ಬಸ್ ನಿಲ್ದಾಣದಲ್ಲಿ ಮಳೆ ನೀರು ಕೆರೆ ಸೃಷ್ಟಿ!
Team Udayavani, Aug 6, 2019, 3:09 PM IST
ಬಸವಕಲ್ಯಾಣ: ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನೀರು ನಿಂತು ಕೆರೆಯಂತಾಗಿದೆ.
ಬಸವಕಲ್ಯಾಣ: ಕೆಲವು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಎರಡು ಅಡಿ ಎತ್ತರ ನೀರು ಸಂಗ್ರಹವಾಗಿ ಸಾರ್ವಜನಿಕರು ಮತ್ತು ವಾಹನ ಚಾಲಕರಿಗೆ ಸಮಸ್ಯೆಯಾಗಿದೆ.
ಬಸ್‌ನಿಲ್ದಾಣದ ಆವರಣ ಮಳೆ ನೀರಿನಿಂದ ಸಂಪೂರ್ಣ ತುಂಬಿಕೊಂಡಿದೆ. ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಇದು ಬಸ್ ನಿಲ್ದಾಣವೊ ಅಥವಾ ಕೆರೆಯೋ ಎಂಬುದು ತಿಳಿಯದಾಗಿದೆ. ನೀರಿನಲ್ಲಿ ಬಸ್ ಸಂಚರಿಸಿದರೆ, ಕೆರೆಯಲ್ಲಿ ಏಳುವಂತೆ ಅಲೆಗಳು ಸೃಷ್ಟಿಯಾಗುತ್ತಿವೆ. ಹೀಗಾಗಿ ಸಾರ್ವಜನಿಕರು ಹಣ ಕೊಟ್ಟು ಆಟೋದಲ್ಲಿ ಮನೆಗೆ ತೆರಳುವಂತಾಗಿದೆ.
ನಗರಸಭೆಯಿಂದ ಕೈಗೊಂಡಿರುವ ಒಳಚರಂಡಿ ಕಾಮಗಾರಿ ನನೆಗುದಿಗೆ ಬಿದ್ದಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರಿಂದ ಪ್ರಯಾಣಿಕರು ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ಅವಘಡ ಸಂಭವಿಸಬಹುದು. ಹೀಗಾಗಿ ವೃದ್ಧರು ಮತ್ತು ಮಹಿಳೆಯರು ಚಿಕ್ಕ-ಚಿಕ್ಕ ಮಕ್ಕಳನ್ನು ಕರೆದುಕೊಂಡು ಭಯದಲ್ಲಿ ಸಂಚರಿಸುವಂತಾಗಿದೆ. ಆದ್ದರಿಂದ ಸಂಬಂಧ ಪಟ್ಟವರು ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.