ವರ್ಗವಾದ ಎಸ್‌ಪಿ ದೇವರಾಜ್‌ಗೆ ಬೀಳ್ಕೊಡುಗೆ
Team Udayavani, Aug 4, 2018, 11:28 AM IST
ಬೀದರ: ಜಿಲ್ಲೆಯ ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದ್ದು, ಬೀದರ ನನ್ನ ವೃತ್ತಿ ಜೀವನದಲ್ಲಿ ಬಹಳ ಸಂತೋಷ ನೀಡಿದ ಜಿಲ್ಲೆಯಾಗಿದೆ ಎಂದು ಬೀದರನಿಂದ
ವರ್ಗಾವಣೆಗೊಂಡ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ನನ್ನ ಅವಧಿಯಲ್ಲಿ ಪೊಲೀಸ್ ಇಲಾಖೆಗೆ ಘನತೆ ಗೌರವ ತರುವಂತಹ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಂದೇ ಕುಟುಂಬದ ಸದಸ್ಯರೆಂದು ಭಾವಿಸಿ ಎಲ್ಲರಿಗೂ ಸಹಾಯ ಮಾಡಿದ್ದೇನೆ. ಠಾಣೆಗಳಲ್ಲಿ ಶುದ್ಧ ಕುಡಿವ ನೀಡಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಇಲಾಖೆಯಲ್ಲಿ ಅನೇಕ ಬದಲಾವಣೆ ತರುವ ಮೂಲಕ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಬುನಾದಿ ಹಾಕಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸಮಯದಲ್ಲಿ ಯಾವುದಾದರೂ ಘಟನೆಗಳು ಸಂಭವಿಸಿದೆ ಕೂಡಲೆ ಸ್ಥಳಕ್ಕೆ ಭೇಟಿ ನೀಡಿ
ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿದ್ದು, ಪೊಲೀಸ್ ಸಿಬ್ಬಂದಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಿದ್ದೇನೆ. ಅಲ್ಲದೇ ಎಲ್ಲ ಸಂದರ್ಭದಲ್ಲಿ ಮಾಧ್ಯಮದವರು ಕೂಡ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸೆಲ್ವಮಣಿ ಹಾಗೂ ಹೆಚ್ಚುವರಿ ಎಸ್‌ಪಿ ಶ್ರೀಹರಿ ಬಾಬು ಅವರು, ಎಸ್‌ಪಿ ಡಿ.ದೇವರಾಜ ಅವರು ಜಿಲ್ಲೆಯ ಜನರೊಂದಿಗೆ ಬೆರೆತು ಉತ್ತಮ ಕೆಲಸ ನಿರ್ವಹಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುತ್ತಲೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿದ್ದಾರೆ. ಸೂಕ್ಷ್ಮಾ ಘಟನೆಗಳನ್ನು ಕೂಡ ಶಾಂತಿಯಿಂದ ನಿಭಾಯಿಸುವ ಮೂಲಕ ಕಾನೂನು ರಕ್ಷಣೆ ಮಾಡಿದ್ದಾರೆ. ಅನೇಕ ಘಟನೆಗಳಲ್ಲಿ ಲಾಠಿ ಹಿಡಿದು ಕೂಡ ಕಾನೂನು ಮೀರುವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಇಲಾಖೆಯ ಗೌರವ ಹೆಚ್ಚಿದ್ದಾರೆ ಎಂದು ಹೇಳಿದರು. ಭಾಲ್ಕಿ ಡಿವೈಎಸ್‌ಪಿ ವೆಂಕನಗೌಡ ಪಾಟೀಲ, ಶಶಿಕಾಂತ ಮಳ್ಳಿ, ಬಲಭೀಮ ಕಾಂಬಳೆ, ಹುಮನಾಬಾದ ಸಿಪಿಐ ಜೆ.ಎಸ್. ನ್ಯಾಮಗೌಡರ, ಪೊಲೀಸ್ ಪೇದೆ ಶಕೀಲ್ ಐ.ಎಸ್. ಮಾತನಾಡಿದರು. ಇದೇ ವೇಳೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಡಿ.ದೇವರಾಜ ಅವರನ್ನು ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.