ಹಕ್ಕು-ಕರ್ತವ್ಯ ಪಾಲನೆ ಜವಾಬ್ದಾರಿ
Team Udayavani, Feb 21, 2018, 1:05 PM IST
ಬೀದರ: ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿ ಕೊಳ್ಳುವುದು ಮತ್ತು ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ರಾಘವೇಂದ್ರ ಅವರು ಹೇಳಿದರು.
ಮೈಲೂರಿನ ಬಾಲಕಿಯರ ಬಾಲ ಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಅರಿವು ಹಾಗೂ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ಜೀವನ ನಿರ್ವಹಣೆಗೆ ಸಂವಿಧಾನದಲ್ಲಿ ದೇಶದ ಎಲ್ಲಾ ನಾಗರಿಕರಿಗೂ ಮೂಲಭುತ ಹಕ್ಕುಗಳನ್ನು ನೀಡಲಾಗಿದೆ. ಇದರ ಉಪಯೋಗ ಎಲ್ಲರಿಗೂ ದೊರೆಯಬೇಕು. ಇವುಗಳನ್ನು ಉಲ್ಲಂಘಿ ಸುವುದು ಅಪರಾಧವಾಗುತ್ತದೆ ಎಂದರು.
ಬಾಲ ನ್ಯಾಯ ಮಂಡಳಿ ಅಧ್ಯಕ್ಷರು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ-2 ಉಜ್ವಲಾ
ವೀರಣ್ಣ ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ಕಾನೂನಿನ ಬಗ್ಗೆ ಮಾಹಿತಿ ಪಡೆಯಬೇಕು. ಪರೀಕ್ಷೆಗೂ
ಮುನ್ನ ಸಾಕಷ್ಟು ಪೂರ್ವಸಿದ್ಧತೆಗಳನ್ನು ಮಾಡಿಕೊಂಡಲ್ಲಿ ಹೆಚ್ಚು ಅಂಕಗಳನ್ನುಗಳಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ
ಕಿವಿಮಾತು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಐ.ಎಸ್. ಪಾಂಚಾಳ, ಬಾಲ ನ್ಯಾಯ ಮಂಡಳಿ ಸದಸ್ಯರು ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕವಿತಾ ಹುಷಾರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ
ಆಡಳಿತಾಧಿಕಾರಿ ಶಂಕ್ರೆಪ್ಪಾ ಜನಕಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.