ಶಾಸಕ ಈಶ್ವರ ಖಂಡ್ರೆಗೆ ಶ್ರೀಗಳಿಂದ ಸನ್ಮಾನ
ಮೊದಲ ಬಾರಿಗೆ ಇಷ್ಟು ದಿನ ಕ್ಷೇತ್ರದ ಜನರಿಂದ ದೂರ ಉಳಿಯುವಂತಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.
Team Udayavani, Jun 22, 2021, 7:36 PM IST
ಭಾಲ್ಕಿ: ಮಠಾಧಿಧೀಶರ ಆಶೀರ್ವಾದ ಹಾಗೂ ಕ್ಷೇತ್ರದ ಕಾರ್ಯಕರ್ತರ, ಅಭಿಮಾನಿಗಳ ಪ್ರಾರ್ಥನೆ, ಹಾರೈಕೆಯಿಂದ ಕೋವಿಡ್ ಸೋಂಕಿನಿಂದ ಗುಣಮುಖನಾಗಿ ಮತ್ತೆ ಜನರ ಸೇವೆ ಮರಳಿದ್ದೇನೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಶನಿವಾರ ಶಾಸಕ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಉಭಯ ಶ್ರೀಗಳಿಂದ ಆಶೀರ್ವಾದ ಪಡೆದು ಮಾತನಾಡಿದರು. ಇಷ್ಟೊಂದು ಸುದೀರ್ಘ ಅವ ಧಿ ಎಂದು ನಾನು ಕ್ಷೇತ್ರ ಬಿಟ್ಟವನಲ್ಲ. ಆದರೇ ಕೋವಿಡ್ ಸೋಂಕಿತನಾಗಿ ತಿಂಗಳುಗಟ್ಟಲೇ ಆಸ್ಪತ್ರೆ ಸೇರಿದ ಪರಿಣಾಮ ಇದೇ ಮೊದಲ ಬಾರಿಗೆ ಇಷ್ಟು ದಿನ ಕ್ಷೇತ್ರದ ಜನರಿಂದ ದೂರ ಉಳಿಯುವಂತಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.
ಕೋವಿಡ್ ಸೋಂಕಿತನಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಕಾರ್ಯಕರ್ತರು, ಅಭಿಮಾನಿಗಳು ವಿವಿಧ ಕಡೆಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ.
ಎಲ್ಲರ ಹಾರೈಕೆ, ಪ್ರಾರ್ಥನೆಯಿಂದ ಗುಣಮುಖನಾಗಿದ್ದೇನೆ ಎಂದರು. ಡಾ| ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಚನ್ನಬಸವ ಬಳತೆ, ರವಿ ಬೋರ್‌ವೆಲ್ಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.