ಹಮಾಲರ ಸಮಸ್ಯೆಗೆ ತಹಶೀಲ್ದಾರ್‌ ಸ್ಪಂದನೆ

Team Udayavani, Apr 30, 2020, 7:26 PM IST

30-April-13

ಸುರಪುರ: ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಮತ್ತು ಸಿಪಿಐ ಎಸ್‌.ಎಂ. ಪಾಟೀಲ ಆಹಾರ ನಾಗರಿಕ ಸರಬರಾಜು ಗೋದಾಮಗೆ ಭೇಟಿ ನೀಡಿ ಹಮಾಲರ ಸಮಸ್ಯೆ ಆಲಿಸಿದರು.

ಸುರಪುರ: ಕೆಲಸದ ವಿಷಯದಲ್ಲಿ ತಮ್ಮಲ್ಲಿಯೇ ವಾಗ್ಧಾವಾದ ಮಾಡಿಕೊಂಡಿದ್ದ ನಗರದ ಹೊರವಲಯದ ವೆಂಕಟಾಪುರ ಹತ್ತಿರದ ಆಹಾರ ನಾಗರಿಕ ಸರಬರಾಜು ಗೋದಾಮ ಹಮಾಲರ ಸಮಸ್ಯೆಯನ್ನು ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಬಗೆಹರಿಸಿದರು.

ಹಮಾಲರ ನಡುವೆ ತಕರಾರು ನಡೆದು ಬೆಳಗಿನಿಂದ ಮಧ್ಯಾಹ್ನ 12:00ರ ವರೆಗೆ ಲೋಂಡಿಂಗ್‌ ಸ್ಥಗಿತಿಗೊಂಡಿತ್ತು. ಗೋದಾಮು ವ್ಯವಸ್ಥಾಪಕರು ಸಾಕಷ್ಟು ತಿಳಿ ಹೇಳಿ ದರು ಕೂಡ ಹಮಾಲರು
ಕೆಲಸಕ್ಕೆ ಮುಂದಾಗದೆ ಪ್ರತಿಭಟನೆಗೆ ಮುಂದಾಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಮತ್ತು ಸಿಪಿಐ ಎಸ್‌.ಎಂ. ಪಾಟೀಲ ಹಮಾಲರ ಸಮಸ್ಯೆ ಆಲಿಸಿದರು. ಈ ರೀತಿ ನಿಮ್ಮನಿಮ್ಮಲ್ಲಿಯೇ ಕಚ್ಚಾಡುವುದು ಸರಿಯಲ್ಲ. ಏನೇ ಸಮಸ್ಯೆ ಇದ್ದರು ಅದನ್ನು ಬಗೆಹರಿಸುತ್ತೇವೆ. ನಿಮ್ಮಿಂದ ಆಗದೆ ಇದ್ದರೆ ಹೇಳಿ ಬೇರಡೆಯಿಂದ ಹಮಾಲರನ್ನು ಕರೆತಂದು ಕೆಲಸ ಮಾಡಿಸುತ್ತೇವೆ. ಯಾವುದೇ ಕಾರಣಕ್ಕೆ ಕೆಲಸ ಸ್ಥಗಿತಗೊಳಿಸುವಂತಿಲ್ಲ ಎಂದು ತಾಕೀತು ಮಾಡಿದರು.

ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಮನೆಯಲಿಯೇ ಕುಳಿತಿದ್ದೇವೆ. ಉಪಜೀವನಕ್ಕೆ ತೊಂದರೆಯಾಗಿದೆ. ಒಂದೇ ಕುಟುಂಬದಲ್ಲಿ ಮೂರು ನಾಲ್ಕು ಜನರನ್ನು ಕೆಲಸಕ್ಕೆ ತೆಗೆದುಕೊಂಡರೆ ಹೇಗೆ? ನಮಗೂ ಕೆಲಸ ನೀಡಿ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕು ಎಂದು ಕೆಲ ಹಮಾಲರು ಅಳಲು ತೋಡಿಕೊಂಡರು. 20-30 ವರ್ಷಗಳಿಂದ ಕೆಲಸ ಮಾಡಿದ್ದೇವೆ. ಹೊಸದಾಗಿ ಬಂದವರನ್ನು ಕೆಲಸಕ್ಕೆ ತೆಗೆದುಕೊಂಡರೆ ಹೇಗೆ? ಮೊದಲಿನಿಂದ ಮಾಡಿಕೊಂಡು ಬಂದವರನ್ನು ಪರಿಗಣಿಸುವಂತೆ ಆಗ್ರಹಿಸಿದರು.

ಎಲ್ಲರಿಗೂ ಕೆಲಸ ನೀಡಲು ಆಗುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಕೆಲಸ ನೀಡಲಾಗುವುದು. ಎಲ್ಲ ಹಮಾಲರಿಗೆ ಗುರುತಿನ ಚೀಟಿ ನೀಡುತ್ತೇವೆ. ಚೀಟಿ ಹೊಂದಿದ ಹಮಾಲರು ಮಾತ್ರ ಕೆಲಸ ಮಾಡಬೇಕು. ಕೆಲಸ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು ಎಂದು ಸೂಚಿಸಿದರು. ಬಳಿಕ ಹಮಾಲರು ಪ್ರತಿಭಟನೆ ಕೈಬಿಟ್ಟು ಕೆಲಸ ಆರಂಭಿಸಿದರು. ಗೋದಾಮು ವ್ಯವಸ್ಥಾಪಕ ಕಲ್ಲಪ್ಪ, ಹಮಾಲರ ಸಂಘದ ಅಧ್ಯಕ್ಷ ಹಣಮಂತ ನಾಯಕ, ಉಪಾಧ್ಯಕ್ಷ ಗಿರೆಪ್ಪ ನಾಯಕ ಇದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.