ಹೈಕ ವಿಮೋಚನಾ ಹೋರಾಟಗಾರ ಸಿದ್ರಾಮಪ್ಪ ಗುಂಡಪ್ಪ ಕಣಜಿ ನಿಧನ
Team Udayavani, Jun 21, 2019, 5:36 AM IST
ಹುಮನಾಬಾದ: ಹೈದ್ರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯ ಹಿರಿಯ ಹೋರಾಟಗಾರ ಸಿದ್ರಾಮಪ್ಪ ಗುಂಡಪ್ಪ ಕಣಜಿ(91) ಅವರು ಬುಧವಾರ ಮಧ್ಯರಾತ್ರಿ ಮಹಾರಾಷ್ಟ್ರ ಸೊಲ್ಲಾಪೂರ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಐವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು-ಬಳಗ ಅಗಲಿದ್ದಾರೆ. 1928ರ ಏ.4ರಂದು ಗುಂಡಪ್ಪ ಮತ್ತು ಗಂಗಮ್ಮ ಅವರ ಹಿರಿಯ ಪುತ್ರರಾಗಿ ಜನಿಸಿದ ಸಿದ್ರಾಮಪ್ಪ ಅವರು, 1968ರಲ್ಲಿ ದುಬಲಗುಂಡಿಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿ, ಅದೇ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.
ನಂತರ ಅದೇ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಮತ್ತು 1985-86ನೇ ಸಾಲಿನಲ್ಲಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. 1947-48ಕ್ಕೂ ಮುನ್ನವೇ 18-20ನೇ ವರ್ಷದಲ್ಲಿಯೇ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದರು. ಸೆರೆವಾಸ ಅನುಭವಿಸಿದ್ದಾರೆ. ದುಧನಿ ಶಿಬಿರದಲ್ಲಿ ಭೂಗತ ಕಾರ್ಯ ನಿರ್ವಹಿಸಿದ ಪ್ರಮುಖರಲ್ಲಿ ಇವರೂ ಒಬ್ಬರು. ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಡಾ|ಚಂದ್ರಶೇಖರ ಪಾಟೀಲ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.