ವೈಜ್ಞಾನಿಕ ಮನೋಭಾವನೆಗೆ ವಿಜ್ಞಾನ ಮೇಳ ಪೂರಕ
Team Udayavani, Sep 11, 2017, 11:59 AM IST
ಭಾಲ್ಕಿ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ವಿಜ್ಞಾನ ಮೇಳಗಳು ಪೂರಕವಾಗಿವೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಜ್ಞಾನ ಶಿಕ್ಷಕ ಪಂಡಿತ ಬಾಳೂರೆ ಅಭಿಪ್ರಾಯಪಟ್ಟರು.
ಪಟ್ಟಣದ ಖಡಕೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಬೀದರ ಜಿಲ್ಲಾ ಘಟಕದ ವತಿಯಿಂದ ರವಿವಾರ ನಡೆದ ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳು ಪ್ರತಿಭಾವಂತರಿದ್ದಾರೆ. ಅವರಲ್ಲಿರುವ ಪ್ರತಿಭೆ ಹೊರತರಲು ಇಂತಹ ವಿಜ್ಞಾನ ಮೇಳ ಆಯೋಜಿಸುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಪ್ರತಿ ವರ್ಷ ನಡೆಸುತ್ತಿರುವ ಜ್ಞಾನ
ಮೇಳ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುತ್ತಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಅವರಲ್ಲಿ ವೈಜ್ಞಾನಿಕ ಮನೋಭಾವ ತುಂಬಿ, ವಿದ್ಯಾರ್ಥಿಗಳಿಂದಲೇ ಹೊಸ ಆವಿಷ್ಕಾರ ರೂಪಿಸುವ ನಿಟ್ಟಿನಲ್ಲಿ ನಮ್ಮ ಶಿಕ್ಷಕರು ಕಾರಣಿಭೂತರಾಗಬೇಕು ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ತಜ್ಞ ಮನ್ಸೂರ್ ಆವಂಟಿ, ವಿಜ್ಞಾನ ಮೇಳದಲ್ಲಿ ಭಾಗವಹಿಸಿರುವ ತೀರ್ಪುಗಾರರು, ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಎಸ್.ಬಿ. ಸಜ್ಜನಶೆಟ್ಟಿ ಮಾತನಾಡಿ, ಜ್ಞಾನ ಮತ್ತು ವಿಜ್ಞಾನಗಳ ಸಂಗವೇ ಜ್ಞಾನ-ವಿಜ್ಞಾನ ಮೇಳವಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಜ್ಞಾನವನ್ನು ಇತರರಿಗೆ ಹಂಚಿ, ಅವರಿಂದ ಸಾಕಷ್ಟು ವಿಷಯ ಕಲಿಯುವುದೇ ಮೇಳದ ಉದ್ದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ತಾವು ತಯಾರಿಸಿಕೊಂಡು ಬಂದ ವಿಜ್ಞಾನ ವಸ್ತುಗಳ ಮಾದರಿ ಪ್ರದರ್ಶಿಸಿ, ಅವುಗಳಿಗೆ ವಿವರಣೆ ನೀಡಿದರು. ರೇವಣಸಿದ್ದಪ್ಪ ಜಲಾದೆ, ಮಹಿಪಾಲ ರೆಡ್ಡಿ, ವಿಜ್ಞಾನ ಸಂಪನ್ಮೂಲ ವ್ಯಕ್ತಿ ಮಾರುತಿ ಸಗರ, ಡಿ. ಸುಧಾಕರ, ವಿಠ್ಠಲ ದೇಶಪಾಂಡೆ, ಸುರೇಶ ಮಸೂಳೆ, ಸತೀಶ ಸಿದ್ದೇಶ್ವರೆ, ಬಸವಪ್ರಭು ಸೋಲಾಪುರೆ, ಕಿಶನರಾವ ಜಾಧವ, ರಾಜಕುಮಾರ ಹೂಗಾರ, ಶಿವಕುಮಾರ ಘಂಟೆ, ದಿಲೀಪ ಘಂಟೆ ಇದ್ದರು.
ಖಡಕೇಶ್ವರ ವಿದ್ಯಾಮಂದಿರದ ಕಾರ್ಯದರ್ಶಿ ಸುಧಾಕರ ದೆಶಪಾಂಡೆ ಸ್ವಾಗತಿಸಿದರು. ಮುಖ್ಯಶಿಕ್ಷಕ ಆನಂದ ಕಲ್ಯಾಣೆ ನಿರೂಪಿಸಿದರು. ಪ್ರಕಾಶ ರುದನೂರೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.