![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 12, 2021, 3:29 PM IST
ಲಿಂಗಸುಗೂರು: ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರಿ ಶಾಲೆಗಳಲ್ಲಿ 1-8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಗೆ ಕೆಲ ಮಠಾಧಿಧೀಶರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಎಸ್‌ಎಫ್‌ಐ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟಿಸಿದರು.
ಕಲ್ಯಾಣ ಕರ್ನಾಟಕದ ಕೊಪ್ಪಳ, ಬೀದರ, ಯಾದಗಿರಿ, ಕಲಬುರಗಿ, ಬಳ್ಳಾರಿ ಮತ್ತು ರಾಯಚೂರು ಸೇರಿದಂತೆ ಬಿಜಯಪುರ ಜಿಲ್ಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿ ಹಿನ್ನೆಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ.
ಆದರೆ ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಮಠದ ಸ್ವಾಮಿಗಳು ಜಾತಿ ಮತ್ತು ಧಾರ್ಮಿಕತೆ, ನಂಬಿಕೆಯ ಹೆಸರಿನಲ್ಲಿ ಸರ್ಕಾರದ ಆದೇಶವನ್ನು ವಾಪಸ್ ಪಡೆಯಬೇಕೆಂದು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿರುವುದು ಸರಿಯಲ್ಲ. ಇದು ಖಂಡನೀಯ. ಅಪೌಷ್ಟಿಕತೆ ನಿವಾರಣೆಗಾಗಿ ಮೊಟ್ಟೆ ಮತ್ತು ಬಾಳೆಹಣ್ಣನ್ನು ವಿತರಣೆ ಮಾಡಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ತಾಲೂಕಾಧ್ಯಕ್ಷ ತಿಪ್ಪಣ್ಣ ನಿಲೋಗಲ್, ಮಹ್ಮದ್ ಹನೀಫ್, ಪ್ರಹ್ಲಾದ್ ಕೋಠಾ, ನಾಗರಾಜ್ ಕೋಠಾ, ಮುದ್ದೇಶ, ರಹೀಂ ಇನ್ನಿತರಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.