ಬೀದರ್ ಬಂದ್ ವೇಳೆ ಕಲ್ಲು ತೂರಾಟ
Team Udayavani, Jan 10, 2018, 10:06 AM IST
ಬೀದರ್: ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಮತ್ತು ಸಂವಿಧಾನದ ಬಗೆಗಿನ ಅವೈಜ್ಞಾನಿಕ ಹೇಳಿಕೆ ಖಂಡಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಮಂಗಳವಾರ ಕರೆ ನೀಡಿದ್ದ ಬೀದರ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಪ್ರತಿಭಟನೆ ವೇಳೆ ಪರಿಸ್ಥಿತಿ
ವಿಕೋಪಕ್ಕೆ ತಿರುಗಿದ್ದು, ಆಣದೂರಿನಲ್ಲಿ ಉದ್ರಿಕ್ತರ ಮೇಲೆ ಲಘು ಲಾಠಿ ಪ್ರಹಾರ ನಡೆದಿದೆ. ಈ ವೇಳೆ 15ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿವೆ. ಬಂದ್ ಹಿನ್ನೆಲೆಯಲ್ಲಿ ಇಡೀ ಬೀದರ್ ನಗರ ಸ್ತಬ್ಧವಾಗಿತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದರೆ, ವಾಹನಗಳ ಸಂಚಾರ ಸಂಪೂರ್ಣ ಸ್ಥಗಿ
ತಗೊಂಡಿತ್ತು.
ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಗರದಲ್ಲಿ ಬಿಜೆಪಿ ಮುಖಂಡರೊಬ್ಬರ ಅಂತ್ಯಕ್ರಿಯೆಗಾಗಿ ಆಗಮಿಸಿದ್ದ ಹುಮನಾಬಾದ ಮಾಜಿ ಶಾಸಕ ಸುಭಾಷ ಕಲ್ಲೂರ ಅವರ ಕಾರನ್ನು ಗಾಂಧಿ ಗಂಜ್ನಲ್ಲಿ ತಡೆದು ಧ್ವಂಸಗೊಳಿಸಲಾ ಯಿತು. ನಗರ ಸಮೀಪದ ಆಣದೂರಿನಲ್ಲಿ ದಲಿತ ಮುಖಂಡರು ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿಸಲು ಮುಂದಾದಾಗ ಪರಸ್ಪರ ನಡೆದ ವಾಗ್ವಾದ
ವಿಕೋಪಕ್ಕೆ ತಿರುಗಿತು. ನಂತರ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.