ಏಸು ಕ್ರಿಸ್ತರ ಪ್ರಾರ್ಥನೆಯಿಂದ ನೆಮ್ಮದಿ: ಶಾಸಕ ಖೇಣಿ
Team Udayavani, Dec 16, 2017, 12:57 PM IST
ಹುಮನಾಬಾದ: ಬೀದರ ದಕ್ಷಿಣ ಕ್ಷೇತ್ರದಲ್ಲಿ 180 ಕ್ರೆಸ್ತ್ ಧರ್ಮದ ಪ್ರಾರ್ಥನಾ ಮಂದಿರಗಳಿವೆ. ಏಸು ಕ್ರಿಸ್ತರ ಆಶೀರ್ವಾದದಿಂದ ನನ್ನ ಕ್ಷೇತ್ರದ ಜನರು ಸುಖ ಶಾಂತಿ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ ಎಂದು ಶಾಸಕ ಅಶೋಕ ಖೇಣಿ ಹೇಳಿದರು.
ತಾಲೂಕಿನ ಮನ್ನಾಏಖೇಳಿ ಗ್ರಾಮದ ನೂರ್ ಭವನದಲ್ಲಿ ಕರ್ನಾಟಕ ಮಕ್ಕಳ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್ ಉತ್ಸವ 2017ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಂತಿಪ್ರಿಯನಾದ ಏಸು ಕ್ರಿಸ್ತರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ, ಸಮಾಧಾನ ಪ್ರಾಪ್ತಿಯಾಗುತ್ತದೆ. ಸಮಾಜವನ್ನು ಒಳ್ಳೆಯದಾರಿಗೆ ತರುವಲ್ಲಿ ಶ್ರಮಿಸಿದ್ದಾರೆ. ಸಮಾಜದ ಜನರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಅಲ್ಲದೇ ಉತ್ತಮ ಸಂಸ್ಕೃತಿ, ಆಚಾರ ವಿಚಾರ, ನಡೆನುಡಿ ಬಗ್ಗೆ ಮಕ್ಕಳಿಗೆ ತಿಳಿಹೇಳಿ ಅಜ್ಞಾನದಿಂದ ಸುಜ್ಞಾನದ ಕಡೆಗೆ ತರಬೇಕು ಎಂದು ಹೇಳಿದರು.
ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ವಿರೋಧ ಪಕ್ಷದವರಿಗೆ ಕಾಣುತ್ತಿಲ್ಲ. ವಿರೋಧ ಪಕ್ಷದವರು ಕೇವಲ ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಾ ದಿನ ಕಳೆಯುತ್ತಿದ್ದಾರೆ. ಸಮಸ್ಯೆಗೆ ಸ್ಪಂದಿಸಬೇಕಾದ ಪಕ್ಷಗಳು ಬಡಜನರ ದಿಕ್ಕು ತಪ್ಪಿಸುವಂತಹ ಕೆಲಸಗಳಲ್ಲಿ ನಿರತರಾಗಿವೆ. ಕ್ಷೇತ್ರದ ಜನರು ಎಲ್ಲ ವಿಷಯಗಳನ್ನು ಸರಳವಾಗಿ ಅರ್ಥೈಸಿಕೊಳ್ಳುವಂತರಿದ್ದಾರೆ ಎಂದು ಹೇಳಿದರು.
ನಾನು ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಆಸ್ವಾಸನೆಗಳನ್ನು ಸಂಪೂರ್ಣವಾಗಿ ಈಡೇರಿಸಿದ್ದೇನೆ. ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯ ಕಲ್ಪಸುವ ನಿಟ್ಟಿನಲ್ಲಿ 1048 ಕೋಟಿ ರೂ. ವೆಚ್ಚದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಿದ್ದೇವೆ. ಇನ್ನೂ ಕೆಲ ಕಾಮಗಾರಿಗಳು ಪ್ರಗತಿಯಲ್ಲಿವೆ. ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತವನ್ನಾಗಿ ಮಾಡಲಾಗಿದೆ ಎಂದು ಹೇಳಿದರು.
ಕ್ಷೇತ್ರದ ಪ್ರತಿ ಗ್ರಾಪಂ ಮಟ್ಟದಲ್ಲಿ ನಾನು ಮಾಡಿರುವ ಅಭಿವೃದ್ಧಿ ಯೋಜನೆಗಳ ಸಮಗ್ರ ಮಾಹಿತಿ ಕರಪತ್ರಗಳು ಮತ್ತು ಬ್ಯಾನರ್ ಅಳವಡಿಸಿ ಆಯಾ ಗ್ರಾಮದಲ್ಲಿನ ಪ್ರಗತಿ ಹಾಗೂ ಖರ್ಚು ಮಾಡಿದ ಅನುದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಸುಳ್ಳು ಹೇಳಿ ರಾಜಕೀಯ ಮಾಡುವರಿಗೆ ಜನರೇ ಉತ್ತರ ನೀಡುತ್ತಾರೆ. ಕ್ಷೇತ್ರದ ಮತದಾರರ ಆಶೀರ್ವಾದದಿಂದ
ನಾನು ಶಾಸಕನಾಗಿದ್ದೇನೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದರು.
ಕರ್ನಾಟಕ ಮಕ್ಕಳ ಪಕ್ಷದ ರಾಜ್ಯಾಧ್ಯಕ್ಷ ನಾಗೇಂದ್ರ ಪ್ರಸಾದ ಮಾತನಾಡಿ, ವಿರೋಧ ಪಕ್ಷದವರು ಸಭೆ ಸಮಾರಂಭಗಳಿಗಾಗಿ
ಹಣ ಕೊಟ್ಟು ಜನರನ್ನು ಕರೆತರುತ್ತಾರೆ. ಆದರೆ ಶಾಸಕ ಅಶೋಕ ಖೇಣಿ ಅವರ ಕಾರ್ಯಕ್ರಮಕ್ಕೆ ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಸ್ವಂತ ಹಣ ಖರ್ಚು ಮಾಡಿಕೂಂಡು ಬರುತ್ತಾರೆ ಎಂದು ಹೇಳಿದರು.
ಸಮಾಜದ ಮೇಲ್ವಿಚಾರಕರಾದ ನೆಲ್ಸನ್ ಸುಮಿತ್ರಾ, ಎಂ.ಪಿ. ಜಯಪಾಲ, ಎಸ್.ಡಿ.ಎ ಅಧ್ಯಕ್ಷ ವೈಜಿನಾಥ, ಫಾದರ್ ಆನಂದಕುಮಾರ ಕೆ. ಸಾನ್ನಿಧ್ಯ ವಹಿಸಿದ್ದರು. ಮುಖಂಡ ಶಿವರಾಜ ಪಾಟೀಲ ಐಸಪುರ, ಸಂದೀಪ ಉದಗೀರೆ. ಮಾರ್ಟಿನ್, ಸಂತೋಷ ಹಳ್ಳಿಖೇಡ, ಸಲಮಪಾಶಾ, ಶಿವಕುಮಾರ, ಯೇಸುದಾಸ ಅಮಲಾಪುರೆ, ಪ್ರಸಾದ ಮನ್ನಳ್ಳಿ ಸೇರಿದಂತೆ ಮಕ್ಕಳ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.