ಬೀದರ್ ನಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ: ಭಯ ಪಡುವ ಅಗತ್ಯವಿಲ್ಲ ಎಂದ ಮೊದಲ ಫಲಾನುಭವಿ
Team Udayavani, Jan 16, 2021, 3:52 PM IST
ಬೀದರ್: ವಿಶ್ವಕ್ಕೆ ಕಾಡುತ್ತಿರುವ ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಕೋವಿಡ್ -19 ವ್ಯಾಕ್ಸಿನ್ ಕೊಡುವ ಅಭಿಯಾನಕ್ಕೆ ಶನಿವಾರ ಬ್ರೀಮ್ಸ್ ಆವರಣದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಲಸಿಕೆ ನೀಡುವಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಚಾಲನೆ ನೀಡಿದರು. ಬ್ರಿಮ್ಸ್ ಡಿ ದರ್ಜೆ ನೌಕರರಾದ ಇಂದುಮತಿ ಅವರು ಮೊದಲ ಫಲಾನುಭವಿಯಾಗಿ ವ್ಯಾಕ್ಸಿನ್ ಪಡೆದುಕೊಂಡರು.
ಲಸಿಕೆ ಪಡೆದ ಇಂದುಮತಿ ಅವರನ್ನು 30 ರಿಂದ 40 ನಿಮಿಷಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇಡಲಾಗಿತ್ತು. ಲಸಿಕೆ ಪಡೆಯುವ ಮುನ್ನ ಫಲಾನುಭವಿಗಳಿಗೆ ಮತ್ತು ಲಸಿಕೆ ಕೊಡುವ ತಜ್ಞರಿಗೆ ಸ್ಥಳದಲ್ಲಿದ್ದ ಡಿಸಿ ರಾಮಚಂದ್ರನ್ ಅವರು ಧ್ಯೇರ್ಯ ತುಂಬಿದರು.
ಇದನ್ನೂ ಓದಿ: ಮಂಡ್ಯ: ಡಿ ಗ್ರೂಪ್ ನೌಕರನಿಗೆ ಮೊದಲ ಲಸಿಕೆ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ವಿ ವೆoಕಟೇಶ್
ಕೋವಿಡ್-19 ಲಸಿಕೆ ನೀಡುವುದರಿಂದ ಯಾವುದೇ ಅಡ್ಡ ಪರಿಣಾಮ ಸಂಭವಿಸಿದಲ್ಲಿ, ಇದರ ನಿರ್ವಹಣೆಗಾಗಿ ಪ್ರತಿ ಲಸಿಕಾ ವಿತರಣಾ ಕೇಂದ್ರದಲ್ಲಿ ತಜ್ಞವೈದ್ಯರನ್ನೊಳಗೊಂಡ (AEFI) ನಿರ್ವಹಣಾ ಘಟಕಗಳನ್ನು ರಚಿಸಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 72 ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, ಮೊದಲನೇ ಹಂತದಲ್ಲಿ 6 ಕೇಂದ್ರಗಳಲ್ಲಿ ಪ್ರತಿ ಕೇಂದ್ರದಲ್ಲಿ ತಲಾ 100 ಜನ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದ್ದು. ಮೊದಲ ಹಂತದಲ್ಲಿ ಒಟ್ಟು 600 ಮಂದಿಗೆ ಶನಿವಾರ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ. ರೆಡ್ಡಿ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಇದುವರೆಗೆ 10240 ಮಂದಿಯನ್ನು ನೋಂದಣಿ ಮಾಡಿಕೊಂಡಿದ್ದು, ಮೊದಲು ಆರೋಗ್ಯ ಕಾರ್ಯಕರ್ತರಿಗೆ, ನಂತರ ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ನಂತರ ಸರ್ಕಾರದ ಸೂಚನೆ ನೀಡಿದ ಬಳಿಕ ಜಿಲ್ಲೆಯ ಉಳಿದ ಇತರರಿಗೆ ಲಸಿಕೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹಿಂದೂಪರ ಮಾತನಾಡಿದ್ದಕ್ಕೆ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ :ಯತ್ನಾಳ ಆಕ್ರೋಶ
ಬ್ರಿಮ್ಸ್ ಸೇರಿದಂತೆ ಔರಾದ್, ಹುಮನಬಾದ್, ಭಾಲ್ಕಿ, ಬಸವಕಲ್ಯಾಣ, ಆಣದೂರ ಆಸ್ಪತ್ರೆಗಳಲ್ಲಿ ಕೂಡ ಲಸಿಕಾ ನೀಡುವ ಕಾರ್ಯ ನಡೆಯುತ್ತಿದೆ. ಲಸಿಕೆ ವಿತರಣೆಯ ನಿರ್ವಹಣೆಗಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಕಂಟ್ರೋಲ್ ರೂಮ್ ತೆರೆಯುವ ಪ್ರಕ್ರಿಯೆ ನಡೆಯುತ್ತಿದೆ.
ಕೋವಿಡ್ ಪ್ರಕರಣಗಳು ಪತ್ತೆಯಾದಾಗಿನಿಂದ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಾ ಬಂದಿದ್ದೇನೆ. ಕೊರೊನಾ ಲಸಿಕೆ ಪಡೆಯುವ ಮುನ್ನ ಸ್ವಲ್ಪ ಹೆದರಿಕೆ ಆಗಿತ್ತು. ಆದರೆ, ಮೊದಲು ಫಲಾನುಭವಿಯಾಗಿ ಪಡೆದ ನಂತರ ಯಾವುದೇ ಆತಂಕ ಇಲ್ಲ. ಜ್ವರ, ತಲೆ ನೋವು ಇಂಥ ಯಾವುದೇ ಅಡ್ಡ ಪರಿಣಾಮವೂ ನನಗೆ ಆಗಿಲ್ಲ. ಹಾಗಾಗಿ ಜನ ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಲಸಿಕೆ ಪಡೆಯಬೇಕು.
– ಇಂದುಮತಿ
ಲಸಿಕೆ ಪಡೆದ ಮೊದಲ ಡಿ ಗ್ರೂಪ್ ನೌಕರರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.