ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆಗ್ರಹ
ಪಾಸ್ ಇಲ್ಲದೇ ವಿದ್ಯಾರ್ಥಿಗಳು ತರಗತಿಯಿಂದ ದೂರ ಉಳಿಯುವ ಸ್ಥಿತಿ ಇದೆ
Team Udayavani, Jun 4, 2019, 9:16 AM IST
ಬೀದರ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ತಕ್ಷಣ ಉಚಿತ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸರ್ಕಾರ ಈ ಹಿಂದೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ನೆರವು ನೀಡಿತ್ತು. ಅದೇ ರೀತಿಯಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್ ಪಾಸ್ ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರ ನೀಡಬೇಕು. ಬಸ್ ಪಾಸ್ ನೀಡುವ ಕುರಿತು ಸರ್ಕಾರ ಕಾಳಜಿ ವಹಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈಗಾಗಲೇ ಮೇ 22ರಿಂದ ಪಿಯು ದ್ವಿತೀಯ ವರ್ಷದ ತರಗತಿಗಳು ಪ್ರಾರಂಭವಾಗಿವೆ. ಆದರೆ, ಪಾಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ತರಗತಿಯಿಂದ ದೂರ ಉಳಿಯುವ ಸ್ಥಿತಿ ಎದುರಾಗಿದೆ. ಅನೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶದ ಕಾಲೇಜಿಗೆ ಬರಲು ಹಣ ಖರ್ಚು ಮಾಡುವ ಸ್ಥಿತಿ ಇದ್ದು, ಕೂಡಲೆ ಕಾಲೇಜು ವಿದ್ಯಾರ್ಥಿಗಳಿಗೆ ಪಾಸ್ ನೀಡುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ರಾಜ್ಯಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ, ಜಿಲ್ಲಾಸಂಘಟನಾ ಕಾರ್ಯದರ್ಶಿ ಧನಜಯಾ ಚಿತ್ರದುರ್ಗಾ, ನಗರ ಉಪಧ್ಯಕ್ಷ ಚನ್ನಬಸವ ಬೀರಾದರ, ಅಶೋಕ ಶಂಬಳ್ಳೆ, ಅರವಿಂದ ಸುಂದಳಕರ, ಸಚಿನ ಗುನ್ನಾಳೆ, ಉಮೇಶ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.
ಬೀದರ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ತಕ್ಷಣ ಉಚಿತ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸರ್ಕಾರ ಈ ಹಿಂದೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ನೆರವು ನೀಡಿತ್ತು. ಅದೇ ರೀತಿಯಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್ ಪಾಸ್ ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರ ನೀಡಬೇಕು. ಬಸ್ ಪಾಸ್ ನೀಡುವ ಕುರಿತು ಸರ್ಕಾರ ಕಾಳಜಿ ವಹಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಈಗಾಗಲೇ ಮೇ 22ರಿಂದ ಪಿಯು ದ್ವಿತೀಯ ವರ್ಷದ ತರಗತಿಗಳು ಪ್ರಾರಂಭವಾಗಿವೆ. ಆದರೆ, ಪಾಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ತರಗತಿಯಿಂದ ದೂರ ಉಳಿಯುವ ಸ್ಥಿತಿ ಎದುರಾಗಿದೆ. ಅನೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶದ ಕಾಲೇಜಿಗೆ ಬರಲು ಹಣ ಖರ್ಚು ಮಾಡುವ ಸ್ಥಿತಿ ಇದ್ದು, ಕೂಡಲೆ ಕಾಲೇಜು ವಿದ್ಯಾರ್ಥಿಗಳಿಗೆ ಪಾಸ್ ನೀಡುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ರಾಜ್ಯಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ, ಜಿಲ್ಲಾಸಂಘಟನಾ ಕಾರ್ಯದರ್ಶಿ ಧನಜಯಾ ಚಿತ್ರದುರ್ಗಾ, ನಗರ ಉಪಧ್ಯಕ್ಷ ಚನ್ನಬಸವ ಬೀರಾದರ, ಅಶೋಕ ಶಂಬಳ್ಳೆ, ಅರವಿಂದ ಸುಂದಳಕರ, ಸಚಿನ ಗುನ್ನಾಳೆ, ಉಮೇಶ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ
Karkala: ನಕ್ಸಲ್ ಚಟುವಟಿಕೆ 15 ವರ್ಷ ಬಳಿಕ ಬಹಿರಂಗವಾದ ಕಾರಣ ಸರಕಾರ ತಿಳಿಸಲಿ: ಸುನೀಲ್
BJP: ನನ್ನ ಹೊಣೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ: ಬಿ.ವೈ.ವಿಜಯೇಂದ್ರ
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.