ಬೋಧನೆಯೊಂದಿಗೆ ಸಮಾಜ ತಿದ್ದಿ
Team Udayavani, Sep 12, 2017, 12:15 PM IST
ಔರಾದ: ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆ ಮಾಡುವುದರೊಂದಿಗೆ ಸಮಾಜ ತಿದ್ದುವವನೇ ನಿಜವಾದ ಶಿಕ್ಷಕ ಎಂದು ಮಾಜಿ ಗೃಹ ಸಚಿವ ಆರ್. ಆಶೋಕ ಹೇಳಿದರು.
ಪಟ್ಟಣದ ಅಮರೇಶ್ವರ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಅವರು, ದಾರಿ ತಪ್ಪುತ್ತಿರುವ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುವುದರ ಜೊತೆಗೆ ಸಮಾಜದ ತಿರುಳು ಪರಿಚಯಿಸುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.
ಹಿಂದಿನ ಕಾಲದಲ್ಲಿ ಶಿಕ್ಷಕರನ್ನು ಕಂಡರೇ ಮಕ್ಕಳು ಭಯ ಪಡುತ್ತಿದ್ದರು. ಆದರೆ ಈಗ ಮಕ್ಕಳನ್ನು ಕಂಡು ಶಿಕ್ಷಕರೇ ಭಯದಿಂದ ಶಾಲೆಯಲ್ಲಿ ವಿದ್ಯಾಭಾಸ ಮಾಡಿಸುವಂತಹ ಅನಿವಾರ್ಯತೆ ಇದೆ. ಪರಿವರ್ತನೆ ಜಗದ ನಿಯಮವಾಗಿದೆ ಎಂದರು.
ನಾಡಿನ ಶಿಕ್ಷಕರ ಹಲವು ದಶಕಗಳ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗದೇ ಇರುವುದು
ದುರಾದೃಷ್ಟದ ಸಂಗತಿ. ಆದಿಕಾಲದಿಂದ ಆಧುನಿಕ ಯುಗದ ವರೆಗೂ ವಿಶ್ವದಲ್ಲಿ ಎಲ್ಲಾ ಸರ್ಕಾರಿ ನೌಕರರಿಗಿಂತ ಶಿಕ್ಷಕರಿಗೆ ಹೆಚ್ಚು ಗೌರವ ನೀಡಲಾಗುತ್ತಿದೆ. ಶಿಕ್ಷಕರು ತಮ್ಮ ಕರ್ತವ್ಯಕ್ಕೆ ಚುತಿ ಬರದಂತೆ ಜಾಗ್ರತೆಯಿಂದ ಕೆಲಸ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಗಡಿ ತಾಲೂಕಿನಲ್ಲಿ ಶಿಕ್ಷಕ ದಿನವನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಶಾಸಕ ಪ್ರಭು ಚವ್ಹಾಣ ಅವರ ಕಾಳಜಿ ನಿಜಕ್ಕೂ ಅನನ್ಯವಾದದ್ದು. ಇವರಂತೆ ನಾನೂ ಕೂಡ ನಮ್ಮ ಕ್ಷೇತ್ರದಲ್ಲಿ ಶಿಕ್ಷಕರ ದಿನಾಚರಣೆ ಮಾಡಿ ಗುರು ವಂದನೆ ಸಲ್ಲಿಸುವುದಾಗಿ ಭರವಸೆ ನೀಡಿದರು. ಶಾಸಕ ಪ್ರಭು ಚವ್ಹಾಣ ಮಾತನಾಡಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ತಾಲೂಕಿನಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಣೆ ಮಾಡಬೇಕೆನ್ನುವ ಉದ್ದೇಶದಿಂದ 7 ವರ್ಷಗಳಿಂದ ಶಿಕ್ಷಕ ಹಾಗೂ ಮಕ್ಕಳ ದಿನವನ್ನು ಅದ್ಧೂರಿಯಾಗಿ ಆಚರಿಲಾಗುತ್ತಿದೆ. ಅದರಂತೆ ಕೇವಲ ಶೇ.34ಕ್ಕೆ ಸೀಮಿತವಾಗಿದ್ದ ತಾಲೂಕಿನ ಫಲಿತಾಂಶ ಹಂತ ಹಂತವಾಗಿ ಸುಧಾರಣೆಯಾಗಿ ಇದೀಗ ಶೇ.74ಕ್ಕೆ ಬಂದಿದೆ ಎಂದು ಹೇಳಿದು.
ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ದೇವರು, ಶಿವನಾಂದ ಶಿವಾಚಾರ್ಯ ಸ್ವಾಮೀಜಿ ತಮಲೂರ, ಶಿಕ್ಷಣಾಧಿಕಾರಿ ಚವ್ಹಾಣ ಶೆಟ್ಟಿ, ಜಿಪಂ ಸದಸ್ಯ ಮಾರುತಿ ಚವ್ಹಾಣ, ವೀಣಾ ಮಾಣಿಕ, ಅನೀಲಗುಂಡಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬಾಬುರಾವ್ ಮಲ್ಕಾಪುರೆ, ಸುಭಾಶ ಕಲ್ಲೂರ ತಾಲೂಕಿನ ವಿವಿಧ ಶಾಲೆಯ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.