ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಘೋಷಣೆ ನಿರೀಕ್ಷೆ ಹುಸಿ


Team Udayavani, Nov 17, 2018, 3:09 PM IST

bid-1.jpg

ಬೀದರ: ಸತತ ಬರಕ್ಕೆ ತುತ್ತಾಗುತ್ತಿರುವ ಬೀದರ ಜಿಲ್ಲೆಗೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುತ್ತಾರೆ ಎಂಬ ಜಿಲ್ಲೆಯ ಜನರ ನಿರೀಕ್ಷೆ ಹುಸಿಯಾಗಿದೆ. ಸದ್ಯ ಘೋಷಣೆ ಮಾಡಿದ ಯೋಜನೆಗಳಾದರು ಪ್ರಸಕ್ತ ವರ್ಷದಲ್ಲಿ ಜಾರಿಗೆ ಬರುತ್ತವೆಯೇ ಎಂಬ ಚರ್ಚೆಗಳು ಎಲ್ಲಡೆ ಕೇಳಿ ಬರುತ್ತಿವೆ.

ನೀರಾವರಿ: ಜಿಲ್ಲೆಯಲ್ಲಿ ಸೂಕ್ತ ನೀರಾವರಿ ಯೋಜನೆಗಳು ಇಲ್ಲದ ಕಾರಣ ಇಲ್ಲಿನ ರೈತರು ಪ್ರತಿ ವರ್ಷ ಸಂಕಷ್ಟ ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೂಡ ಈ ಬಗ್ಗೆ ಚರ್ಚೆ ನಡೆದಿದ್ದು, ಜಿಲ್ಲೆಗೆ ನೀರಾವರಿ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಜಿಲ್ಲೆಯ ಇಬ್ಬರು ಸಚಿವರು ಕೂಡ ಸಭೆಯಲ್ಲಿ ನೀರಾವರಿ ಯೋಜನೆಗಳ ಅಗತ್ಯತೆ ಕುರಿತು ಕೂಡ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಇಬ್ಬರು ಸಚಿವರು ಸರ್ಕಾರದ ಗಮನ ಸೆಳೆದು ಜಿಲ್ಲೆಯ ರೈತರಿಗೆ ನೀರಾವರಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ನೀರಿನ ಕೊರತೆ: ಕಾರಂಜಾ ಜಲಾಶಯ ಸ್ಥಾಪನೆಯಾಗಿದ್ದೇ ರೈತರಿಗಾಗಿ. ಆದರೆ, ಇಂದಿಗೂ ಅದರ ಉದ್ದೇಶ ಮಾತ್ರ ಈಡೇರಿಲ್ಲ. ಜಲಾಶಯದಲ್ಲಿ ಸಂಗ್ರಹ ಆಗುವ ನೀರು ಬೀದರ ನಗರ ಸೇರಿದಂತೆ ಎರಡು ತಾಲೂಕುಗಳು ಹಾಗೂ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕೆಲಸ ನಿರ್ವಹಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕಾರಂಜಾ ಜಲಾಶಯಕ್ಕೆ ನೀರು ಹರಿದು ಬಂದಿಲ್ಲ. ಇರುವ ಮೂರು ಟಿಎಂಸಿ ಅಡಿ ನೀರಿನಲ್ಲಿ ಈಗಾಗಲೇ ವಿವಿಧಡೆ ಬೇಡಿಕೆ ಅನುಸಾರ ಹರಿಬಿಡಲಾಗಿದೆ. ಸದ್ಯ ಜಿಲ್ಲೆಯಲ್ಲಿನ ರೈತರು ನೀರಿಗಾಗಿ ಹುಡುಕಾಟ ಶುರು ಮಾಡಿದ್ದಾರೆ. ಕೊಳವೆ ಬಾವಿಗಳು ಬತ್ತುತ್ತಿದ್ದು, ತೆರೆದ ಬಾವಿಗಳಲ್ಲಿ ನೀರು ಖಾಲಿ ಆಗುತ್ತಿವೆ. ಹೊಸ ಕೊಳವೆ ಬಾವಿ ತೋಡಿಸುತ್ತಿರುವ ಜನರಿಗೆ 600 ಅಡಿ ಆಳದಲ್ಲಿ ಕೂಡ ನೀರು ಲಭ್ಯ ಆಗುತ್ತಿಲ್ಲ ಎಂಬ ಮಾಹಿತಿ ಜನರನ್ನು ದಿಗಿಲು ಬಡೆದಂತೆ ಮಾಡಿದೆ.

ಸಚಿವರು-ಶಾಸಕರು ಶ್ರಮಿಸಲಿ: ಸದ್ಯ ಜಿಲ್ಲೆಯಲ್ಲಿ ಇಬ್ಬರು ಪ್ರಭಾವಿ ಸಚಿವರು ಇದ್ದಾರೆ. ಅಲ್ಲದೆ, ಕಾಂಗ್ರೆಸ್‌ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರು ಸೇರಿದಂತೆ ಪ್ರಭಾವಿ ಶಾಸಕರು ಇದ್ದಾರೆ. ಪ್ರತಿ ವರ್ಷ ಬರ ಅನುಭವಿಸುತ್ತಿರುವ ಜಿಲ್ಲೆಗೆ ಮುಕ್ತಿ ದೊರಕಿಸುವ ಕೆಲಸ ಇವರು ಮಾಡಬೇಕಾಗಿದೆ. ಜಿಲ್ಲೆಯ ಬಹುತೇಕ ಜನರು ಕೃಷಿ ಅವಲಂಬಿತರಾಗಿದ್ದಾರೆ. ಜಿಲ್ಲೆಯಲ್ಲಿ ಹೇಳಿಕೊಳ್ಳುವಂತ ಕಾರ್ಖಾನೆಗಳು ಇಲ್ಲ.ಯುವಕ ಕೈಗೆ ಉದ್ಯೋಗ ಇಲ್ಲದೆ ಖಾಲಿ ಇರುವ ಯುವಕರ ಸಂಖ್ಯೆ ಹೆಚ್ಚಿದೆ. ಹೊಲದಲ್ಲಿ ಕೃಷಿ ಮಾಡಲು ನೀರು ಇಲ್ಲ. ಇತ್ತ ಕೈಗೆ ಕೆಲಸ ಇಲ್ಲದ ಕಾರಣ ಯುವ ಜನತೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಗಮನ ಸೆಳೆದು ಜಿಲ್ಲೆಗೆ ವಿಶೇಷ ಪ್ಯಾಕ್‌ ತರುವ ಮೂಲಕ ಜಿಲ್ಲೆಯ ಎಲ್ಲ ಭಾಗದಲ್ಲಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಂದಾಬೇಕು ಎಂಬ ಆಗ್ರಹ ಜಿಲ್ಲೆಯ ಜನರು ಮಾಡುತ್ತಿದ್ದಾರೆ.

ನಾಲ್ಕು ದಿನಕ್ಕೆ ಕುಡಿಯುವ ನೀರು: ಸದ್ಯ ಕಾರಂಜಾ ಜಲಾಶಯದಿಂದ ಹುಮನಾಬಾದ, ಚಿಟಗುಪ್ಪ ಪಟ್ಟಣ ಸೇರಿದಂತೆ ವಿವಿಧಡೆ ನೀರು ಹರಿಸಲಾಗುತ್ತಿದ್ದು, ನಾಲ್ಕು ದಿನಕ್ಕೆ ಒಂದು ಬಾರಿ ನೀರು ಪೂರೈಸಲಾಗುತ್ತಿದೆ. ಸದ್ಯ ನಾಲ್ಕು ದಿನಕ್ಕೆ ನೀಡು ಬಿಡುತ್ತಿರುವ ಪುರಸಭೆ ಮುಂದಿನ ಬೇಸಿಗೆಯಲ್ಲಿ ಎಷ್ಟು ದಿನಕ್ಕೆ ಒಮ್ಮೆ ನೀರು ಸರಬರಾಜು ಮಾಡುತ್ತಾರೊ ಎಂದು ಆತಂತಕ್ಕೆ ಒಳಗಾಗಿದ್ದಾರೆ.

ಗೋದಾವರಿ ಹರಿದು ಹೋಗುವ ನೀರಿನಲ್ಲಿ ಜಿಲ್ಲೆಗೆ ದೊರೆಯಬೇಕಾದ ಪ್ರಮಾಣ ಬಳಸಿಕೊಂಡರೆ ರೈತರು ನಿರಾವರಿ ಕೃಷಿ ಮಾಡಬಹುದಾಗಿದೆ. ಅಲ್ಲದೆ, ನೀರಿಗೂ ಸಮಸ್ಯೆ ಉದ್ಬವವಾಗುವುದಿಲ್ಲ. ಎಂಬುದು ಅನೇಕರ ಅಭಿಪ್ರಾಯ.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.