ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಮೆಚ್ಚುಗೆ
Team Udayavani, Aug 16, 2020, 5:39 PM IST
ಶಹಾಪುರ: ಇಲ್ಲಿನ ಆದರ್ಶ ವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಲಬುರಗಿ ವಿಭಾಗಕ್ಕೆ ಪ್ರಥಮ, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಸನ್ಮಾನಿಸಲಾಯಿತು.
ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೀಮನಗೌಡ ತಳೇವಾಡ ಮಾತನಾಡಿ, ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳೇ ಅದ್ಭುತ ಸಾಧನೆ ಮಾಡಿದ್ದು ಶ್ಲಾಘನೀಯ. ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ರಮ್ಯಾ ರಾಮಣ್ಣ ಕುಂಬಾರ 625ಕ್ಕೆ 620 ಮತ್ತು ಸ್ವಪ್ನ ಮಲ್ಲಿಕಾರ್ಜುನ ಯಳವಾರ 625ಕ್ಕೆ 619 ಅಂಕ ಗಳಿಸಿ ಕಲಬುರ್ಗಿ ವಿಭಾಗಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
ಸಂಘದ ಕಾರ್ಯದರ್ಶಿ ರಾಮಕೃಷ್ಣ ಕಟ್ಕಾವಲಿ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಶ್ರದ್ಧೆಯಿಂದ ಅಭ್ಯಾಸ ಮಾಡಿ ಕೆಎಎಸ್, ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉನ್ನತ ಹುದ್ದೆ ಅಲಂಕರಿಸಿ ಸಾರ್ವಜನಿಕರ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.ಪ್ರಶಾಂತ ಗುಗ್ಗರಿ, ನಿಂಗನಗೌಡ ಯಡ್ರಾಮಿ, ರಾಜಸಾಹೇಬ ಬಳೆಗಾರ, ಶಿವಾನಂದ ಜಾಯಿ, ರಾಜಶೇಖರ ಪತ್ತಾರ, ವೀರಭದ್ರ ಬಡಿಗೇರ, ಮುಖ್ಯಗುರು ಹಣಮಂತ್ರಾಯ ಸೋಮಾಪುರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.