ಮನೆ ಹಂಚಿಕೆಯಲ್ಲಿ ಅಕ್ರಮ ಎಸಗಿದರೆ ತಕ್ಕ ಶಿಕ್ಷೆ
Team Udayavani, Feb 6, 2022, 11:05 AM IST
ಹುಮನಾಬಾದ: ಸರ್ಕಾರದಿಂದ ಮಂಜೂರಾದ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಮನೆ ಹಂಚಿಕೆಯಲ್ಲಿ ಅಕ್ರಮ ಎಸಗಿದರೆ ತಪ್ಪಿಸ್ಥರು ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಶಾಸಕ ರಾಜಶೇಖರ ಪಾಟೀಲ ಪಿಡಿಒಗಳನ್ನು ಎಚ್ಚರಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸರ್ಕಾರ ಅತೀ ಕಡಿಮೆ ಸಂಖ್ಯೆಯಲ್ಲಿ ಮನೆ ಹಂಚಿಕೆ ಮಾಡುತ್ತಿದೆ. ಈ ಹಿಂದಿನ ಸರ್ಕಾರಗಳು ಸಾವಿರಾರು ಸಂಖ್ಯೆಯಲ್ಲಿ ಮನೆಗಳ ಹಂಚಿಕೆ ಮಾಡಿದೆ. ಇದೀಗ ಬರುತ್ತಿರುವ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಪಂಚಾಯತ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಯಾವುದೇ ಅಕ್ರಮದಲ್ಲಿ ಭಾಗವಹಿಸಬಾರದು. ಈ ಹಿಂದೆ ಕೇಳಿ ಬಂದ ದೂರುಗಳು ಈ ಭಾರಿ ಕೇಳಿಸಬಾರದು. ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಅನುಸಾರ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ತಾಲೂಕಿನ ಮಾಣಿಕನಗರ ಗ್ರಾಪಂ, ಹುಡಗಿ ಪಂಚಾಯತ, ಬೇಳಕೇರಾ ಹಾಗೂ ಇಟಗಾ ಪಂಚಾಯತಗಳಲ್ಲಿ ಎಷ್ಟು ಜನರಿಗೆ ಮನೆ ಇವೆ. ಎಷ್ಟು ಜನರಿಗೆ ಮನೆಗಳು ಇಲ್ಲ ಎಂಬುವುದು ಸರ್ವೇ ಕಾರ್ಯ ನಡೆಸುವಂತೆ ಸರ್ಕಾರ ಸೂಚಿಸಿದ್ದು, ಪಂಚಾಯತ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಖುದ್ದು ಭೇಟಿ ನೀಡಿ ಸರ್ವೇ ಕಾರ್ಯ ಮಾಡಬೇಕು. ಮನೆ ಇಲ್ಲದವರಿಗೆ ಮನೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಲಿದ್ದು, ಅರ್ಹ ಫಲಾನುಭವಿಗಳು ಕೈ ಬಿಡದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಮುಂಬರುವ ವಿಧಾನಸಭೆ ಕಲಾಪದ ನಂತರ ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಪಂಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು, ಅಭಿವೃದ್ಧಿ ಕಾರ್ಯಗಳ ಕುರಿತು ಖುದ್ದು ಪರಿಶೀಲನೆ ನಡೆಸುತ್ತೇನೆ. ಗ್ರಾಮೀಣ ಭಾಗದ ಜನರಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಸ್ಥಳೀಯ ಆಡಳಿತ ಸದಸ್ಯರು ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಜನರಿಗೆ ಸೂಕ್ತ ಕೆಲಸ ನೀಡಿ, ಅಕ್ರಮಕ್ಕೆ ಪ್ರೋತ್ಸಾಹ ನೀಡಿದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ. ಗ್ರಾಮೀಣ ಭಾಗದ ಜನರಿಂದ ದೂರುಗಳು ಬರದಂತೆ ಕಾರ್ಯ ನಿರ್ವಹಣೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ತಾಪಂ ಅಧಿಕಾರಿ ಮುರುಗೆಪ್ಪಾ, ಡಾ| ಗೋವಿಂದ್ ಸೇರಿದಂತೆ ವಿವಿಧ ಪಂಚಾಯತ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.