ಮದ್ಯ ಮಾರಾಟ ನಿಷೇಧಕ್ಕೆ ಒತ್ತಾಯ
ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ
Team Udayavani, May 6, 2020, 12:36 PM IST
ಸಾಂದರ್ಭಿಕ ಚಿತ್ರ
ಸಿಂಧನೂರು: ತಾಲೂಕಿನಾದ್ಯಂತ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಕ್ರಾಂತಿಕಾರಿ ಯುವಜನ ರಂಗದ ನೇತೃತ್ವದಲ್ಲಿ ಮಹಿಳೆಯರು ಮಂಗಳವಾರ ತಹಶೀಲ್ದಾರ್ ಹಾಗೂ ಅಬಕಾರಿ ಸಬ್‌ಇನ್ಸ್‌ಪೆಕ್ಟರ್‌ಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಘಟನೆಯ ಗಂಗಮ್ಮ, ಕೋವಿಡ್ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರುವುದು ವಿಷಾದದ ಸಂಗತಿ. ಕೋವಿಡ್ ಲಾಕ್‌ಡೌನ್‌ನಿಂದ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರು ಅನ್ನ ಆಹಾರ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಕೊರತೆಯಿಂದ ಯಾತನೆ ಪಡುವಂತಾಗಿದೆ. ಇದರಿಂದ ರೈತರು, ಕೃಷಿಕೂಲಿ ಕಾರ್ಮಿಕರು, ಬಡವರು, ಸಣ್ಣ ಉದ್ಯಮಿಗಳು, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕುಶಲಕರ್ಮಿಗಳು ಸಂಕಷ್ಟದ ಕುಲುಮೆಯಲ್ಲಿ ಬೇಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸಬೇಕಾದ ಸರ್ಕಾರ ಮದ್ಯ ಮಾರಾಟದ ಅಂಗಡಿ ತೆರೆಯಲು ಅನುಮತಿ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ನಾಗರಾಜ ಪೂಜಾರ ಮಾತನಾಡಿ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ನೀಡಿದ ಆದೇಶವನ್ನು ಕೂಡಲೇ ರದ್ದು ಮಾಡಬೇಕು. ಸಿಂಧನೂರು ತಾಲೂಕು ಜಾಲವಾಡಿಗಿ ಸೇರಿ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಿದೆ. ದಿನವೂ ಸಣ್ಣಪುಟ್ಟ ಜಗಳಗಳು ನಡೆಯುತ್ತಿವೆ. ಇದರಿಂದ ಜನರಿಗೆ ನೆಮ್ಮದಿ ಇಲ್ಲದಂತಾಗಿದೆ. ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಬಸವರಾಜ ಏಕ್ಕಿ, ಬಿ.ಎನ್. ಯರದಿಹಾಳ, ಮೌನೇಶ ಜಾಲವಾಡಗಿ, ಮಲ್ಲಿಕಾರ್ಜುನ ಕುರುಗೋಡು, ಅಮೀನಸಾಬ ನದಾಫ್ ಸೇರಿದಂತೆ ಇತರ ಮಹಿಳೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.