ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ವ್ಯವಸ್ಥೆ

ಬೆಮಳಖೇಡಾದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಉದ್ಘಾಟನೆ

Team Udayavani, Jul 2, 2019, 10:59 AM IST

bidar-02..

ಹುಮನಾಬಾದ: ಬೆಮಳಖೇಡಾ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಸಚಿವ ಬಂಡೆಪ್ಪ ಖಾಶೆಂಪೂರ ಉದ್ಘಾಟಿಸಿದರು.

ಹುಮನಾಬಾದ: ಸರ್ಕಾರಿ ಶಾಲೆಗಳಲ್ಲಿ ಪ್ರತೀ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಈ ಶಾಲೆ ಆರಂಭಿಸಲಾಗಿದೆ ಎಂದು ಸಚಿವ ಬಂಡೆಪ್ಪ ಖಾಶೆಂಪೂರ ಹೆಳಿದರು.

ಚಿಟಗುಪ್ಪ ತಾಲೂಕು ಬೆಮಳಖೇಡಾ ಗ್ರಾಮದಲ್ಲಿ ಸೋಮವಾರ ಕರ್ನಾಟಕ ಪಬ್ಲಿಕ್‌ ಶಾಲೆ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಮತ್ತು ಎಸ್‌ಎಸ್‌ಎಲಸಿ, ಪಿಯುಸಿ ಫಲಿತಾಂಶ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ಆಯೋಗ ವರದಿ ಆಧರಿಸಿ, 1ರಿಂದ 12ನೇ ತರಗತಿ ವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮುಂದಾಗಿದೆ. ಪ್ರತೀ ತಾಲೂಕಿಗೆ ಒಂದರಂತೆ ರಾಜ್ಯದ ಒಟ್ಟು 176 ತಾಲೂಕುಗಳಲ್ಲಿ ಈ ಶಾಲೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಈ ಶಾಲೆ ಉದ್ಘಾಟಿಸಲಾಗಿದೆ ಎಂದು ಹೇಳಿದರು.

ಈ ಶಾಲೆಗಳ ಯಶಸ್ಸು ಆಧರಿಸಿ, ಮುಂದಿನ ದಿನಗಳಲ್ಲಿ ಹೋಬಳಿ ವ್ಯಾಪ್ತಿಯಲ್ಲೂ ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ವರ್ಗ ಆಧರಿಸಿ, ಗುಣಮಟ್ಟದ ಕೊಠಡಿ, ಸುಸಜ್ಜಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್‌ ಲ್ಯಾಬ್‌, ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯ ಸೇರಿದಂತೆ ಮಹತ್ವದ ಸೌಲಭ್ಯವನ್ನು ಈ ಶಾಲೆಗಳು ಹೊಂದಿರುತ್ತವೆ ಎಂದು ಹೇಳಿದರು.

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ನಿಯೋಜನೆ, ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಾಲಾ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿಧಾನ ಕುರಿತು ಮಾರ್ಗದರ್ಶನ ನೀಡಲಾಗುವುದು. ಒಟ್ಟಾರೆ ಪ್ರೌಢ ಹಾಗೂ ಪದವಿಪೂರ್ವ ಹಂತದಿಂದಲೇ ತಂತ್ರಜ್ಞಾನ ಆಧಾರಿತ ನೆರವಿನ ಕಲಿಕೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಈ ಶಾಲೆಗಳ ಕಟ್ಟಡ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ರೂ.10ಲಕ್ಷ ಮತ್ತು ಮೂಲಸೌಲಭ್ಯಕ್ಕಾಗಿ ರೂ.5ಲಕ್ಷ ಸೇರಿ ಒಟ್ಟು ರೂ.15 ಲಕ್ಷ ಅನುದಾನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ, ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಗಂಧಾ ಅಣ್ಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿಬಾಯಿ ಭೂರೆ, ಉಪಾಧ್ಯಕ್ಷೆ ಮಾಣಿಕಬಾಯಿ, ಪಬ್ಲಿಕ್‌ ಶಾಲೆಯ ಪ್ರಾಚಾರ್ಯ ವಿಜಯಲಕ್ಷ್ಮೀ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಓಂಕಾರ ರೂಗನ್‌, ಪಿಆರ್‌ಇ ಎಇಇ ವಾಮನರಾವ್‌ ಇನ್ನಿತರರು ವೇದಿಕೆಯಲ್ಲಿದ್ದರು. ಗ್ರಾಮದ ಗಣ್ಯರು, ಶಿಕ್ಷಣ ಹಾಗೂ ವಿವಿಧ‌ ಇಲಾಖೆಗಳ ಅಧಿಕಾರಿಗಳು ಇದ್ದರು.

ಬಿಇಒ ಶಿವರಾಚಪ್ಪ ವಾಲಿ ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ ಪ್ರಾಸ್ತಾವಿಕ ಮಾತನಾಡಿದರು. ಸದಾಶಿವಯ್ಯ ಹಿರೇಮಠ‌ ನಿರೂಪಿಸಿದರು. ಶಾಂತಕುಮಾರ ಭಾಲ್ಕೆ ವಂದಿಸಿದರು.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.