ಬೀದರ ಜಿಲ್ಲೆಯಲ್ಲಿ ಬಿಜೆಪಿ ಬಲಪಡಿಸಿ


Team Udayavani, May 3, 2022, 3:10 PM IST

15BJP

ಭಾಲ್ಕಿ: ಬೀದರ ಜಿಲ್ಲೆಯಲ್ಲಿ ಬಿಜೆಪಿ ಮಜಬೂತ್‌ ಆಗಿ ಬೆಳೆಸಬೇಕಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದ್ದೂ ಈಗಿನಿಂದಲೇ ಕಾರ್ಯಕರ್ತರು ಬಿಜೆಪಿಯನ್ನು ಬೂತ್‌ ಮಟ್ಟದಿಂದ ಬಲ ಪಡಿಸಲು ಶ್ರಮಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು. ʼ

ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್‌ ಸಂಪೂರ್ಣ ನೆಲಕಚ್ಚಿದೆ. ಆದರೆ, ರಾಜ್ಯ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ಇನ್ನೂ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ಜಿಲ್ಲೆಯಲ್ಲಿ 6 ಸ್ಥಾನಗಳ ಪೈಕಿ ಕನಿಷ್ಠ 4 ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಯಬೇಕಿದೆ ಎಂದರು.

ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಮಾತನಾಡಿ, ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದೆ. ಇದು ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ಪಕ್ಷ ನಿಷ್ಠರಿಗೆ ಸದಾ ಗೌರವ ಇದೆ. ಒಬ್ಬ ಕಾರ್ಯಕರ್ತ ಪಕ್ಷದಲ್ಲಿ ಯಾವ ಮಟ್ಟಕ್ಕೆ ಬೆಳೆಯಬಹುದು ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿ. ಮೋದಿ ಅವರು ದೇಶದ ಒಳಿತಿಗಾಗಿ ಕೈಗೊಳ್ಳುತ್ತಿರುವ ನಿರ್ಣಯಗಳಿಗೆ ಇಡೀ ವಿಶ್ವವೇ ಕೊಂಡಾಡುತ್ತಿದೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ರೈತರ ಮಕ್ಕಳಿಗೆ ಸ್ಕಾಲರ್‌ ಶಿಪ್‌ ಯೋಜನೆ ಸೇರಿ ಮುಂತಾದ ಜನಪರ ಯೋಜನೆಗಳು ನೀಡಿರುವ ಹೆಗ್ಗಳಿಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಲ್ಲುತ್ತದೆ ಎಂದರು.

ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 6ಕ್ಕೆ 6 ಸ್ಥಾನಗಳನ್ನು ಗೆಲ್ಲಿಸಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪೂರೆ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್‌, ಬಸವಕಲ್ಯಾಣ ಶಾಸಕ ಶರಣು ಸಲಗರ್‌, ವಿವಿಧ ನಿಗಮ ಮಂಡಳಿ ಅಧ್ಯಕ್ಷರಾದ ಡಾ| ಶೈಲೇಂದ್ರ ಬೆಲ್ದಾಳೆ, ಬಾಬು ವಾಲಿ, ಮಾರುತಿರಾವ ಮೂಳೆ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ್‌, ಬಿಜೆಪಿ ಮುಖಂಡ ಡಿ.ಕೆ. ಸಿದ್ರಾಮ, ಸೂರ್ಯಕಾಂತ ನಾಗಮಾರಪಳ್ಳಿ, ಈಶ್ವರಸಿಂಗ್‌ ಠಾಕೂರ್‌, ಶಿವರಾಜ ಗಂದಗೆ, ವಿಜಯಕುಮಾರ ಡಾಂಗೆ, ಸೋಮನಾಥ ಪಾಟೀಲ್‌, ದೀಪಕ ಗಾಯಕವಾಡ್‌, ವಿದ್ಯಾಸಾಗರ ಶಾಪೂರೆ, ತಾಲೂಕು ಬಿಜೆಪಿ ಅಧ್ಯಕ್ಷ ಪಂಡಿತ ಶಿರೋಳೆ ಇದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.