ಬೀದರನಲ್ಲಿ ರಾಜ್ಯ ಯುವಜನ ಮೇಳ ನಡೆಯಲಿ
Team Udayavani, Dec 14, 2021, 12:13 PM IST
ಬೀದರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಜಿಲ್ಲೆಯ ಯುವಕ/ಯುವತಿ ಸಂಘಗಳ ಆಶ್ರಯದಲ್ಲಿ ಸೋಮವಾರ ನಗರದ ರಂಗ ಮಂದಿರದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಕಲಾ ತಂಡಗಳ ಆಯ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಮುಖ್ಯ ಅತಿಥಿಯಾಗಿ ಮಾತನಾಡಿ, ಕೋವಿಡ್ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಕಾರ್ಯಕ್ರಮ ನಡೆದಿರಲಿಲ್ಲ. ಈ ವರ್ಷ ಹಮ್ಮಿಕೊಂಡಿರುವುದು ಶ್ಲಾಘನೀಯ. ಜಿಲ್ಲೆಯ ಯುವ ಪ್ರತಿಭಾವಂತ ಹಾಗೂ ಉದಯೋನ್ಮುಖ ಕಲಾವಿದರು ರಾಜ್ಯ ಮಟ್ಟದಲ್ಲಿ ವಿವಿಧ ಕಲಾ ಪ್ರಕಾರಗಳಲ್ಲಿ ಆಯ್ಕೆಯಾಗಿ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಬೇಕು. ಪ್ರಸಕ್ತ ಸಾಲಿನ ರಾಜ್ಯ ಯುವಜನ ಮೇಳ ಬೀದರನಲ್ಲಿ ಆಯೋಜಿಸಬೇಕು ಎಂದು ವಿನಂತಿಸಿದರು.
ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ. ನಾಡಿಗೇರ್ ಪ್ರಾಸ್ತಾವಿಕ ಮಾತನಾಡಿ, ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಆಯ್ಕೆಯಾದ ಕಲಾವಿದರನ್ನು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿದ್ದಾರೆ ಎಂದರು.
ಹಿರಿಯ ಜಾನಪದ ಕಲಾವಿದ ಶಂಭುಲಿಂಗ ವಾಲೊªಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಯುವ ಸಮನ್ವಯಾಧಿಕಾರಿ ಮಯೂರಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಶಿವಯ್ನಾ ಸ್ವಾಮಿ, ಡಾ| ಪ್ರಭುಲಿಂಗ ಬಿರಾದಾರ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ, ಮೊಗಲಪ್ಪ ಮಾಳಗೆ ಇತರರಿದ್ದರು. ಶಂಭುಲಿಂಗ ವಾಲೊªಡ್ಡಿ, ಶಂಕರ ಚೊಂಡಿ, ಸುನೀಲ ಕಡ್ಡೆ, ದೇವದಾಸ ಚಿಮಕೋಡೆ, ವಿ.ಎಸ್. ಉಪ್ಪಿನ್, ಎಸ್.ವಿ. ಕಲ್ಮಠ, ಎಸ್.ಬಿ. ಕುಚಬಾಳ, ಉಷಾ ಪ್ರಭಾಕರ, ವೀಣಾ ಕೋಳಾರ, ರಮೇಶ ದೊಡ್ಡಿ, ರಮೇಶ ಕೋಳಾರ ನಿರ್ಣಾಯಕರಾಗಿದ್ದರು. ದೇವದಾಸ ಜೋಶಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.