45.69 ಲಕ್ಷ ರೂ. ಮೌಲ್ಯದ ಸ್ವತ್ತು ವಾಪಸ್
Team Udayavani, Jul 20, 2017, 2:37 PM IST
ಬೀದರ: ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಜೂನ್ ತಿಂಗಳ ಅವಧಿಯಲ್ಲಿ ನಡೆದ 118 ಕಳ್ಳತನ ಪ್ರಕರಣ ಪೈಕಿ 47 ಪ್ರಕರಣ ಪತ್ತೆ
ಹಚ್ಚಿಸಿರುವ ಪೊಲೀಸರು, 45.69 ಲಕ್ಷ ಮೌಲ್ಯದ ಸ್ವತ್ತನ್ನು ಮರಳಿ ಮಾಲೀಕರಿಗೆ ಒಪ್ಪಿಸಿದ್ದಾರೆ.
ನಗರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಾಪರ್ಟಿ ರಿಟರ್ನ್ ಪರೇಡ್‌ನಲ್ಲಿ ಕಲಬುರಗಿ ವಲಯ
ಐಜಿಪಿ ಅಲೋಕಕುಮಾರ ಸ್ವತ್ತನ್ನು ಮಾಲೀಕರಿಗೆ ಹಸ್ತಾಂತರಿಸಿದರು. ಜನವರಿಯಿಂದ ಜೂನ್ ಅವಧಿಯಲ್ಲಿ ಜಿಲ್ಲೆಯ ವಿವಿಧ
ಠಾಣೆಗಳಲ್ಲಿ 118 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹಳೆ ಮತ್ತು ಹೊಸ ಪ್ರಕರಣಗಳು ಸೇರಿ ಒಟ್ಟು 47 ಪ್ರಕರಣಗಳು ಪತ್ತೆ ಹೆಚ್ಚಲಾಗಿದ್ದು, 70.52 ಲಕ್ಷ ಮೌಲ್ಯದ ಸ್ವತ್ತು ದೋಚಲಾಗಿತ್ತು. ತನಿಖೆ ಕೈಗೊಂಡು 45,69,100 ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ಚಿನ್ನ, ಬೆಳ್ಳಿ ಆಭರಣ ಸೇರಿ ಇತರೆ ವಸ್ತುಗಳನ್ನು ಜಪ್ತಿ ಮಾಡಿ ವಾರಸುದಾರರಿಗೆ ಹಿಂತಿರುಗಿಸಲಾಗಿದೆ.
ಸುಲೆಗೆ (ಚೈನ್ ಪ್ರಕರಣ) 16, ಹಗಲು ಕಳವು 6, ರಾತ್ರಿ ಕಳ್ಳತನ 18, ಲಾರಿ, ಕಾರು ತಲಾ ಒಂದು ಪ್ರಕರಣ, ಮೋಟಾರು ಸೈಕಲ್
15, ಮೋಟಾರು ಬಿಡಿ ಭಾಗ ಪ್ರಕರಣ 2 ಎರಡು ಸೇರಿ 47 ಪ್ರಕರಣ ಭೇದಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪ್ರಕಾಶ ನಿಕ್ಕಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿ ಕಾರಿ ಶ್ರೀಹರಿಬಾಬು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.