ಮಾದರಿ ಕ್ಷೇತ್ರ ಮಾಡಲು ಬೆಂಬಲಿಸಿ: ಸೂರ್ಯಕಾಂತ
Team Udayavani, May 5, 2018, 12:48 PM IST
ಬೀದರ: ಕ್ಷೇತ್ರದಲ್ಲಿ 10 ವರ್ಷಗಳಿಂದ ನಿರಂತರ ಜನಸೇವೆಯಲ್ಲಿದ್ದೇನೆ. ಬೀದರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನನ್ನನ್ನು ಬೆಂಬಲಿಸಬೇಕು ಎಂದು ಬೀದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.
ನಗರದ ಸಂಗಮೇಶ್ವರ ಕಾಲೋನಿ, ಮೈಲೂರ, ಸಿಎಂಸಿ ಕಾಲೋನಿ, ಅಗ್ರಿಕಲ್ಚರ್ ಕಾಲೋನಿ, ಮಂಗಲಪೇಟೆ ಮತ್ತಿತರ
ಕಡೆ ಪಾದಯಾತ್ರೆ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆ ವೈಯಕ್ತಿಕವಾಗಿ ಟ್ಯಾಂಕರ್ ಮೂಲಕ ಉಚಿತವಾಗಿ ನೀರು ಪೂರೈಸಿ ನಗರದ ಜನರಿಗೆ ಕೈಲಾದ ಸಹಾಯ ಮಾಡಿದ್ದೇನೆ. ಪ್ರತಿ ವರ್ಷ ಬೇಸಿಗೆಯಲ್ಲಿ ಉಲ್ಬಣಿಸುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮತದಾರ ಪ್ರಭುಗಳು ನನ್ನನ್ನು ಬೆಂಬಲಿಸಬೇಕು. ಬರಮುಕ್ತ ಬೀದರ ನಿರ್ಮಾಣಕ್ಕೆ ನನಗೆ ಶಕ್ತಿ ಕೊಡಬೇಕು ಎಂದು ಮನವಿ ಮಾಡಿದರು.
ತಂದೆ ದಿ. ಗುರುಪಾದಪ್ಪ ಅವರು ಬೀದರ ಡಿಸಿಸಿ ಬ್ಯಾಂಕ್ ಮೂಲಕ ಇಡೀ ಜಗತ್ತಿಗೆ ಸ್ವಸಹಾಯ ಗುಂಪುಗಳ ಕಲ್ಪನೆ ಪರಿಚಯಿಸಿದ್ದರು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಒಂದು ಲಕ್ಷ ರೂಪಾಯಿವರೆಗೆ ಸಾಲ ಕೊಟ್ಟಿದ್ದರು. 13 ಮಹಿಳೆಯರಿಂದ ಆರಂಭವಾದ ಸ್ವಸಹಾಯ ಗುಂಪುಗಳಲ್ಲಿ ಇಂದು 3.73 ಲಕ್ಷ ಸದಸ್ಯರಿದ್ದಾರೆ. ಮಹಿಳೆಯರು ಬ್ಯಾಂಕ್‌ಗಳಲ್ಲಿ 140 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ವಾರ್ಷಿಕ 600 ಕೋಟಿ ರೂ. ವಹಿವಾಟು ನಡೆಸುತ್ತಿದ್ದಾರೆ ಎಂದು ಹೇಳಿದರು.
ಎರಡು ವರ್ಷಗಳ ಹಿಂದೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಡಿಸಿಸಿ ಬ್ಯಾಂಕ್‌ನಿಂದ 1.52 ಲಕ್ಷ ರೈತರ ಬೆಳೆ ವಿಮೆ ಮಾಡಿಸಿದ್ದರಿಂದ ದೇಶದಲ್ಲೇ ಅತಿಹೆಚ್ಚು ಅಂದರೆ 248 ಕೋಟಿ ರೂ. ಪರಿಹಾರ ಬೀದರಿಗೆ ಸಿಕ್ಕಿದೆ. ರೈತರಿಗೆ ತಲಾ 30 ಸಾವಿರದಿಂದ 4 ಲಕ್ಷ ರೂಪಾಯಿವರೆಗೂ ಪರಿಹಾರ ದೊರೆತಿದೆ ಎಂದು ಹೇಳಿದರು.
ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರು ಬೀದರನಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಸಹಕಾರ ಆಸ್ಪತ್ರೆ ಪ್ರಾರಂಭಿಸಿದ್ದರು. ಆಸ್ಪತ್ರೆಯಿಂದ ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ಹೈದರಾಬಾದ್, ಸೊಲ್ಲಾಪುರ, ಬೆಂಗಳೂರಿಗೆ ಹೋಗುವುದು ತಪ್ಪಿದೆ. ತಂದೆಯವರ ಆಸೆಯಂತೆ ನಾನು ಆಸ್ಪತ್ರೆ ಅಧ್ಯಕ್ಷನಾದ ನಂತರ ಆಸ್ಪತ್ರೆಯಲ್ಲಿ 2 ಸಾವಿರ ರೂ.ಗಳಲ್ಲಿ ಸಾಮಾನ್ಯ ಹೆರಿಗೆ, 10 ಸಾವಿರ ರೂ.ಗಳಲ್ಲಿ ಸಿಸೇರಿಯನ್ ಯೋಜನೆ ಆರಂಭಿಸಿದೆ. ಇದರಿಂದ ನೂರಾರು ಬಡ ಜನರಿಗೆ ಅನುಕೂಲವಾಗಿದೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ ಯಂತ್ರಗಳನ್ನು ಸ್ಥಾಪಿಸಿದ್ದರಿಂದ ಸ್ಥಳೀಯವಾಗಿಯೇ ಕೈಗೆಟುಕುವ ದರದಲ್ಲಿ ವಿವಿಧ ಪರೀಕ್ಷೆ ಹಾಗೂ ವೈದ್ಯಕೀಯ ಸೇವೆ ದೊರೆಯುತ್ತಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ ಕಾಂಗೆ, ಮುಖಂಡರಾದ ಉಪೇಂದ್ರ ದೇಶಪಾಂಡೆ, ಫರ್ನಾಂಡೀಸ್
ಹಿಪ್ಪಳಗಾಂವ, ಡಾ| ಅಮರ ಏರೋಳಕರ, ಶಶಿಕುಮಾರ ಪಾಟೀಲ ಸಂಗಮ, ರಾಜು ಹತ್ತಿ, ಶಿವಕುಮಾರ ಭಾಲ್ಕೆ, ರಾಜೇಶ, ಸಂಗಮೇಶ ಗುಮ್ಮಾ, ಕಲ್ಯಾಣರಾವ್ ಬಿರಾದಾರ, ಹರೀಶ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.