ಮಳೆ: ಭತ್ತದ ಬೆಳೆಗೆ ಅಪಾರ ಹಾನಿ
Team Udayavani, Nov 25, 2021, 12:45 PM IST
ಕೆಂಭಾವಿ: ಮಂಗಳವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಹಲವು ಗ್ರಾಮಗಳ ರೈತರ ಜಮೀನಿನಲ್ಲಿ ಬೆಳೆದ ಭತ್ತ ನೆಲಕಚ್ಚಿದ್ದು ಅಪಾರ ಹಾನಿ ಸಂಭವಿಸಿದೆ. ಮಳೆ ರೈತರಿಗೆ ಕಂಟಕವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.
ಕೆಂಭಾವಿ, ಯಡಿಯಾಪುರ, ಮುದನೂರ, ಕೂಡಲಗಿ, ಪರಸನಹಳ್ಳಿ, ಮಾಲಗತ್ತಿ, ಮಲ್ಲಾ, ಏವೂರ, ಕರಡಕಲ್, ಜೈನಾಪುರ, ನಗನೂರ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಭತ್ತದ ಪೈರುಗಳಿಗೆ ಅಪಾರ ಹಾನಿಯಾಗಿದೆ. ಕೆಲ ದಿನಗಳಲ್ಲಿ ಭತ್ತ ಕಟಾವು ಮಾಡಬೇಕಾಗಿತ್ತು. ಮಳೆಯಿಂದ ಸಂಪೂರ್ಣ ನಾಶವಾಗಿದ್ದು, ಸರ್ಕಾರ ಪರಿಹಾರ ಘೋಷಣೆ ಮಾಡಬೇಕು ಎಂದು ಹಲವು ರೈತರ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ 17.2ಮಿಮೀ ಮಳೆಯಾಗಿದ್ದು, ತಾಲೂಕಿನಲ್ಲಿಯೇ ಅತಿ ಹೆಚ್ಚು ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ಅಂದಾಜು ಪ್ರಕಾರ ಸುಮಾರು 15 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ ನಾಶವಾಗಿದ್ದು, ಭತ್ತದ ಜೊತೆಗೆ 186 ಎಕರೆ ಕಬ್ಬು ನಾಶವಾಗಿದೆ. ಇದಲ್ಲದೆ ದ್ರಾಕ್ಷಿ ಮತ್ತು ಮೆಣಸಿನ ಗಿಡಗಳು ಸಂಪೂರ್ಣ ಹಾಳಾಗಿದ್ದು, ತೋಟಗಾರಿಕೆ ಇಲಾಖೆ ಹಾನಿಯ ಪ್ರಮಾಣ ಘೋಷಣೆ ಮಾಡಬೇಕಿದೆ. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದು, ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.