ಸೇವಾ ಭಾರತಿ ಕಾರ್ಯ ಮಾದರಿ: ಗುರುಪಾದ ಶ್ರೀ
Team Udayavani, Dec 4, 2021, 4:52 PM IST
ಶಹಾಪುರ: ಪ್ರತಿಯೊಬ್ಬರು ತಮ್ಮ ವೃತ್ತಿ ಜೀವನದ ಜೊತೆಗೆ ಸುತ್ತಲಿನವರ ಸಮಸ್ಯೆಗಳಿಗೆ ಸ್ಪಂದಿಸುವ ಕೈಲಾದ ಸಹಾಯ, ಸಹಕಾರ ನೀಡುವ ಗುಣ ಸ್ಫೂರ್ತಿದಾಯಕವಾದದು. ಅಂತಹ ಗುಣ ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಇಲ್ಲಿ ಸೇವಾ ಭಾರತಿ ಆಶ್ರಯದಲ್ಲಿ ಯುವಶಕ್ತಿ ಬೆಂಕಿಗಾಹುತಿಯಾದ ಮನೆಯೊಂದರ ಕುಟುಂಬಸ್ಥರಿಗೆ ನೂತನ ಮನೆ ನಿರ್ಮಿಸಿ ಕೊಡುವ ಮೂಲಕ ಮಾದರಿಯಾಗಿದ್ದಾರೆ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿ ತಿಳಿಸಿದರು.
ಇಲ್ಲಿನ ಗಂಗಾನಗರದ ಹಳಪೇಟೆಯಲ್ಲಿ ಬಡ ಕುಟುಂಬವೊಂದಕ್ಕೆ ಸಮಾಜದ ಸರ್ವರ ಸಹಕಾರದೊಂದಿಗೆ ಸೇವಾ ಭಾರತಿ ಆಶ್ರಯದಲ್ಲಿ ನಿರ್ಮಿಸಿದ ನೂತನ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕವಿತಾ ಸೋಮನಾಥ ಮತ್ತು ಅವರ ಚಿಕ್ಕಮಕ್ಕಳು ವಾಸಿಸುವ ಮನೆ ಕಳೆದ ಏಪ್ರಿಲ್ ತಿಂಗಳಲ್ಲಿ ಆಕಸ್ಮಿಕ ಬೆಂಕಿಗೆ ಆಹುತಿಯಾಗಿತ್ತು. ಇದನ್ನು ಕಂಡ ಸೇವಾ ಭಾರತಿ ಯುವಕರ ತಂಡ ತಕ್ಷಣ ಸ್ಪಂದಿಸಿ ಸಮಾಜಮುಖೀಯಾಗಿ ಸರ್ವರ ಸಹಕಾರದೊಂದಿಗೆ ಮನೆ ನಿರ್ಮಿಸಿ ಕೊಟ್ಟಿದ್ದು ಪ್ರೇರಣೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡ ಸು ಧೀರ ಚಿಂಚೋಳಿ, ಸೇವಾ ಭಾರತಿಯ ಪ್ರಮುಖ ವೀರೇಶ ಉಳ್ಳಿ, ಅನಿಲ್ ಗುಡಗುಂಟಿ, ಅರವಿಂದ ಉಪ್ಪಿನ್, ಅಬ್ದುಲ್ ಹಾದಿಮನಿ, ಮರೆಪ್ಪ ದೊಡ್ಡಮನಿ, ಅನಿಲ್ ಬಿರೆದಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.