ಸಂಗಮ್ ಗ್ರಾಮದಲ್ಲಿ ರಾಮಚಂದ್ರನ್ ವಾಸ್ತವ್ಯ
ಸಂಗಮನಾಥ ದೇಗುಲ ಇರುವ ಈ ಗ್ರಾಮದಲ್ಲಿ ಸುಮಾರು 1500ರಷ್ಟು ಜನಸಂಖ್ಯೆ ಇದೆ.
Team Udayavani, Feb 19, 2021, 6:12 PM IST
ಬೀದರ: ಈ ಗ್ರಾಮದಲ್ಲಿ ಆರೋಗ್ಯ ಕೇಂದ್ರ, ಶುದ್ಧ ಕುಡಿಯುವ ನೀರಿನ ಘಟಕ ಸೇರಿ ಸರ್ಕಾರದ ಸೇವಾ ವ್ಯವಸ್ಥೆಗಳು ಇವೆ. ಆದರೆ, ಅಧಿಕಾರಿಗಳ ನಿಷ್ಕಾಳಜಿಯಿಂದ ಸದ್ಯ ಅಪ್ರಯೋಜಕವಾಗಿವೆ. ವೈದ್ಯ, ಸಿಬ್ಬಂದಿಗಳಿಲ್ಲದೇ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿದ್ದರೆ, ಉದ್ಘಾಟನೆಗೂ ಮುನ್ನವೇ ನೀರಿನ ಘಟಕ ಬಂದ್ ಆಗಿದೆ. ಇದರೊಟ್ಟಿಗೆ ಅಗತ್ಯ ಸೌಲತ್ತುಗಳ ಕೊರತೆ ಗ್ರಾಮಸ್ಥರನ್ನು ಕಾಡುತ್ತಿದೆ.
ಇದು “ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ’ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಂಡಿರುವ ಕಮಲನಗರ ತಾಲೂಕಿನ ಸಂಗಮ್ ಗ್ರಾಮದ ಸ್ಥಿತಿ. ಫೆ.22ರಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ತಮ್ಮೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮ ಜನರಲ್ಲಿ ಆಶಾಭಾವ ಮೂಡಿದ್ದು, ಊರಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಆಗಬಹುದೆಂಬ ನಿರೀಕ್ಷೆಗಳು ಗರಿಗೆದರಿವೆ.
ಆಡಳಿತ ವರ್ಗವು ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆ, ಬೇಡಿಕೆಗಳನ್ನು ಪರಿಹರಿಸಬೇಕು. ಆ ಮೂಲಕ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದೆ. ಪ್ರತಿ ತಿಂಗಳ 3ನೇ ಶನಿವಾರ ಒಂದೊಂದು ತಾಲೂಕಿನ ಗ್ರಾಮದಲ್ಲಿ ಡಿಸಿ ವಾಸ್ತವ್ಯ ಮಾಡಲಿದ್ದಾರೆ. ಆದರೆ, ಈ ಶನಿವಾರ (ಫೆ. 20)ರಂದು ಜಿಲ್ಲೆಯಲ್ಲಿ ಕೃಷಿ ಸಚಿವರ ರೈತರೊಂದಿಗೊಂದು ದಿನ ಕಾರ್ಯಕ್ರಮ ನಿಗದಿ ಹಿನ್ನೆಲೆಯಲ್ಲಿ ಫೆ.22ರಂದು ಡಿಸಿ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆ ಆಲಿಸಲಿದ್ದಾರೆ.
ನೂತನ ತಾಲೂಕು ಕಮಲನಗರ ವ್ಯಾಪ್ತಿಗೆ ಸೇರಿರುವ ಸಂಗಮ್ ಗ್ರಾಮ ಖೇಡ್ ಗ್ರಾಪಂ ವ್ಯಾಪ್ತಿಯಲ್ಲಿದ್ದು, ಜಿಲ್ಲಾ ಕೇಂದ್ರದಿಂದ 50 ಕಿ.ಮೀ. ಅಂತರದಲ್ಲಿದೆ. ಪ್ರಸಿದ್ಧ ಸಂಗಮನಾಥ ದೇಗುಲ ಇರುವ ಈ ಗ್ರಾಮದಲ್ಲಿ ಸುಮಾರು 1500ರಷ್ಟು ಜನಸಂಖ್ಯೆ ಇದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿ ರಾಮಚಂದ್ರನ್ ಅವರು ತಮ್ಮ ಅಧಿಕಾರಿಗಳ ತಂಡದೊಂದಿಗೆ ಗ್ರಾಮದಲ್ಲಿ ಒಂದು ದಿನ (ಫೆ.22) ವಾಸ್ತವ್ಯ ನಡೆಸುವ ಮೂಲಕ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ.
ಗ್ರಾಮದಲ್ಲಿ ಆರೋಗ್ಯ ಸೇವೆಗಾಗಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಇದ್ದು, ವೈದ್ಯರು ಮತ್ತು ಸಿಬ್ಬಂದಿಗಳಿಲ್ಲದೇ ಸದಾ ಬೀಗ ಹಾಕಲಾಗಿದ್ದು, ಸದ್ಯ ಕಟ್ಟಡ ಶಿಥಲಾವಸ್ಥೆಗೆ ತಲುಪಿದೆ. ಇನ್ನೂ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗಾಗಿ ಶುದ್ಧೀಕರಣ ಘಟಕ ಅಳವಡಿಸಿ ಹಲವು ತಿಂಗಳು ಕಳೆದಿವೆ. ಆದರೆ,
ಯಂತ್ರದಲ್ಲಿನ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶುದ್ಧ ನೀರಿನಿಂದ ವಂಚಿತರಾಗುವಂತೆ ಮಾಡಿದೆ. ಘಟಕವನ್ನು ರಿಪೇರಿ ಮಾಡುವಲ್ಲಿ ಪಂಚಾಯತ ನಿರ್ಲಕ್ಷ ತೋರುತ್ತಿರುವುದೇ ಇದಕ್ಕೆ ಕಾರಣ. ವಯಕ್ತಿಕ ಶೌಚಾಲಯಗಳ ಪ್ರಮಾಣವೂ ಕಡಿಮೆ ಇದೆ. ಇನ್ನೂ ಸಂಗಮ್ ಗ್ರಾಮದಿಂದ ಹೆದ್ದಾರಿ ಅಂದಾಜು ಒಂದು ಕಿ.ಮೀ ಅಂತರ ಇದ್ದು, ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸರಿಯಾದ ಸಾರಿಗೆ ಬಸ್ ವ್ಯವಸ್ಥೆಯೂ ಇಲ್ಲ. ಹೀಗಾಗಿ ಭಾಲ್ಕಿ ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕೆ
ಹೋಗುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ಇದೆ.
“ಕಂದಾಯ ಸಮಸ್ಯೆಗಳ ಇತ್ಯರ್ಥ’
ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಮುಖ್ಯವಾಗಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಇತ್ಯರ್ಥ ಹೆಚ್ಚು ಆದ್ಯತೆ ನೀಡುವುದು ಸರ್ಕಾರದ ನಿರ್ದೇಶನವಾಗಿದೆ. ಸಮಸ್ಯೆಗಳನ್ನು ಆಲಿಸುವುದರ ಜತೆ ಸ್ಥಳದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ತುರ್ತು ಸ್ಪಂದನೆ ನೀಡಲಾಗುತ್ತಿದೆ. ರೈತರ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವುದು, ನಕಾಶೆ ಸೇರಿ ಇತರ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗುವುದು. ಜತೆಗೆ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಬೆಳೆ ಪರಿಹಾರ, ಪಡಿತರ ಚೀಟಿ ಮತ್ತಿತರ ಸೌಲಭ್ಯಗಳಲ್ಲಿನ ಸಮಸ್ಯೆಗೆ ಸ್ಪಂದಿಸುವುದು. ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸುವುದು ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶವಾಗಿದೆ.
ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಅಪ್ರಯೋಜಕವಾಗಿದೆ. ಗ್ರಾಮಸ್ಥರಿಗೆ ಶುದ್ದ ನೀರು ಬೇಡಿಕೆ ಜತೆಗೆ ಗ್ರಾಮದಿಂದ ಸಂಗಮ್ ಕ್ರಾಸ್‌ವರೆಗಿನ ಹದಗೆಟ್ಟ ರಸ್ತೆ ರಿಪೇರಿ ನಿರ್ಮಾಣ ತುರ್ತು ಆಗಬೇಕಿದೆ. ಜತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕಿದೆ. ಗ್ರಾಮ ವಾಸ್ತವ್ಯದಿಂದ ನಮ್ಮೂರಿನ ಸಮಸ್ಯೆಗಳಿಗೆ ಪರಿಹಾರ ಸಿಗಲಿ ಎಂಬುದು ನಮ್ಮ ಆಶಯ.
ಪ್ರಕಾಶ ಎಸ್. ಗ್ರಾಮಸ್ಥ, ಸಂಗಮ್
*ಶಶಿಕಾಂತ ಬಂಬುಳಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.