ಎರಡನೇ ದಿನವೂ ಬಂದ್
Team Udayavani, Jan 10, 2022, 9:14 PM IST
ಯಾದಗಿರಿ: ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್‌ಗೆ ಬ್ರೇಕ್ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ಶನಿವಾರ ಹಾಗೂ ರವಿವಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಎರಡನೇ ದಿನವಾದ ರವಿವಾರವೂ ನಗರ ಸೇರಿದಂತೆ ಬಹುತೇಕ ಕಡೆ ಜನ ಹಾಗೂ ವಾಹನ ಸಂಚಾರ ಸ್ತಬ್ಧವಾಗಿತ್ತು.
ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರು ಜನ ಸಂಚಾರ ನಿಯಂತ್ರಿಸುತ್ತಿರುವ ದೃಶ್ಯ ಕಂಡು ಬಂದವು. ಕರ್ಫ್ಯೂ ಹಿನ್ನೆಲೆಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇನ್ನುಳಿದವುಗಳಿಗೆ ನಿರ್ಬಂಧ ಹೇರಿದ್ದರಿಂದ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಹೀಗಾಗಿ ಜನರು ಮಾರುಕಟ್ಟೆಯತ್ತ ಸುಳಿಯದ್ದರಿಂದ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಬೆರಳೆಣಿಕೆ ವಾಹನಗಳು ಸಂಚರಿಸುತ್ತಿರುವುದು ಹಾಗೂ ಜನರು ಮಾಸ್ಕ್ ಧರಿಸಿ ಸಂಚರಿಸುತ್ತಿರುವುದು ಕಂಡು ಬಂತು.
ಪ್ರತಿಯೊಂದು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಮಾಸ್ಕ್ ಧರಿಸುವಂತೆ ವಾಹನ ಚಾಲಕರಿಗೆ ತಿಳಿಹೇಳುತ್ತಿದ್ದರು. ಮಾಸ್ಕ್ ಹಾಕದೇ ವಾಹನ ಚಲಾಯಿಸಿಕೊಂಡು ಬಂದ ಹಲವು ಚಾಲಕರಿಗೆ ದಂಡ ವಿಧಿಸಿ ಎಚ್ಚರಿಸುತ್ತಿದ್ದರು. ಇದೇ ತರಹ ಹಲವು ವಾಹನ ವಶಕ್ಕೆ ಪಡೆದು ಪ್ರಕರಣ ಕೂಡ ದಾಖಲಿಸಿದ್ದಾರೆ. ಹಾಲು, ಹಣ್ಣು, ತರಕಾರಿ, ದಿನಸಿ ಅಂಗಡಿಗಳ ಮುಂದೆ ಅಷ್ಟೇನು ಜನ ಸಂದಣಿ ಕಂಡುಬರಲಿಲ್ಲ. ಒಟ್ಟಿನಲ್ಲಿ ಜನರು ವೀಕೆಂಡ್ ಕರ್ಫ್ಯೂಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿರುವುದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.