ರಂಗೋಲಿ ಸ್ಪರ್ಧೆಯಿಂದ ಭಾವೈಕ್ಯ ವೃದ್ದಿ

Team Udayavani, Jan 6, 2022, 2:53 PM IST

20rangoli

ಬೀದರ: ರಂಗೋಲಿ ಬಿಡಿಸುವಿಕೆ ಇದೊಂದು ಜನಪದ ಸಂಸ್ಕೃತಿಯಾಗಿದ್ದು, ರಂಗೋಲಿ ಸ್ಪರ್ಧೆಯಿಂದ ರಾಷ್ಟ್ರೀಯ ಭಾವೈಕ್ಯ ವೃದ್ಧಿಸುತ್ತದೆ ಎಂದು ಗ್ರಾಮೀಣ ಠಾಣೆಯ ಪಿಎಸ್‌ಐ ಸುವರ್ಣಾ ನುಡಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಮಂಗಳವಾರ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರ ನಾಗಪೂರ, ಜಿಲ್ಲಾ ಜಾನಪದ ಪರಿಷತ್‌ ಮಹಿಳಾ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಮಹಿಳೆಯರು ರಂಗೋಲಿ ಹಾಕಿ, ಮನೆಯಂಗಳ ಪರಿಶುದ್ಧವಾಗಿಡುತ್ತಿದ್ದರು. ಆದರೆ, ಇಂದು ಆಧುನಿಕತೆ ಭರಾಟೆಯಲ್ಲಿ ರಂಗೋಲಿ ಬಿಡಿಸುವ ಸಂಸ್ಕೃತಿಯಿಂದ ಮಹಿಳೆಯರು ದೂರ ಸರಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಪರ್ಧೆಯಲ್ಲಿ ಮಹಿಳೆಯರಿಂದ ಒಂದಕ್ಕಿಂತ ಒಂದು ಚೆಂದದ ರಂಗೋಲಿ ಅರಳಿವೆ. ಸೇನಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್‌ ರಾವತ್‌, ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಹಾಗೂ ಇನ್ನಿತರ ದೇಶಭಕ್ತಿಯನ್ನು ಸಾರುವ ಚಿತ್ತಾಕರ್ಷಕ ರಂಗೋಲಿ ಬಿಡಿಸಿ ಸಭಿಕರ ಗಮನ ಸೆಳೆದಿರುವುದು ಅತ್ಯಂತ ಖುಷಿ ತಂದಿದೆ ಎಂದು ಹೇಳಿದರು.

ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ಡಾ| ರಾಜಕುಮಾರ ಹೆಬ್ಟಾಳೆ ಮಾತನಾಡಿ, ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಇಡೀ ದೇಶದಾದ್ಯಂತ ರಂಗೋಲಿ ಸ್ಪರ್ಧೆ ನಡೆಯುತ್ತಿದೆ. ಇಂದು ಬೀದರನಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ಉತ್ಸಾಹದಿಂದ ಮಹಿಳೆಯರು ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇದರಿಂದ ರಾಜ್ಯ, ರಾಷ್ಟ್ರ ಹಾಗೂ ಜಿಲ್ಲಾಮಟ್ಟದಲ್ಲಿ ಮಹಿಳೆಯರು ಗುರುತಿಸುವಂತಾಗಲಿದೆ. ಹಳ್ಳಿ ಸಂಸ್ಕೃತಿಯ ಪ್ರತೀಕವಾದ ರಂಗೋಲಿ ಬಿಡಿಸುವಿಕೆ ಹಾಗೂ ಇನ್ನಿತರ ಜನಪದ ಸಂಸ್ಕೃತಿಯ ವೃದ್ಧಿಯೇ ನಮ್ಮ ಧ್ಯೇಯವಾಗಿದೆ. ಹಲವಾರು ಜನಪದ ಕಲಾವಿದರಿಗೆ ಇದುವರೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಾಶನ ಮಾಡಿಸಲಾಗಿದೆ ಎಂದರು.

ಹಿರಿಯ ಸಾಹಿತಿ ಭಾರತಿ ವಸ್ತ್ರದ ಅಧ್ಯಕ್ಷತೆ ವಹಿಸಿದ್ದರು. ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಡಾ| ನೀಲಗಂಗಾ ಹೆಬ್ಟಾಳೆ, ಮಹಿಳಾ ಚಿಂತಕಿ ಸವಿತಾ ಹೆಗ್ಗೆ ವೇದಿಕೆಯಲ್ಲಿದ್ದರು. ಡಾ| ಸುನಿತಾ ಕೂಡ್ಲಿಕರ್‌ ಮಾತನಾಡಿದರು. ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಡಾ| ಮಹಾನಂದ ಮಡಕಿ ವಂದಿಸಿದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.