ಸಿದ್ದರಾಮಯ್ಯ ಧರ್ಮ ಒಡೆಯುವ ಕೆಲಸ ಮಾಡಿಲ್ಲ: ಮಾತೆ
Team Udayavani, Oct 28, 2018, 6:00 AM IST
ಬೀದರ್: ಮಾಜಿ ಸಿಎಂ ಸಿದ್ದರಾಮಯ್ಯ ಶರಣರ ಆದರ್ಶಗಳನ್ನು ಅಳವಡಿಸಿಕೊಂಡು ಲಿಂಗಾಯತ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಹಾಗೂ ನಮ್ಮ ಹೋರಾಟಕ್ಕೆ ಸ್ಪಂದಿಸಿ ಪ್ರತ್ಯೇಕ ಧರ್ಮದ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದಾರೆ. ಧರ್ಮ ಒಡೆಯುವ ಕೆಲಸ ಮಾಡಿಲ್ಲ ಎಂದು ಡಾ. ಮಾತೆ ಮಹಾದೇವಿ ಹೇಳಿದರು.
ಬಸವ ಕಲ್ಯಾಣದ ಮಹಾಮನೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿಲ್ಲ. ಇದೀಗ ಲಿಂಗಾಯತ ಧರ್ಮದ ಚೆಂಡು ಕೇಂದ್ರದ ಅಂಗಳದಲ್ಲಿದೆ. ಆದರೆ, ಎಬಿಸಿಡಿ ಗೊತ್ತಿಲ್ಲದ ವ್ಯಕ್ತಿಗಳು ಕೇಂದ್ರಕ್ಕೆ ತಪ್ಪು ಮಾಹಿತಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈವರೆಗೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಡಿಸೆಂಬರ್‌ನಲ್ಲಿ ಮೂರು ದಿನ ನಿರಂತರ ಹೋರಾಟ ನಡೆಸುವ ಮೂಲಕ ಕೇಂದ್ರದ ಗಮನ ಸೆಳೆಯುವುದಾಗಿ ತಿಳಿಸಿದರು.
ಲಿಂಗಾಯತ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿಲ್ಲ. ಬೀದರ ಜಿಲ್ಲೆಯಿಂದ ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಪ್ರಾರಂಭ ಮಾಡಲಾಗಿತ್ತು. ಬೀದರ ಜಿಲ್ಲೆಯಲ್ಲಿ ಅತಿಹೆಚ್ಚು ಕಾಂಗ್ರೆಸ್ ಶಾಸಕರಿದ್ದಾರೆ. ಅಲ್ಲದೆ, ಹೈಕ ಹಾಗೂ ಉತ್ತರ ಕರ್ನಾಟಕದಲ್ಲಿ ಹೋರಾಟದ ಪರಿಣಾಮ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವುದು ಖಂಡನೀಯ. ರಾಜಕೀಯಕ್ಕಾಗಿ ಹೇಳಿಕೆ ನೀಡಿ ಮತ ಪಡೆಯುವ ಉದ್ದೇಶ ಅವರದ್ದಾಗಿದೆ ಎಂದರು.
ಅನುಭವ ಮಂಟಪ:
ಬಸವ ಕಲ್ಯಾಣದಲ್ಲಿನ ಮೂಲ ಅನುಭವ ಮಂಟಪದ ಸಂಶೋಧನೆ ನಡೆಸಿ, ಶರಣರ ಚಿನಂತನೆ ಪರಿಕಲ್ಪನೆಯ ಹೊಸ ಅನುಭವ ಮಂಟಪವನ್ನು ಸರ್ಕಾರ ನಿರ್ಮಿಸಬೇಕು. ಈಗಿರುವ ಮಂಟಪ ಮೂಲ ಅನುಭವ ಮುಂಟಪ ಅಲ್ಲ. ಪುರಾತನ ಮೂಲ ಅನುಭವ ಮಂಟಪ ಎಲ್ಲಿದೆ ಎಂಬುದು ಕಲ್ಯಾಣದ ಜನರಿಗೆ ಗೊತ್ತಿದೆ. ಅಲ್ಲದೆ, ಹೈದ್ರಾಬಾದ್ ಮೂಲದ ವ್ಯಕ್ತಿ ಆ ಭೂಮಿಯನ್ನು ಮಾರಾಟ ಮಾಡಲು ಸಿದ್ಧವಿದ್ದು, ಸರ್ಕಾರ ಮುಂದೆ ಬಂದು ಆ ಭೂಮಿ ಖರೀದಿಸಿ 12ನೇ ಶತಮಾನದ ಶರಣರ ಚಿಂತನೆಯ ಅನುಭವ ಮಂಟಪ ನಿರ್ಮಿಸಬೇಕಿದೆ. ಈ ನಿಟ್ಟಿನಲ್ಲಿ 17ನೇ ಕಲ್ಯಾಣ ಪರ್ವದಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.