ಬೆಳೆಹಾನಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ
ಹಿಂದಿನ ವರ್ಷದ ಬೆಳೆ ವಿಮೆ ಪರಿಹಾರ ಹಣ ಸಿಕ್ಕಿರುವುದಿಲ್ಲ ಎಂದು ರೈತರು ತಿಳಿಸಿದರು
Team Udayavani, Oct 2, 2021, 5:28 PM IST
ಬೀದರ: ವರುಣನ ಆರ್ಭಟದಿಂದ ಬೆಳೆಹಾನಿಯಾಗಿರುವ ಬೀದರ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು. ನಂತರ ಮಳೆಯಿಂದಾದ ಹಾನಿ ಬಗ್ಗೆ ಪರಿಶೀಲಿಸಿದರು.
ತಾಲೂಕಿನ ಅಲ್ಲಾಪುರ ಮತ್ತು ನೇಮತಾಬಾದ್ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆಯಿಂದಾಗಿ ಸೋಯಾಬಿನ್ ಮತ್ತು ತೊಗರಿ ಬೆಳೆಗಳು ತೀವ್ರ ನಲುಗಿರುವುದನ್ನು ಖುದ್ದು ನೋಡಿ, ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬೆಳೆಹಾನಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರೈತರಿಗೆ ಧೈರ್ಯ ತುಂಬಿದರು.
ತಮ್ಮ ಒಟ್ಟು 10 ಎಕರೆ ಹೊಲದಲ್ಲಿನ ಸೋಯಾಬಿನ್ ಮತ್ತು ತೊಗರಿ ಬೆಳೆ ಹಾನಿಯಾಗಿದೆ. ಈ ವರ್ಷ ನಾವು ಬೆಳೆ ವಿಮೆ ಮಾಡಿಸಿಲ್ಲ ಎಂದು ಅಲ್ಲಾಪುರ ರೈತ ಬಸಪ್ಪ ಅವರು ಸಚಿವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು. ಬಳಿಕ ಸಚಿವರು, ಹತ್ತಿರದ ನೇಮತಾಬಾದ್ ಗ್ರಾಮಕ್ಕೆ ತೆರಳಿ ರೈತ ಶ್ರೀಕಾಂತ ಅವರ ಜಮೀನಿನಲ್ಲಿ ಉಂಟಾದ ಬೆಳೆಹಾನಿ ವೀಕ್ಷಣೆ ನಡೆಸಿದರು. ಮಳೆ ನೀರಿನಿಂದಾಗಿ ತಮ್ಮ ಜಮೀನಿನಲ್ಲಿ ಸೋಯಾಬಿನ್ ಮತ್ತು ತೊಗರಿ ಬೆಳೆಗಳು ಹಾಳಾಗಿವೆ
ಎಂದು ರೈತರು ತಿಳಿಸಿದರು.
ಪ್ರಾಥಮಿಕ ವರದಿ ಪ್ರಕಾರ ಅಲ್ಲಾಪುರ ಗ್ರಾಮದಲ್ಲಿ 225 ಹೆಕ್ಟೇರ್ ವಿಸ್ತೀರ್ಣ ಪ್ರದೇಶದಲ್ಲಿ ಮತ್ತು ನೇಮತಾಬಾದ್ ಗ್ರಾಮದಲ್ಲಿ ಒಟ್ಟು 340 ಹೆಕ್ಟೇರ್ ವಿಸ್ತೀರ್ಣ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಇದೇ ವೇಳೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಸಚಿವರಿಗೆ ಮಾಹಿತಿ ನೀಡಿದರು. ಹಿಂದಿನ ವರ್ಷದ ಬೆಳೆ ವಿಮೆ ಪರಿಹಾರ ಹಣ ಸಿಕ್ಕಿರುವುದಿಲ್ಲ ಎಂದು ರೈತರು ತಿಳಿಸಿದರು.
ಸಂಬಂಧಿಸಿದ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿದರು. ತಮಗೆ ಬೆಳೆ ವಿಮೆ ಪರಿಹಾರ ಸಿಕ್ಕಿಲ್ಲ ಎಂದು ಲಿಂಕ್ ಬಳಸಿ ಆನ್‌ಲೈನ್‌ದಲ್ಲಿ ದೂರು ಸಲ್ಲಿಸುವ ವ್ಯವಸ್ಥೆ ಮಾಡಲು ರೈತರಿಗೆ ಅಧಿಕಾರಿಗಳಿಂದ ತಿಳಿವಳಿಕೆ ಕೊಡಿಸಿ ಪರಿಹಾರಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.
ಕೌಠಾ ಸೇತುವೆಗೂ ಭೇಟಿ: ನಂತರ ಔರಾದ ತಾಲೂಕಿನ ಕೌಠಾ (ಬಿ) ಸೇತುವೆಗೆ ಭೇಟಿ ನೀಡಿ, ವಿಪರೀತ ಮಳೆಯಿಂದಾಗಿ ನೀರು ಸೇತುವೆ ಮೇಲಿನ ರಸ್ತೆ ಅಂಚಿನವರೆಗೆ ತಲುಪಿ ಹರಿಯುತ್ತಿದ್ದ ನೀರಿನ ಸೆಳವನ್ನು ವೀಕ್ಷಣೆ ನಡೆಸಿದರು. ಮೇಲಿನ ನದಿಗಳಿಂದ ನೀರು ಹರಿ ಬಿಟ್ಟಿರುವುದರಿಂದ ನದಿ ಆಸುಪಾಸಿನ ಜಮೀನಿಗೆ ನೀರು ನುಗ್ಗಿ ಕೌಠಾ ವ್ಯಾಪ್ತಿಯಲ್ಲಿ ಅಂದಾಜು 1500 ಹೆಕ್ಟೇರ್‌ನಲ್ಲಿ ಇದ್ದ ಬೆಳೆ ಸಂಪೂರ್ಣ ನೀರು ಪಾಲಾಗಿದೆ ಎಂದು ಸಚಿವರಿಗೆ ಸ್ಥಳೀಯ ಅಧಿ ಕಾರಿಗಳು ಮಾಹಿತಿ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಭು ಚವ್ಹಾಣ, ಮಹಾರಾಷ್ಟ್ರದ ಧನೇಗಾಂವ್ ಡ್ಯಾಮನಿಂದ ಮತ್ತು ಮಾಂಜ್ರಾ ನದಿಯಿಂದ ನೀರು ಬಿಟ್ಟಿರುವುದರಿಂದ ಸಂಗಮದಿಂದ ಕಂದಗೂಳ ತನಕ ಪೂರ್ಣ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಬೀದರ ಜಿಲ್ಲೆಯಲ್ಲಿ ಇದುವರೆಗೆ ಅಂದಾಜು 54,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿರುವ ಬಗ್ಗೆ ಅಂದಾಜಿಸಿ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಕೃಷಿ, ತೋಟಗಾರಿಕಾ ಇಲಾಖೆಯಿಂದ ಬೆಳೆಹಾನಿ ಸಮೀಕ್ಷೆ ಪ್ರಕ್ರಿಯೆ ಜಿಲ್ಲೆಯಲ್ಲಿ ಮುಂದುವರೆದಿದೆ ಎಂದರು. ಈ ವೇಳೆ ಸಹಾಯಕ ಆಯುಕ್ತೆ ಗರೀಮಾ ಪನ್ವಾರ, ತಹಶೀಲ್ದಾರ ಶಕೀಲ್, ಕೃಷಿ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್., ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕ ರವಿಕುಮಾರ ಬೂರೆ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.