ಕ್ವಾರಂಟೈನ್ ಕಡ್ಡಾಯ: ಹಿರೇಮಠ
Team Udayavani, May 21, 2020, 5:19 AM IST
ಹುಮನಾಬಾದ: ನೆರೆ ರಾಜ್ಯದಿಂದ ಬರುವ ಜನರು ಕಡ್ಡಾಯವಾಗಿ ಸರ್ಕಾರಿ ಕಟ್ಟಡದಲ್ಲಿ ಕ್ವಾರಂಟೈನ್ ಆಗಬೇಕು. ಯಾರು ನೇರವಾಗಿ ಮನೆಗಳಿಗೆ ಸೇರುತ್ತಾರೆ ಅಂಥವರ ವಿರುದ್ಧ ಪುರಸಭೆ ಅಧಿಕಾರಿಗಳು ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ತಹಶೀಲ್ದಾರ್ ನಾಗಯ್ನಾ ಹಿರೇಮಠ ತಿಳಿಸಿದ್ದಾರೆ.
ಪಟ್ಟಣದ ಹೊರವಲಯದ ವಸತಿ ನಿಲಯಕ್ಕೆ ಬುಧವಾರ ಭೇಟಿ ನೀಡಿ ನಂತರ ಮಾತನಾಡಿದ ಅವರು, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಸಿಬ್ಬಂದಿಗಳು ಪಟ್ಟಣದ ವಿವಿಧೆಡೆ ಸಂಚರಿಸಿ ಬೇರೆ ಕಡೆಗಳಿಂದ ಬಂದ ಜನರ ಮಾಹಿತಿ ಪಡೆದು ಅವರನ್ನು ಸರ್ಕಾರಿ ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಬೇರೆ ರಾಜ್ಯಗಳಿಂದ ಬಂದವರನ್ನು ಗುರುತಿಸಿ ಹೇಗೆ ನೇರವಾಗಿ ಮನೆಗೆ ಬಂದಿದ್ದೀರಿ? ಎಂದು ಪ್ರಶ್ನಿಸುವ ಪುರಸಭೆ ಸಿಬ್ಬಂದಿಗಳ ಮಾತಿಗೆ ಗೌರವ ನೀಡುತ್ತಿಲ್ಲ. ಜತೆಗೆ ಸಿಬ್ಬಂದಿ ಮೇಲೆ ದರ್ಪ ತೋರುತ್ತಿದ್ದಾರೆ ಎಂದು ಸಿಬ್ಬಂದಿಗಳು ತಹಶೀಲ್ದಾರ್ ಎದುರು ಹೇಳಿದ್ದಕ್ಕೆ ಆಕ್ರೋಶಗೊಂಡ ತಹಶೀಲ್ದಾರ್ ಯಾರೇ ಇರಲಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಸಾಧ್ಯವಾದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ಸೇರಿದಂತೆ ಇತರೆಡೆಯಿಂದ ಬರುತ್ತಿರುವವರಿಗೆ ಕ್ವಾರಂಟೈನ್ ಕಡ್ಡಾಯ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Women’s ODI: ಹರ್ಲೀನ್ ಶತಕ; ವಿಂಡೀಸ್ ವಿರುದ್ಧ ಭಾರತಕ್ಕೆ 2-0 ಸರಣಿ ಜಯ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.