ಶಾಲೆ ಬಿಟ್ಟ  ಮಕ್ಕಳಿಗಾಗಿ ಹುಡುಕಾಟ!


Team Udayavani, Jan 8, 2022, 8:33 PM IST

ಸ್ಗಹಯತರೆಸಅ

ರಾಯಚೂರು: ಸರ್ಕಾರ 15-18 ವರ್ಷದವರೆಗೆ ಕೋವಿಡ್‌ ಲಸಿಕೆ ಹಾಕಲು ಆರಂಭಿಸಿದ್ದು, ಜಿಲ್ಲೆಯಲ್ಲಿ ಮಾತ್ರ ನಿರೀಕ್ಷಿತ ಮಟ್ಟದ ವೇಗ ಕಂಡು ಬರುತ್ತಿಲ್ಲ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಗೆ ಶಾಲೆ ಬಿಟ್ಟ ಮಕ್ಕಳ ಹುಡುಕಾಟದ ಹೆಚ್ಚುವರಿ ಕೆಲಸ ಶುರುವಾಗಿದೆ.

ಜಿಲ್ಲೆಯಲ್ಲಿ 1.14 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ, ಈವರೆಗೆ ಶೇ.47ರಷ್ಟು ಮಾತ್ರ ಗುರಿ ಸಾಧನೆ ಆಗಿದೆ. ಅಂದರೆ ಕಳೆದ ಮೂರು ದಿನಗಳಲ್ಲಿ ಅರ್ಧಕ್ಕಿಂತ ಕಡಿಮೆ ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಮಕ್ಕಳ ಸಂಖ್ಯೆ, ವಿವರ ಸುಲಭವಾಗಿ ಸಿಗುವುದರಿಂದ ಈ ಕೆಲಸ ತ್ವರಿತಗತಿಯಲ್ಲಿ ನಡೆಯಬಹುದು ಎಂದೇ ಅಂದಾಜಿಸಲಾಗಿತ್ತು.

ಆದರೆ, ಈಗಿನ ಪರಿಸ್ಥಿತಿ ಗಮನಿಸಿದರೆ, ಈ ಭಾಗದಲ್ಲಿ ಯಾವ ವಯಸ್ಸಿನವರಿಗೆ ಲಸಿಕೆ ನೀಡಬೇಕಾದರೂ ಪ್ರಯಾಸ ಪಡಲೇಬೇಕು ಎನ್ನುವ ಪರಿಸ್ಥಿತಿ ಇದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಜಂಟಿಯಾಗಿ ಈ ಕೆಲಸ ಮಾಡುತ್ತಿದ್ದು, ಶಾಲೆ, ಕಾಲೇಜುಗಳಿಗೆ ಹಾಜರಾಗುವ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಲಾಗುತ್ತಿದೆ. ಶಾಲೆಗೆ ಬರಲಾರದ ಪಾಲಕರಿಗೆ ಕರೆ ಮಾಡಿ ಕೂಡಲೇ ಲಸಿಕೆ ಹಾಕಿಸಲು ಸೂಚನೆ ಕೂಡ ನೀಡಲಾಗಿದೆ. ಅದರಂತೆ ಅನೇಕರು ಸ್ವಪ್ರೇರಣೆಯಿಂದ ಲಸಿಕೆ ಹಾಕಿಸಲು ಮುಂದೆ ಬರುತ್ತಿದ್ದಾರೆ. ಕೆಲವೆಡೆ ಪಾಲಕರೇ ಮುಂದೆ ನಿಂತು ಮಕ್ಕಳಿಗೆ ಲಸಿಕೆ ಹಾಕಿಸುತ್ತಿದ್ದಾರೆ.

ಆದರೆ, ಗ್ರಾಮೀಣ ಭಾಗದಲ್ಲಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಬಹುತೇಕ ಕಡೆ ಶಾಲೆ ಬಿಟ್ಟ ಮಕ್ಕಲ ಸಂಖ್ಯೆ ಹೆಚ್ಚಾಗಿದ್ದು, ಅವರಿಗಾಗಿ ಹುಡುಕಾಟ ಶುರುವಾಗಿದೆ. ಹೇಳಿ ಕಳುಹಿಸಿದರೂ ಮಕ್ಕಳು ಶಾಲೆ ಕಡೆ ಬರುತ್ತಿಲ್ಲ. ಇದು ಅಧಿ ಕಾರಿಗಳಿಗೆ ಕಿರಿ-ಕಿರಿ ಉಂಟು ಮಾಡುತ್ತಿದೆ. ಗುಳೆ ಸಮಸ್ಯೆ: ಇನ್ನೂ ಗ್ರಾಮೀಣ ಭಾಗದಲ್ಲಿ ಮಕ್ಕಳು 14-15 ವರ್ಷ ವಯಸ್ಸಾಗುತ್ತಿದ್ದಂತೆ ಬೇರೆ-ಬೇರೆ ನಗರಗಳಿಗೆ ಗುಳೆ ಹೋಗುವ ಪದ್ಧತಿ ಇಂದಿಗೂ ಜೀವಂತವಿದೆ. ಎಸ್ಸೆಸ್ಸೆಲ್ಸಿ ಮುಗಿಯುತ್ತಿದ್ದಂತೆ ಬೆಂಗಳೂರು, ಹೈದರಾಬಾದ್‌, ಮುಂಬೈ, ಪುಣೆ ಸೇರಿದಂತೆ ವಿವಿಧ ಮಹಾನಗರಗಳಿಗೆ ಗುಳೆ ಹೋಗುತ್ತಾರೆ.

ಅದರಲ್ಲೂ ದೇವದುರ್ಗ, ಲಿಂಗಸಗೂರು ತಾಲೂಕಿನ ತಾಂಡಾಗಳಲ್ಲಿ ವಲಸೆ ಪದ್ಧತಿ ಹೆಚ್ಚಾಗಿದೆ. ಈಗ ಶಿಕ್ಷಕರು ಮಕ್ಕಳ ಮಾಹಿತಿ ಪಡೆದು ಪಾಲಕರಿಗೆ ಕರೆ ಮಾಡಿ ಹೇಳುತ್ತಿದ್ದಾರೆ. ಸಾಧ್ಯವಾದರೆ ಅವರು ಇರುವ ಕಡೆಯೇ ವ್ಯಾಕ್ಸಿನೇಶನ್‌ ಮಾಡಿಸಿಕೊಳ್ಳಲು ತಿಳಿ ಹೇಳುತ್ತಿದ್ದಾರೆ. ಇನ್ನೂ ಈಗ ಹತ್ತಿ ಬಿಡಿಸುವ ಕೆಲಸಕ್ಕೆ ಮಕ್ಕಳನ್ನೆ ಕರೆದು ಹೋಗಲಾಗುತ್ತಿದೆ. ಕೆಲಸಕ್ಕೆ ಹೋದ ಮಕ್ಕಳಿಗಾಗಿ ಕಾದು ಕುಳಿತು ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಲಾಗುತ್ತಿದೆ.

ಶಾಲೆಗಳಿಗೆ ಬರುವ ಸಿಬ್ಬಂದಿ: ವ್ಯಾಕ್ಸಿನೇಶನ್‌ ಹಾಕಿಸಲು ಜಿಲ್ಲೆಯಲ್ಲಿ 66 ಕೇಂದ್ರಗಳನ್ನು ಗುರುತಿಸಲಾಗಿದೆ. ಅದರ ಜತೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ನೀಡಲು ಶಾಲೆಗಳಿಗೆ ಬರುತ್ತಿದ್ದಾರೆ. ಆದರೆ, ಶಾಲಾ-ಕಾಲೇಜುಗಳಲ್ಲಿ ಹಾಜರಾತಿ ಕಡ್ಡಾಯವಿರುವ ಮಕ್ಕಳಿಗೆ ಒಂದೇ ದಿನದಲ್ಲಿ ಲಸಿಕೆ ನೀಡಲಾಗಿದೆ. ಈಗ ನಿತ್ಯ ಆರೋಗ್ಯ ಇಲಾಖೆ ಸಿಬ್ಬಂದಿ ಬಂದು ಕುಳಿತರೂ ಲಸಿಕೆ ಪಡೆಯಲು ಮಕ್ಕಳೇ ಇರುವುದಿಲ್ಲ ಎನ್ನುವ ಸ್ಥಿತಿ ಇದೆ.

 

ಟಾಪ್ ನ್ಯೂಸ್

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.