ಖೂಬಾ-ಖಾಶೆಂಪೂರ ವಾಗ್ವಾದ

•ಬರ ಪರಿಹಾರ‌-ಬೆಳೆ ವಿಮೆ-ಕಬ್ಬಿನ ಬಾಕಿ ಹಣ ಪಾವತಿ ವಿಚಾರಕ್ಕೆ ಮಾತಿನ ಚಕಮಕಿ

Team Udayavani, Jun 4, 2019, 9:12 AM IST

bidar-tdy-1..

ಬೀದರ: ಜಿಲ್ಲಾ ಪಂಚಾಯತನಲ್ಲಿ ನಡೆದ ಬರ ಪರಿಶೀಲನೆ ಸಭೆಯಲ್ಲಿ ಬರ ಪರಿಹಾರ‌, ಬೆಳೆ ವಿಮೆ, ಕಬ್ಬಿನ ಬಾಕಿ ಹಣ ಪಾವತಿ ವಿಷಯಗಳ ಕುರಿತು ಸಂಸದ ಭಗವಂತ ಖೂಬಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಮಧ್ಯೆ ವಾಗ್ವಾದ ನಡೆಯಿತು.

ಕಳೆದ ವರ್ಷ ಬೆಳೆ ಹಾನಿ ಸಂಭವಿಸಿದ ರೈತರಿಗೆ ಎಷ್ಟು ಪ್ರಮಾಣದ ಪರಿಹಾರ ಪ್ರಸ್ತಾವನೆ ಸಲ್ಲಿಸಲಾಗಿದೆ? ಯಾವ ಕಾರಣಕ್ಕೆ ಇನ್ನೂ ಹಣ ಬಿಡುಗಡೆಯಾಗಿಲ್ಲ ಎಂದು ಸಂಸದ ಖೂಬಾ ಕೃಷಿ ಅಧಿಕಾರಿಗಳಿಗೆ ಪ್ರಶ್ನಿಸಿದರು. ಕೃಷಿ ಅಧಿಕಾರಿ ಮಾತನಾಡಿ, ಹಿಂಗಾರು ಬೆಳೆಗಳ ಸುಮಾರು 51 ಕೋಟಿ ರೂ. ಬೆಳೆಹಾನಿ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇನ್ನೂ ಪರಿಹಾರ ಹಣ ಬಂದಿಲ್ಲ ಎಂದು ಮಾಹಿತಿ ನೀಡಿದರು. ಮಧ್ಯ ಮಾತನಾಡಿದ ಸಚಿವ ಬಂಡೆಪ್ಪ ಖಾಶೆಂಪೂರ, ಬರ ಪರಿಹಾರ ಕೇಂದ್ರ ಸರ್ಕಾರದಿಂದ ಬರಬೇಕು. ಅಲ್ಲಿಂದ ಬಂದ ನಂತರ ರೈತರಿಗೆ ನೀಡಲಾಗುತ್ತದೆ ಎಂದರು.

ಈ ವೇಳೆ ಎಂಎಲ್ಸಿ ರಘುನಾಥರಾವ್‌ ಮಲ್ಕಾಪೂರೆ ಮಾತನಾಡಿ, ರೈತರ ಸರ್ಕಾರ ಎಂದು ಹೇಳುತ್ತೀರಿ, ಮೊದಲು ರೈತರಿಗೆ ಹಣ ಪಾವತಿ ಮಾಡಬೇಕು. ನಂತರ ಕೇಂದ್ರದಿಂದ ಬರುವ ಹಣವನ್ನು ಸರ್ಕಾರ ಪಡೆದುಕೊಳ್ಳಬೇಕು ಎಂದರು. ಇದಕ್ಕೆ ಸಚಿವ ಬಂಡೆಪ್ಪ ಖಾಶೆಂಪೂರ ಸರ್ಕಾರ ನಿಯಮಗಳಂತೆ ಕೆಲಸ ನಡೆಯುತ್ತದೆ. ಇದು ರಾಜ್ಯಮಟ್ಟದ ಸಮಸ್ಯೆ ಇದೆ ಎಂದರು.

ನಂತರ ಬೆಳೆ ಪರಿಹಾರ ವಿಷಯ ಪ್ರಸ್ತಾಪಗೊಂಡಿದ್ದು, ಸಂಸದ ಭಗವಂತ ಖೂಬಾ ರಾಜ್ಯ ಸರ್ಕಾರದ ವೈಫಲ್ಯದಿಂದ ರೈತರಿಗೆ ಬೆಳೆ ಹಾನಿ ವಿಮೆ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು. ಇದಕ್ಕೆ ಸಚಿವ ಬಂಡೆಪ್ಪ ಖಾಶೆಂಪೂರ, ರಾಜ್ಯ ಸರ್ಕಾರದ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟ ಪಡಿಸಿದರು. ರಾಜ್ಯ ಸರ್ಕಾರ ಮೊಬೈಲ್ ಆ್ಯಪ್‌ ಮೂಲಕ ಡಾಟಾ ಸಂಗ್ರಹಿಸಿದೆ. ಅಲ್ಲದೇ, ಕೃಷಿ ಇಲಾಖೆ ಅಧಿಕಾರಿಗಳು ಕೂಡ ಮಾಹಿತಿ ಸಲ್ಲಿಸಿದ್ದಾರೆ. ಆ ಎರಡೂ ಮಾಹಿತಿಗಳು ಸೂಕ್ತವಾಗಿ ಹೊಂದಾಣಿಕೆ ಆಗುತ್ತಿಲ್ಲ ಎಂದು ತಿಳಿದು ಬಂದಿದ್ದು, ರಾಜ್ಯ ಸರ್ಕಾರ ಸೂಕ್ತ ಸಮಯದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದರೆ ಈವರೆಗೆ ರೈತರಿಗೆ ವಿಮೆ ಹಣ ಬರುತ್ತಿತ್ತು ಎಂದ ಅವರು, ಈ ಕುರಿತು ರಾಜ್ಯಮಟ್ಟದ ಅಧಿಕಾರಿಗಳ ಜತೆಗೆ ಜಿಲ್ಲಾ ಉಸ್ತುವಾರಿಗಳು ಮಾತುಕತೆ ನಡೆಸಿ ಕೂಡಲೆ ಸಮಸ್ಯೆಗೆ ಸ್ಪಂದಿಸುವಂತೆ ಒತ್ತಾಯಿಸಬೇಕು ಎಂದರು.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಮಾತನಾಡಿ, ಈ ಕುರಿತು ಜೂ.6ರಂದು ಸಭೆೆ ನಡೆಯಲ್ಲಿದ್ದು, ಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದರು. ಅಲ್ಲದೆ, ಆಯಾ ವರ್ಷದಲ್ಲಿನ ಬೆಳೆ ಪರಿಹಾರದ ಸಮಸ್ಯೆಗಳು ಆಯಾ ವರ್ಷದ ಡಿಸೆಂಬರ್‌ ಅಂತ್ಯದ ವರೆಗೆ ಬಗೆಹರಿಯುವಂತೆ ನೋಡಿಕೊಳ್ಳಬೇಕಾಗಿದ್ದು, ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.

ಕಬ್ಬಿನ ಹಣ ನೀಡಿ: ರಾಜಕಾರಣಿಗಳಾದ ನಾವು ಮತ ಪಡೆಯಬೇಕಾದರೆ ರೈತರ ಮನೆ ಬಾಗಿಲಿಗೆ ತೆರಳಿ ಮತ ಕೇಳುತ್ತೇವೆ. ಆದರೆ, ರೈತರು ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿ ಬಿಲ್ಗಾಗಿ ರಾಜಕಾರಣಿಗಳ ಮನೆಗೆ ಬರಬೇಕಾ? ಎಂದು ಸಂಸದ ಭಗವಂತ ಖೂಬಾ ಸಚಿವ ಬಂಡೆಪ್ಪ ಖಾಶೆಂಪೂರ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಸದ್ಯ ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಸಮಸ್ಯೆಯಲ್ಲಿ ಇದ್ದಾರೆ, ಸರ್ಕಾರ ನಿಗದಿ ಪಡಿಸಿರುವ ದರವನ್ನು ಕಾರ್ಖಾನೆಗಳು ನೀಡುತ್ತಿಲ್ಲ ಎಂದು ರೈತರು ಅನೇಕ ಬಾರಿ ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಆದರೂ ಕೂಡ ಸರ್ಕಾರ ರೈತರ ಸಮಸ್ಯೆಗೆ ಯಾಕೆ ಸ್ಪಂದಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಕೂಡಲೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಾಗೂ ರೈತರ ಸಭೆ ಕರೆದು ಪ್ರಸಕ್ತ ಸಾಲಿನಲ್ಲಿ ಎಷ್ಟು ದರ ನೀಡಬೇಕು. ಹಾಗೂ ಬಾಕಿ ಹಣ ಪಾವತಿ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಎಫ್‌ಆರ್‌ಪಿ ದರ ನೀಡಬೇಕು: ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಬಂಡೆಪ್ಪ ಖಾಶೆಂಪೂರ್‌, ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರ ನಿಗದಿ ಮಾಡುತ್ತದೆ. ಕೇಂದ್ರ ಸರ್ಕಾದರ ದರವನ್ನೇ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳು ನೀಡುವಂತೆ ಸೂಚಿಸಲಾಗಿದೆ. ಕಬ್ಬು ಕಟಾವು ಹಾಗೂ ಸಾಗಾಟ ಸೇರಿ ಸುಮಾರು 2,650 ಪ್ರತಿ ಟನ್‌ ಕಬ್ಬಿಗೆ ಬೆಲೆ ನೀಡಬೇಕು ಎಂದು ಆಯಾ ಜಿಲ್ಲಾಧಿಕಾರಿಗಳ ಮೂಲಕ ಕೂಡ ಸೂಚಿಸಲಾಗಿದೆ. ಯಾವ ಕಾರ್ಖಾನೆ ನಿಗದಿತ ದರ ನೀಡುವುದಿಲ್ಲ ಅಂತಹ ಕಾರ್ಖಾನೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ರೈತರ ಬಾಕಿ ಹಣ ಉಳಿಸಿಕೊಂಡ ಕಾರ್ಖಾನೆಗಳ ಸಕ್ಕರೆ ಜಪ್ತಿಮಾಡಿಕೊಂಡ ಜಿಲ್ಲಾಡಳಿತ ಹರಾಜು ಮೂಲಕ ಸಕ್ಕರೆ ಮಾರಾಟ ಮಾಡಿ ರೈತರ ಖಾತೆಗೆ ಹಣ ಹಾಕುವ ಕೆಲಸ ಮಾಡಿದ್ದು, ಈ ವರ್ಷಕೂಡ ಅದೇ ಕಾರ್ಯ ನಡೆಯಲಿದೆ ಎಂದು ತಿಳಿಸಿದರು. ಅಲ್ಲದೇ, ಕಬ್ಬಿನ ರೈತರ ಸಮಸ್ಯೆ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.