ಕೋವಿಡ್-19 ತಡೆಗೆ ಮುನ್ನೆಚ್ಚರಿಕೆ ವಹಿಸಿ
Team Udayavani, Jun 25, 2020, 8:17 AM IST
ಭಾಲ್ಕಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಪ್ರಭು ಚವ್ಹಾಣ ಭೇಟಿ ನೀಡಿ ಕೋವಿಡ್ ಪ್ರಕರಣಗಳ ಮಾಹಿತಿ ಪಡೆದರು. ಅಧಿಕಾರಿಗಳ ತಂಡದೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಐಸೋಲೇಷನ್ ವಾರ್ಡ್ ಹಾಗೂ ಉಗ್ರಾಣ ಕೋಣೆ ಸೇರಿ ನಾನಾ ವಾರ್ಡ್‌ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಸಚಿವರು, ಲಾಕ್‌ಡೌನ್ ಸಡಿಲಿಕೆ ಬಳಿಕ ಜಿಲ್ಲೆ ಸೇರಿ ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಇದೇ ವೇಳೆ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ತರಿಸಿದೆ. ಸೋಂಕು ನಿಯಂತ್ರಿಸಲು ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ.
ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷಿಸಲು ಈಗಾಗಲೇ ಬೀದರ್‌ನಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಿರುವ ಪರಿಣಾಮ ತ್ವರಿತವಾಗಿ ವರದಿ ಸಿಗುತ್ತಿದೆ. ಸೋಂಕಿತರು ಹೆಚ್ಚಾಗುತ್ತಿರುವ ಕಡೆಗಳಲ್ಲಿ ತಕ್ಷಣವೇ ಚಿಕಿತ್ಸೆ ನೀಡಬೇಕು ಎನ್ನುವ ಉದ್ದೇಶದಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಐಸೋಲೇಷನ್ ವಾರ್ಡ್ ಸ್ಥಾಪಿಸಲಾಗಿದೆ ಎಂದರು. ಆಸ್ಪತ್ರೆ ಪರಿಸರದಲ್ಲಿ ಕಾಲಕಾಲಕ್ಕೆ ಸಾನಿಟೈಸ್ ಮಾಡಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಡಿಸಿ ರಾಮಚಂದ್ರನ್ ಆರ್, ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.