ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

Team Udayavani, Oct 19, 2021, 2:37 PM IST

19

ಮಸ್ಕಿ: ಕಳೆದ ಮೂರು ದಶಕಗಳ ಬೇಡಿಕೆಯಾದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯತವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಮಾದಿಗ, ಮೋಚಿ, ಸಮಗಾರ ಸೇರಿದಂತೆ ದಲಿತ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ ಬೃಹತ್‌ ರ್ಯಾಲಿ ನಡೆಸಲಾಯಿತು.

ಪಟ್ಟಣದ ಗಾಂಧಿ ನಗರದಿಂದ ಆರಂಭವಾದ ರ್ಯಾಲಿ ಅಶೋಕ ವೃತ್ತ, ಡಾ| ಖಲೀಲ್‌ ವೃತ್ತ, ದೈವದಕಟ್ಟೆ, ಕನಕವೃತ್ತದ ಮೂಲಕ ಸಾಗಿ ಹಳೆಯ ಬಸ್‌ ನಿಲ್ದಾಣದ ಬಳಿಯ ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಸ್ಥಳಕ್ಕೆ ಆಗಮಿಸಿತು. ರ್ಯಾಲಿಯುದ್ದಕ್ಕೂ ಸದಾಶಿವ ಆಯೋಗದ ವರದಿಗೆ ಜಾರಿಗೆ ವಿಳಂಬ ಮಾಡುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟ ಸಮಿತಿ ಮುಖಂಡರು ಮಾತನಾಡಿ, ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯವನ್ನು ಕೇಳಲು ಕಳೆದ 30 ವರ್ಷಗಳಿಂದ ಬೀದಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅಂದಿನಿಂದ ಈವರೆಗೆ ನಮ್ಮನ್ನಾಳಿರುವ ಸರ್ಕಾರಗಳು ಹೋರಾಟವನ್ನು ಕಡೆಗಣಿಸಿವೆ. ಆದ್ದರಿಂದ ನಮ್ಮ ಹೋರಾಟದ ರೋಪರೇಷೆಗಳನ್ನು ಬದಲಿಸಿಕೊಂಡು ವಿಧಾನಸೌಧದ ಮೂರನೇ ಮಹಡಿಗೆ ಹೋರಾಟ ಮಾಡೋಣ ಎಂದು ಕರೆ ನೀಡಿ ಚುನಾಯಿತ ಜನಪ್ರತಿನಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ನ್ಯಾ| ಸದಾಶಿವ ಆಯೋಗದ ವರದಿ ಸಂವಿಧಾನ ಬದ್ಧವಾಗಿದೆ. ವರದಿಯನ್ನು ವಿರೋಧಿಸುವವರು ಸಂವಿಧಾನದ ವಿರೋಧಿಗಳು. ರಾಜ್ಯದಲ್ಲಿ ಪ್ರತಿನಿತ್ಯ ದಲಿತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯತ್ತಿವೆ. ಆದರೆ ಸರ್ಕಾರಗಳು ಮಾತ್ರ ಇದನ್ನು ನೋಡಿಕೊಂಡು ಸುಮ್ಮನೆ ಕುಳಿತಿವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಎಲ್ಲ ರಾಜಕೀಯ ಪಕ್ಷಗಳು ವರದಿ ಜಾರಿ ಬಗ್ಗೆ ಹೇಳುತ್ತಿವೆ ಹೊರತು ಜಾರಿ ಮಾಡಲು ಮುಂದೆ ಬರುತ್ತಿಲ್ಲ. ಕೂಡಲೇ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಲಿಂಗಸಗೂರಿನ ಸಹಾಯಕ ಆಯುಕ್ತ ರಾಹುಲ್‌ ಸಂಕನೂರು ಆಗಮಿಸಿ ಮನವಿ ಸ್ವೀಕರಿಸಿದರು. ದಲಿತ ಸಾಹಿತಿ ದಾನಪ್ಪ ನಿಲೋಗಲ್‌, ಮುಖಂಡರಾದ ದೊಡ್ಡಪ್ಪ ಮುರಾರಿ, ಎಚ್‌.ಬಿ.ಮುರಾರಿ, ಪಾಮಯ್ಯ ಮುರಾರಿ, ದುರಗಪ್ಪ ಗುಡಗಲದಿನ್ನಿ, ದೊಡ್ಡ ಕರಿಯಪ್ಪ, ಹನುಮಂತಪ್ಪ ಮೋಚಿ, ಹನುಮಂತಪ್ಪ ಮುದ್ದಾಪೂರ, ಹನುಮಂತಪ್ಪ ಪರಾಪೂರ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪೂರ, ತಿಕ್ಕಯ್ಯ ಬಿ. ಮಲ್ಲಪ್ಪ ಗೋನಾಳ, ಹನುಮಂತಪ್ಪ ಮೋಚಿ, ಮೌನೇಶ ಮುರಾರಿ, ಅಶೋಕ ಮುರಾರಿ, ದುರ್ಗರಾಜ ವಟಗಲ್‌, ಬಸವರಾಜ ಉದ್ಬಾಳ್‌, ಸಂತೋಷ ಹಿರೇದಿನ್ನಿ ಸೇರಿದಂತೆ ಮಾದಿಗ, ಛಲುವಾದಿ, ಸಮಗಾರ, ಮೀಸಲಾತಿ ಒಳಪಡುವ ಸಮುದಾಯಗಳು, ಮಹಿಳೆಯರು ಹಾಗೂ ಯುವಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.