ಮಳೆ ಹಾನಿ ಜಂಟಿ ಸಮೀಕ್ಷೆ

Team Udayavani, Sep 18, 2020, 7:09 PM IST

ಮಳೆ ಹಾನಿ ಜಂಟಿ ಸಮೀಕ್ಷೆ

ಬೀದರ: ಪ್ರಸಕ್ತ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಹಿನ್ನೆಲೆ ಜಿಲ್ಲೆಯ 5 ತಾಲೂಕುಗಳನ್ನು ಅತಿವೃಷ್ಟಿ/ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಲು ಎನ್‌ ಡಿಆರ್‌ಎಫ್‌/ ಎಸ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತ ಆದೇಶಿಸಿದೆ ಎಂದು ಡಿಸಿ ಆರ್‌. ರಾಮಚಂದ್ರನ್‌ ತಿಳಿಸಿದರು.

ನಗರದ ಪೊಲೀಸ್‌ ಕವಾಯಿತು ಮೈದಾನದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌವರ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಬೆಳೆ, ಜಾನುವಾರುಗಳು, ಮನೆ, ರಸ್ತೆ-ಸೇತುವೆಗಳು ಹಾನಿಯಾಗಿವೆ. ಆದ್ದರಿಂದ ಮತ್ತೂಮ್ಮೆ ಜಂಟಿ ಸಮೀಕ್ಷೆ ನಡೆಸಲಾಗುವುದು ಎಂದರು.

ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ 2,12,530 ರೈತರು ನೋಂದಣಿ ಮಾಡಿಸಿದ್ದು, ಜಿಲ್ಲೆಯು ರಾಜ್ಯದಲ್ಲೇ ಅಗ್ರಸ್ಥಾನದಲ್ಲಿದೆ. ಆಗಸ್ಟ್ ವರೆಗೆ ನರೇಗಾ ಯೋಜನೆಯಡಿ 25,276 ವಲಸೆಕುಟುಂಬಗಳಿಗೆ ಜಾಬ್‌ ಕಾರ್ಡ್‌ ವಿತರಿಸಲಾಗಿದೆ. ವಲಸೆ ಕೂಲಿಕಾರ್ಮಿಕರಲ್ಲಿ 15,548 ಕುಟುಂಬಗಳಿಗೆ ಉದ್ಯೋಗ ನೀಡಲಾಗಿದೆ. ಲಾಕ್‌ಡೌನ್‌ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೀಡಾದ ರೈತರಿಗೆ 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ 5000 ರೂ.ನಂತೆ ಸುಮಾರು 1095 ಫಲಾನುಭವಿ ರೈತರಿಗೆ 54.75 ಲಕ್ಷ ರೂ. ನೇರ ವರ್ಗಾವಣೆ ಮೂಲಕ ಜಮೆ ಮಾಡಲಾಗಿದೆ ಎಂದರು.

ಜಿಲ್ಲೆಯ ಪ್ರತಿಭಾವಂತ ಬಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀದರ ಜಿಲ್ಲೆಯ ಅನುದಾನಿತ ಹಾಗೂ ಅನುದಾನರಹಿತ ಪಿಯುಸಿ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಎರಡೂ ವರ್ಷಗಳಿಗೂ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ

63 ಕಾಲೇಜಿನವರು 803 ಉಚಿತ ಪಿಯುಸಿ ಸೀಟು ನೀಡಿದ್ದು, ಈ ಪೈಕಿ 665 ಸೀಟುಗಳನ್ನು ವಿದ್ಯಾರ್ಥಿಗಳು ಉಚಿತವಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಕಲ್ಯಾಣ ಎನ್ನುವ ಪದವೇ ಅಭಿವೃದ್ಧಿ ಮತ್ತು ಪ್ರಗತಿ ಸೂಚಕ. ಹೀಗಾಗಿ, ಈ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡ ನಾವುಗಳು ನಮ್ಮ ಚಿಂತನೆ ಸದಾಕಾಲ ಅಭಿವೃದ್ಧಿ ಮತ್ತು ಪ್ರಗತಿ ಪಥದತ್ತ ಹರಿಬಿಡೋಣ. ಈ ಕಲ್ಯಾಣ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಬೀದರ್‌ ಜಿಲ್ಲೆಯ ಪಾತ್ರ ಹಿರಿದಾಗಿದೆ. ಅನೇಕ ಹಿರಿಯರು ವಿಮೋಚನೆಗಾಗಿ ಹೋರಾಡಿದ್ದಾರೆ. ಅವರ ತ್ಯಾಗ-ಬಲಿದಾನ ಎಲ್ಲರೂ ಸ್ಮರಿಸಲೇಬೇಕು. ಜಿಲ್ಲೆಯ ಹೋರಾಟಗಾರರ ಸ್ಫೂರ್ತಿ ಇಂದಿನ ಪೀಳಿಗೆಗೆ ಪ್ರೇರಣಾದಾಯಕ ಎಂದರು.

ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೋವಿಡ್ ಹೋಂ ಕ್ವಾರಂಟೈನ್‌ನಲ್ಲಿ ಇರುವ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ಡಿಸಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಗಳನ್ನು ಗೌರವಿಸಲಾಯಿತು.

ಈ ವೇಳೆ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ,

ಶಾಸಕರಾದ ಬಂಡೆಪ್ಪ ಖಾಶಂಪುರ್‌, ರಹೀಮ್‌ ಖಾನ್‌, ಎಂಎಲ್ಸಿ ವಿಜಯಸಿಂಗ್‌, ಜಿಪಂ ಉಪಾಧ್ಯಕ್ಷ ಲಕ್ಷ್ಮಣ ಬುಳ್ಳಾ, ತಾಪಂ ಅಧ್ಯಕ್ಷ ವಿಜಯಕುಮಾರ ಬರೂರ, ಜಿಪಂ ಸಿಇಒಗ್ಯಾನೇಂದ್ರಕುಮಾರ ಗಂಗ್ವಾರ್‌, ಎಸ್ಪಿ ನಾಗೇಶ್‌ ಡಿ.ಎಲ್‌., ಎಡಿಸಿ ರುದ್ರೇಶ್‌ ಗಾಳಿ, ಸಹಾಯಕ  ಆಯುಕ್ತೆ ಗರೀಮಾ ಪನ್ವಾರ್‌, ಎಎಸ್ಪಿ ಡಾ. ಗೋಪಾಲ್‌ ಬ್ಯಾಕೋಡ್‌ ಇದ್ದರು.

ದ್ವಿತೀಯ ಪಿಯುಸಿ-ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೀದರ ಜಿಲ್ಲ ಅತ್ಯುತ್ತಮ ಸಾಧನೆ ಮಾಡಿದೆ. ಪಿಯುಸಿಯಲ್ಲಿ ಶೇ. 64.61 ಫಲಿತಾಂಶದೊಂದಿಗೆ 18ನೇ ಸ್ಥಾನಕ್ಕೆ, ಎಸ್ಸೆಸ್ಸೆಲ್ಸಿಯಲ್ಲಿನಲ್ಲಿ 24ನೇ ಸ್ಥಾನ ಪಡೆದಿದೆ. ಮುಂದೆಯೂ ಉತ್ತಮ ಫಲಿತಾಂಶ ದಾಖಲಿಸಲು ಪ್ರಯತ್ನಿಸಲಾಗುವುದು. ಜಿಲ್ಲೆಯ ವಿದ್ಯಾರ್ಥಿಗಳು ಯುಪಿಎಸ್ಸಿ ಪರೀಕ್ಷೆ ಕೂಡ ಪಾಸು ಮಾಡಲಿ ಎಂಬ ಸದುದ್ದೇಶದಿಂದ ಸೆ.26ಕ್ಕೆ ನಾಗರಿಕ ಸೇವಾ ಪರೀಕ್ಷೆ ಅರಿವು ಕಾರ್ಯಕ್ರಮ ರೂಪಿಸಲಾಗಿದೆ.  ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ, ಬೀದರ

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.