ಐತಿಹಾಸಿಕ ಮುದಗಲ್ಲ ಕೋಟೆ ಸ್ವಚ್ಛತೆ ಶುರು


Team Udayavani, Feb 13, 2022, 5:42 PM IST

16clean

ಮುದಗಲ್ಲ: ಸಾವಿರಾರು ವರ್ಷಗಳ ಕುರುಹುಗಳನ್ನು ಉಳಿಸುವಲ್ಲಿ ಸಮುದಾಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಶ್ಲಾಘನಿಯವಾಗಿದೆ ಎಂದು ಲಿಂಗಸುಗೂರು ಉಪವಿಭಾಗದ ಸಹಾಯಕ ಆಯುಕ್ತ ರಾಹುಲ್‌ ಸಂಕನೂರ ಸಂತಸ ವ್ಯಕ್ತಪಡಿಸಿದರು.

ಸ್ವಚ್ಛತೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣದ ಐತಿಹಾಸಿಕ ಎರಡು ಸುತ್ತಿನ ಕೋಟೆಯಲ್ಲಿ ಜಾಲಿಗಿಡಗಳು ಬೆಳೆದು ಶಿಥಿಲಾವ್ಯವಸ್ಥೆಗೆ ಬಂದಿರುವುದರಿಂದ ನಾನೇ ಮುತುವರ್ಜಿ ವಹಿಸಿ ಸಂಘ-ಸಂಸ್ಥೆ, ಸಮುದಾಯದವರು ಮೂಲಕ ಸ್ವಚ್ಛತೆ ಮತ್ತು ಅಭಿವೃದ್ಧಿಗೆ ಸಹಕಾರ ಕೋರಿದ್ದೇನೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ನಾನು ಇಲ್ಲಿಗೆ ವರ್ಗಾವಣೆಗೊಂಡ ಬಳಿಕ ಕಳೆದ 5 ತಿಂಗಳ ಹಿಂದೆ ಕೋಟೆ ವೀಕ್ಷಣೆ ಮಾಡಿದ್ದೆ. ಅಂದೇ ಈ ಕೋಟೆ ಸ್ವಚ್ಛತೆಗೆ ಆಲೋಚನೆ ಮಾಡಿದ್ದೆ. ಆದರೆ ಲಿಂಗಸುಗೂರಿನ ನ್ಯಾಯವಾದಿಗಳು ಸ್ವಚ್ಛತೆಗೆ ಪರವಾನಗಿಗೆ ಕೇಳಿದ್ದರಿಂದ ಪರವಾನಗಿ ನೀಡಿದೆ. ಆದರೆ, ಇಷ್ಟು ದೊಡ್ಡ ಮಟ್ಟದಲ್ಲಿ ಸಮುದಾಯವೇ ಕೋಟೆ ಸ್ವಚ್ಛತೆಗೆ ಮುಂದಾಗಿರುವುದು ಸಂತಸ ತಂದಿದೆ. ಸರಕಾರದ ಕೆಲಸ ತುರ್ತಾಗಿ ಆಗದಿದ್ದರೂ ಅದರದೇ ಆದ ಆಡಳಿತಾತ್ಮಕ ಮಂಜೂರಾತಿ, ಟೆಂಡರ್‌ ಸಂಬಂಧಿಸಿದಂತೆ ವಿಳಂಬ ಅನಿವಾರ್ಯ. ಆದರೆ ಸರಕಾರವೇ ಮಾಡಲಿ ಎನ್ನುವದನ್ನು ಬಿಟ್ಟು ಸಮುದಾಯ ಮುಂದಾಗಿ ಸ್ವಚ್ಛತೆಗೆ ಮುಂದಾಗಿದ್ದೀರಿ. ನಿಮ್ಮೂರಿನ ಇತಿಹಾಸ, ಕೋಟೆ ಸೌಂದರ್ಯ ಹೆಚ್ಚು ಮಾಡುತ್ತಿದ್ದೀರಿ ಎಂದರು.

ಕೋಟೆ ಸ್ವತ್ಛತೆಯ ನೇತೃತ್ವ ವಹಿಸಿದ್ದ ಪುರಸಭೆ ಮಾಜಿ ಅಧ್ಯಕ್ಷ ಅಶೋಕಗೌಡ ಪಾಟೀಲ ಮಾತನಾಡಿ, ಕೋಟೆ ಸ್ವತ್ಛತೆಗೆ ನಾವು ಮುಂದಾಗಿದ್ದೇವೆ. ಸಹಾಯಕ ಆಯುಕ್ತರು ಸರಕಾರದ ಮಟ್ಟದಲ್ಲಿ ಪತ್ರ ಬರೆದು ಕೋಟೆ ಉತ್ಸವಕ್ಕೆ ಮುಂದಾಗ ಬೇಕೆಂದು ಮನವಿ ಮಾಡಿಕೊಂಡರು. ನಂತರದಲ್ಲಿ ಕೋಟೆಯ ಕೆಳ ಭಾಗ ಮತ್ತು ಮೇಲ್ಭಾಗದಲ್ಲಿ ಬೆಳೆದ ಜಾಲಿಗಿಡ, ಮುಳ್ಳು ಕಟ್ಟಿಗಳನ್ನು ತೆರವುಗೊಳಿಸಲಾಯಿತು. ಎಡರುತೊಡರಾಗಿ ಬಿದ್ದಿರುವ ಕಲ್ಲುಗಳನ್ನು ಸರಿಯಾಗಿ ಜೋಡಿಸುವ ಕಾರ್ಯ ನಡೆಯಿತು.

ಚಾಲನೆ ಕಾರ್ಯಕ್ರಮದಲ್ಲಿ ಗುರುಬಸಪ್ಪ ಸಜ್ಜನ್‌, ಕರವೇ ಅಧ್ಯಕ್ಷ ನಯಿಮ್‌, ಮಹಿಬೂಬ ಬಾರಿಗಿಡ, ಕುಪ್ಪಣ್ಣ ಮಾಣೀಕ್‌ ವಕೀಲರು, ನಾಗರಾಜ, ಮಲ್ಲಿಕಾರ್ಜುನ ಗೌಡರ್‌, ಸಂಗಪ್ಪ ಚಲುವಾದಿ, ಮಲ್ಲಪ್ಪ, ವಿನೋದ ಗಾಡಿಮನಿ, ಉದಯಕುಮಾರ, ಸಂತೋಷ ಸುರಪೂರ, ಶ್ರೀಕಾಂತಗೌಡ ಸೇರಿದಂತೆ ಪಟ್ಟಣದ ನಾಗರಿಕ ಮುಖಂಡರು, ಪಟ್ಟಣದ ಯುವಕರು ಸ್ವತ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.