![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 29, 2022, 1:00 PM IST
ಬೀದರ್: ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನೌನಿಹಾ ಮಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನ ಏಳು ಜನ ಮೃತಪಟ್ಟು, ಎಂಟಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ನಡೆದಿದೆ.
ಆಯೋಧ್ಯ ಸೇರಿದಂತೆ ತೀರ್ಥ ಯಾತ್ರೆಗೆ ಟ್ರಾವೆಲರ್ ನಲ್ಲಿ ತೆರಳಿದ್ದರು. ಮೃತಪಟ್ಟವರೆಲ್ಲರೂ ಬೀದರ ನಗರದ ಗುಂಪಾ ಪ್ರದೇಶದವರು ಆಗಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ
ಉತ್ತರ ಪ್ರದೇಶದ ತೀರ್ಥ ಕ್ಷೇತ್ರಗಳಿಗೆ ಇಲ್ಲಿನ ಗುಂಪಾದ ಎರಡು ಕುಟುಂಬಗಳು ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬಹರಾಯಿಚ್ ಕಡೆಯಿಂದ ಬರುತ್ತಿದ್ದ ಟ್ರಾವೆಲರ್ ಮತ್ತು ಲಖಿಮಪೂರ ಖಾರಿ ಕಡೆಯಿಂದ ಬರುತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಮೃತಪಟ್ಟವರನ್ನು ಶಿವಕುಮಾರ ಪೂಜಾರ (28), ಜಗದೇವಿ (52), ಮನ್ಮಥ (36), ಅನೀಲ ವಿಜಯಕುಮಾರ (30), ಸಂತೋಷ ಕಾಶಿನಾಥ (30), ಶಶಿಕಲಾ ರಾಜಕುಮಾರ (38) ಮತ್ತು ಸರಸ್ವತಿ ಜಗನ್ನಾಥ (47) ಎಂದು ಗುರುತಿಸಲಾಗಿದೆ
ಅಪಘಾತ: ಯೋಗಿ ಆದಿತ್ಯನಾಥ್ ಜತೆ ಮಾತನಾಡಿದ ಸಿಎಂ
ಬೆಂಗಳೂರು: ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಮಿನಿ ಬಸ್ (ಟಿಟಿ) ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟು 9 ಮಂದಿ ಗಾಯಗೊಂಡಿರುವ ಘಟನೆ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿರುವ ಮುಖ್ಯಮಂತ್ರಿಗಳು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ಭರದಿಂದ ರಕ್ಷಣ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಪ್ರವಾಸಿಗರ ಸುರಕ್ಷತೆ, ಅವರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಈಗಾಗಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.