ ಇಲ್ಲದವರಿಗೆ ಪ್ರಭಾರ ನೀಡಿರುವುದು ಕಂಡುಬಂದಿದೆ. ಇವರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುತ್ತದೆ. ಇಂತಹ ಅಧಿ ಕಾರಿಗಳನ್ನು ಬದಲಾಯಿಸಬೇಕು ಎಂದು ತಿಳಿಸಿದರು.

ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸದ ಕಾರಣದಿಂದ ಕೆಲವು ಮಕ್ಕಳು ರಸ್ತೆಗಳಲ್ಲಿ ಅಡ್ಡಾಡುತ್ತಿರುವುದು ಕಂಡು ಬರುತ್ತಿದೆ ಎಂದು ಸಭೆಗೆ ತಿಳಿಸಿದರು. ಇದಕ್ಕೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರತಿಕ್ರಿಯಿಸಿ, ಮಹಿಳಾ ವಸತಿ ನಿಲಯಗಳು ಮತ್ತು ಮೆಟ್ರಿಕ್‌ ಪೂರ್ವ ವಸತಿ ನಿಲಯಗಳಲ್ಲಿ ಮಾತ್ರ ರಾತ್ರಿ ಕಾವಲುಗಾರರಿದ್ದಾರೆ. ಉಳಿದ ವಸತಿ ನಿಲಯಗಳಲ್ಲಿ ರಾತ್ರಿ ಕಾವಲುಗಾರರ ನೇಮಕಾತಿಗೆ ಅವಕಾಶವಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.

ಕೆಲವು ವಸತಿ ನಿಲಯಗಳಲ್ಲಿ ಅವಶ್ಯಕತೆ ಇಲ್ಲದಿದ್ದರೂ ಕಟ್ಟಡಗಳನ್ನು ನಿರ್ಮಿಸುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲೆಯ ಸಾಕಷ್ಟು ವಸತಿ ನಿಲಯಗಳನ್ನು ಬಾಡಿಗೆ ಮೇಲೆ ನಡೆಸಲಾಗುತ್ತಿದೆ. ಇಂತಹ ಸ್ಥಳಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ಕೊಡಬೇಕು ಎಂದು ಸಮಿತಿ ಸದಸ್ಯರು ತಿಳಿಸಿದರು. ಬಾಡಿಗೆಯಿಂದ ನಡೆಸಲಾಗುತ್ತಿರುವ ಕಡೆಯಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಈ ಬಗ್ಗೆ ಸಮಿತಿ ಸದಸ್ಯರ ಗಮನಕ್ಕೆ ತರುವಂತೆ ಜಿಪಂ ಉಪ ಕಾರ್ಯದರ್ಶಿ ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ಸಮಿತಿ ಸದಸ್ಯರಾದ ಜಯಶ್ರೀ ಜೈಸಿಂಗ್‌ ರಾಠೊಡ್‌, ರೇಖಾಬಾಯಿ ನೀಲಕಂಠ, ರಾಜಶೇಖರ ಬಸವಣಪ್ಪ, ಅಂಬಾದಾಸ ಮನೋಹರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.