ಮಸ್ಕಿಯಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

Team Udayavani, Mar 30, 2021, 7:29 PM IST

gjhggnbv

ಮಸ್ಕಿ: ಬಿಜೆಪಿಯವರು ದುಡ್ಡಿದ್ರೇ ಎಲೆಕ್ಷನ್‌ ಮಾಡಬಹುದು ಅನ್ಕೊಂಡಿದ್ದಾರೆ. ಆದರೆ ಜನ ದುಡ್ಡಿಗೆ ಮಾರಕೊಳ್ಳೋದಿಲ್ಲ. ಅವರು ಸ್ವಾಭಿಮಾನಿಗಳು. ಅದರಲ್ಲೂ ಮಸ್ಕಿಯ ಜನ ಬಾಂಬೆಗೆ ಹೋಗಿ ವ್ಯಾಪರವಾದ ವ್ಯಕ್ತಿಯ ಬದಲು ಸ್ವಾಭಿಮಾನದ ವ್ಯಕ್ತಿಗೆ ಮತ ಹಾಕಲಿದ್ಧಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಸ್ಕಿ ವಿಧಾನ ಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಬಸನಗೌಡ ತುರುವಿಹಾಳ ಉಮೇದುವಾರಿಕೆ ಸಲ್ಲಿಕೆ ಬಳಿಕ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು. ಪ್ರತಾಪಗೌಡ ಪಾಟೀಲ್‌ ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. 25-30 ಕೋಟಿಗೆ ಮಾರಾಟವಾಗಿದ್ದಾರೆ. 2013ರಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವಾಗ ಇದು ಕಳ್ಳ ಎತ್ತು. ಇದರ ಮೇಲೆ ಒಂದು ಕಣ್ಣೀಡಿ ಎಂದು ರಾಯಚೂರು ಜಿಲ್ಲೆ ಕಾಂಗ್ರೆಸ್‌ ಮುಖಂಡರಿಗೆ ಹೇಳಿದ್ದೆ. ಆದರೆ ಅದೇ ನಿಜವಾಯ್ತು. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಪ್ರತಾಪಗೌಡ ಬಾಂಬೆಗೆ ಹೋದ್ರು. ದುಡ್ಡು ತಂಗೊಂಡು ಬಿಜೆಪಿ ಸೇರಿದ್ದಾರೆ. ಟಿಕೆಟ್‌ ಕೊಟ್ಟು ಗೆಲ್ಲಿಸಿದ ಪಕ್ಷಕ್ಕೆ ಮೋಸ ಮಾಡಿದ ಪ್ರತಾಪಗೌಡ ಸೋಲೋದು ಸತ್ಯ. ಬಿಜೆಪಿಯವರು ಹಣ ಕೊಟ್ಟು ಜನರನ್ನು ಖರೀದಿ ಮಾಡಲು ಹೊಂಚು ಹಾಕಿದ್ಧಾರೆ.

ಇದಕ್ಕಾಗಿಯೇ ಸಿಎಂ ಯಡಿಯೂರಪ್ಪನ ಮಗ ವಿಜಯೇಂದ್ರನಿಗೆ ಮಸ್ಕಿ ಜವಾಬ್ದಾರಿ ನೀಡಿದ್ದಾರೆ. ವಿಜಯೇಂದ್ರ ಅಂದ್ರೆ ದುಡ್ಡು. ದುಡ್ಡು ಇದ್ರೆ ಎಲೆಕ್ಷನ್‌ ಎನ್ನುವ ಭಾವನೆ ಬಿಜೆಪಿಯವರದ್ದಾಗಿದೆ. ಆದರೆ ಮಸ್ಕಿ ಕ್ಷೇತ್ರದಲ್ಲಿ ಇದೆಲ್ಲ ಉಲ್ಟಾ ಆಗಲಿದೆ. ಆರ್‌.ಬಸನಗೌಡ ತುರುವಿಹಾಳ ಬಡವ ಇದ್ದಾನೆ. ಹೀಗಾಗಿ ಜನ ಈ ಬಡವನಿಗೆ ವೋಟ್‌ ಹಾಕಲಿದ್ದಾರೆ. ಮಸ್ಕಿ ಕ್ಷೇತ್ರದ ಸ್ವಾಭಿಮಾನವನ್ನು ಜನ ಎತ್ತಿ ಹಿಡಿಯಲಿದ್ದಾರೆ.

ಬಸನಗೌಡ ಗೆದ್ದು ಶಾಸಕನಾದ್ರೆ ಅದು ಮಸ್ಕಿ ಜನರ ಸ್ವಾಭಿಮಾನದ ಸಂಕೇತವಾಗಲಿದೆ ಎಂದರು. ಅಪರೇಷನ್‌ ಕಮಲದ ಸಿಎಂ: ಮುಖ್ಯಮಂತ್ರಿ ಯಡಿಯೂರಪ್ಪಗೆ ಜನ ಅ ಧಿಕಾರ ಕೊಟ್ಟಿಲ್ಲ. ಹಿಂಬಾಗಿಲಿನಿಂದ, ಆಪರೇಷನ್‌ ಕಮಲದ ಮೂಲಕ ಸಿಎಂ ಆಗಿದ್ದಾರೆ. ಆದರೆ ಅ ಧಿಕಾರಕ್ಕೆ ಬಂದ ಬಳಿಕವಾದ್ರೂ ಜನಪರ ಕೆಲಸ ಮಾಡುವುದು ಬಿಟ್ಟು ಜನಪರ ಯೋಜನೆಗಳನ್ನೇ ಕಟ್‌ ಮಾಡ್ತಾ ಇದ್ದಾರೆ. ದೇಶದಲ್ಲಿ ಹೆಚ್ಚು ಸುಳ್ಳು ಹೇಳುವರು ಯಾರಾದ್ರೂ ಇದ್ರೆ ಮೋದಿ ಮತ್ತು ಯಡಿಯೂರಪ್ಪ ಎಂದ ಸಿದ್ದರಾಮಯ್ಯ, ಯಡಿಯೂರಪ್ಪ, ಮೋದಿ ಇದುವರೆಗೂ ಒಂದು ರೂಪಾಯಿ ಸಾಲಮನ್ನಾ ಮಾಡಿಲ್ಲ.

ಪ್ರಧಾನ ನರೇಂದ್ರ ಮೋದಿ ಕಪ್ಪು ಹಣ ತರ್ತೇನೆ, ಯುವಕರಿಗೆ ಉದ್ಯೋಗ ಕೊಡ್ತಿನಿ ಎಂದ ಯಾಮಾರಿಸಿದ್ರು. ಈಗ ರೈತರ ವಿರುದ್ಧ ಕಾನೂನು ಜಾರಿ ಮಾಡ್ತಾ ಇದಾರೆ ಹೀಗಾಗಿ ಬಿಜೆಪಿಗೆ ಯಾವ ಕಾರಣಕ್ಕೂ ವೋಟ್‌ ಕೊಡಬಾರದು ಎಂದು ಸಿದ್ದರಾಮಯ್ಯ ಹೇಳಿದರು. ಬಿಸಲಲ್ಲಿ ಇಷ್ಟು ಕಾದು ಕುಳಿತ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೋಟಿ ನಮಸ್ಕಾರ ಎಂದು ಮಾತು ಆರಂಭಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಸ್ಕಿ ಜನರ ತೀರ್ಪು ಮತ್ತು ಸ್ವಾಭಿಮಾನವನ್ನು ಸಾಯಿಸಿದ್ದಕ್ಕಾಗಿ ಈಗ ಉಪಚುನಾವಣೆ ಬಂದಿದೆ. ಪ್ರತಾಪಗೌಡಂದು ಯಾವಾಗಲೂ ಕಾಟ ಇದ್ದಿದ್ದೆ. ಗೆದ್ದ ಕೂಡಲೇ ಬಾಂಬೆಗೆ ಹೋಗಿ ವ್ಯಾಪಾರ ಆದ್ರೂ ಅದರ ಫಲವೇ ಈಗ ಚುನಾವಣೆ.

ಜನರ ನಂಬಿಗೆಕೆ ಮೋಸ ಮಾಡಿದ ಪ್ರತಾಪಗೌಡ ಪಾಟೀಲ್‌ಗೆ ಬುದ್ಧಿ ಕಲಿಸಬೇಕು. ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಬಸನಗೌಡ ತುರುವಿಹಾಳ ಬಸವಣ್ಣನ ತತ್ವ ಅನುಸರಿಸಿಕೊಂಡಿದ್ಧಾರೆ. ಇಡೀ ಕ್ಷೇತ್ರದ ಜನರ ಮನಸ್ಸು ಗೆದ್ದಿದ್ದಾರೆ. ಇಲ್ಲಿನ ಜನರು ಕೂಡ ಒಳ್ಳೆಯವರಿದ್ದು ಈ ಕ್ಷೇತ್ರ ಸಾಮಾನ್ಯ ಕ್ಷೇತ್ರವಾದರೆ ನಾನು ಮುಂದೊಂದು ದಿನ ಇಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ, ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಭೋಸರಾಜು, ಶಾಸಕ ಅಮರೇಗೌಡ ಪಾಟೀಲ್‌ ಬಯ್ನಾಪುರ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆ.ಕರಿಯಪ್ಪ ಮಾತನಾಡಿದರು. ಶಾಸಕರಾದ ಬಸನಗೌಡ ದದ್ದಲ, ಡಿ.ಎಸ್‌.ಹೂಲಗೇರಿ, ಮುಖಂಡರಾದ ಬಸನಗೌಡ ಬಾದರ್ಲಿ, ಮಲ್ಲಿಕಾರ್ಜುನ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರ ಸೇರಿ ಇದ್ದರು.

ಟಾಪ್ ನ್ಯೂಸ್

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.