ಸ್ಮಶಾನ ಭೂಮಿ ಮಂಜೂರಾತಿಗೆ ಆಗ್ರಹ
Team Udayavani, May 14, 2022, 4:56 PM IST
ಭಾಲ್ಕಿ: ಪಟ್ಟಣದಲ್ಲಿ ಮಾದಿಗ ಸಮಾಜಕ್ಕೆ 4 ಎಕರೆ ಸ್ಮಶಾನ ಭೂಮಿ ಮಂಜೂರಾತಿ ಮಾಡುವಂತೆ ಮಾದಿಗ ದಂಡೋರ (ಮಾದಿಗ ಮೀಸಲಾತಿ ಹೋರಾಟ ಸಮಿತಿ) ತಾಲೂಕು ಘಟಕ ಒತ್ತಾಯಿಸಿದೆ.
ಈ ಕುರಿತು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಾದಿಗ ದಂಡೋರ ಸಮಾಜದ ತಾಲೂಕು ಅಧ್ಯಕ್ಷ ದತ್ತಾತ್ರಿ ಜ್ಯೋತಿ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಮಾದಿಗ ಸಮಾಜದ ಜನ ಕಳೆದ ಸುಮಾರು 50-60 ವರ್ಷಗಳಿಂದ ಸರ್ವೇ ನಂ.411/*/1 ರ ಜಮೀನಿನಲ್ಲಿ ಶವ ಸಂಸ್ಕಾರ ಮಾಡಿಕೊಂಡು ಬರುತ್ತಿದ್ದಾರೆ. ಸುಮಾರು 2700 ಜನಸಂಖ್ಯೆ ಹೊಂದಿರುವ ಮಾದಿಗ ಸಮಾಜಕ್ಕೆ ಕೇವಲ 1 ಎಕರೆ ಸ್ಮಶಾನ ಭೂಮಿ ಗುರುತಿಸಲಾಗಿದೆ. ಜತೆಗೆ ಇರುವ 1 ಎಕರೆ ಜಮೀನು ಕೂಡ ತಗ್ಗು ದಿನ್ನೆಗಳಿಂದ ಕೂಡಿದೆ. ಅಲ್ಲದೇ ಚರಂಡಿ ನೀರು ಸ್ಮಶಾನ ಭೂಮಿಗೆ ಸೇರುತ್ತಿರುವುದರಿಂದ ಶವ ಸಂಸ್ಕಾರ ಮಾಡಲು ಅನಾನುಕೂಲವಾಗಿದೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಮಾದಿಗ ಸಮಾಜದ ಜನಸಂಖ್ಯೆ ಆಧರಿಸಿ 4 ಎಕರೆ ಜಮೀನು ಮಾದಿಗ ಸಮಾಜದ ಸ್ಮಶಾನಕ್ಕೆ ಗುರುತಿಸಿ ಕೊಡಬೇಕು. ವಿಳಂಬ ಮಾಡಿದರೆ ಬರುವ ದಿನಗಳಲ್ಲಿ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ಬಿಜೆಪಿ ಚುನಾವಣಾ ರಣತಂತ್ರ: ತ್ರಿಪುರಾ ಸಿಎಂ ಬಿಪ್ಲಬ್ ದೇಬ್ ರಾಜೀನಾಮೆ
ಈ ವೇಳೆ ದೇವಿದಾಸ ರೇಷ್ಮೆ, ಸಂಜುಕುಮಾರ ಮೇತ್ರೆ, ರಾಜಶೇಖರ ರೇಷ್ಮೆ, ರಾಹುಲ ಮೇತ್ರೆ, ಸಿಮನ್ ಹಾಲೇಪುರ್ಗೆ, ಅರುಣ ರೇಷ್ಮೆ, ಶಾಮರಾವ್ ಥಮಗ್ಯಾಳೆ, ಮಹೇಶ್, ಗುಂಡಮ್ಮ ದುಬಲಗುಂಡೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.