ಶಿಕ್ಷಕರಾಗಿ ಗಮನ ಸೆಳೆದ ಸಚಿವ ಪ್ರಭು ಚವ್ಹಾಣ
Team Udayavani, Aug 24, 2021, 5:37 PM IST
ಔರಾದ: ನಿತ್ಯ ಸಾರ್ವಜನಿಕರ ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸದಲ್ಲಿ ತಲ್ಲೀನರಾಗುತ್ತಿದ್ದ ಸಚಿವ ಪ್ರಭು ಚವ್ಹಾಣ ಸೋಮವಾರ ಶಾಲಾ
ಪ್ರಾರಂಭೋತ್ಸವ ನಿಮಿತ್ತ ವಿದ್ಯಾರ್ಥಿಗಳಿಗೆ ಶಿಕ್ಷಕರಾಗಿ ಗಮನ ಸೆಳೆದರು.
ಔರಾದ ತಾಲೂಕು ಕೇಂದ್ರ ಸ್ಥಾನದಲ್ಲಿರುವ ಸರ್ಕಾರಿ ಪ್ರೌಢಶಾಲೆ ಹಾಗೂ ಆದರ್ಶ ಮಾದರಿ ಶಾಲೆಗಳಿಗೆ ಪಶು ಸಂಗೋಪನೆ ಹಾಗೂ ಬೀದರ
ಜಿಲ್ಲಾ ಉಸ್ತುವಾರಿ ಸಚಿವರೂ ಆದ ಚವ್ಹಾಣ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಸ್ವಾಗತಿಸಿದರು. ತರಗತಿಗೆ ತೆರಳಿ ಸಮಾಜ ವಿಜ್ಞಾನ ವಿಷಯದ ಬಗ್ಗೆ ಕೇಳಿದರು. ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸುವ ಜೊತೆಗೆ ಶಿಕ್ಷಣ ಪಡೆಯುವಂತೆ ಸಲಹೆ ನೀಡಿದರು.
ಇದನ್ನೂ ಓದಿ:ಅಪ‍್ಗಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವವರ ಸ್ಥಳಾಂತರಕ್ಕೆ ಒತ್ತು : ಹ್ಯಾರೀಸ್
ವಿದ್ಯಾರ್ಥಿಗಳು ತಮ್ಮ ಮನೆ ಹಾಗೂ ಓಣಿಯಲ್ಲಿ ಸ್ನೇಹಿತರಿಗೆ ಕಡ್ಡಾಯವಾಗಿ ಶಾಲೆಗೆ ಬರುವಂತೆ ಸಲಹೆ ನೀಡಿ, ಉತ್ತಮ ಶಿಕ್ಷಣ ನೀಡಲು ಶಿಕ್ಷಣ
ಇಲಾಖೆ ಸಿದ್ಧವಾಗಿದೆ. ಇಡೀ ವಿಶ್ವವನ್ನೇ ಕಾಡಿದ ಕೋವಿಡ್‌ದಿಂದ ಭೀತರಾಗದೇ ಎಚ್ಚರಿಕೆಯಿಂದ ಹೆಜ್ಜೆಯಿಟ್ಟು ಹೋರಾಡಬೇಕಿದೆ ಎಂದರು.
ವಿದ್ಯಾರ್ಥಿಗಳು ಹಾಗೂ ಪಾಲಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳವಂತೆ ಮನೆಯಲ್ಲಿ ತಿಳಿಸಿ. ಕುಟುಂಬದ ಸದಸ್ಯರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ ಎಂದು ಧೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.