ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ-ಸಮವಸ್ತ್ರ ಪೂರೈಕೆ

•ಸರ್ಕಾರಿ ಶಾಲೆಗಳು ಆರಂಭ •23 ಸಿಆರ್‌ಸಿ ವ್ಯಾಪ್ತಿಯ ಶಾಲೆಗಳಿಗೆ ಕೆಲ ಪಠ್ಯಪುಸ್ತಕ ಸರಬರಾಜು

Team Udayavani, May 28, 2019, 10:21 AM IST

bidar-tdy-1..

ಬಸವಕಲ್ಯಾಣ: ನಗರ ಹೊರವಲಯದ ಹಳೆ ವಿದ್ಯಾಪೀಠ ಶಾಲೆ ಕಟ್ಟಡದಿಂದ ಆಯಾ ಸರ್ಕಾರಿ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತಿದೆ.

ಬಸವಕಲ್ಯಾಣ: ಪ್ರಸಕ್ತ ಶೈಕ್ಷಣಿಕ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಅನುದಾನ ಸಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುವ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳು ಸರಬರಾಜು ಕಾರ್ಯ ಭರದಿಂದ ಸಾಗಿದೆ.

ಮೇ ಅಂತ್ಯದೊಳಗೆ ಎಲ್ಲ ಶಾಲೆಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಬೇಕೆಂಬ ಇಲಾಖೆ ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ಸಂಯೋಜಕ ತುಕರಾಮ ರೊಡ್ಡೆ ಸಮ್ಮುಖದಲ್ಲಿ ವಿತರಣೆ ಕಾರ್ಯ ನಡೆಯುತ್ತಿದೆ. ನಗರದ ಬಂಗ್ಲಾ ಹತ್ತಿರದ ಹಳೆ ವಿದ್ಯಾಪೀಠ ಶಾಲೆಯ ಕಟ್ಟಡದಲ್ಲಿ ಸಂಗ್ರಹಿಸಲಾದ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಆಯಾ ಶಾಲೆಗಳಿಗೆ ವಾಹನಗಳ ಮೂಲಕ ಕೆಲವು ದಿನಗಳಿಂದ ಸರಬರಾಜು ಮಾಡಲಾಗುತ್ತಿದೆ.

ತಾಲೂಕಿನ ಒಟ್ಟು 24 ಸಿಆರ್‌ಸಿ ಪೈಕಿ ಬಸವಕಲ್ಯಾಣ ನಗರದ ಹೊರತು ಪಡಿಸಿ 23 ಸಿಆರ್‌ಸಿ ವ್ಯಾಪ್ತಿಗೆ ಒಳಪಡುವ ಶಾಲೆಗಳಿಗೆ ಈಗಾಗಲೇ ಸರ್ಕಾರದಿಂದ ಬಂದ ಕೆಲವು ಪಠ್ಯಪುಸ್ತಕಗಳನ್ನು ತಲುಪಿಸುವ ಕಾರ್ಯ ಮುಗಿದಿದೆ. ಮರಾಠಿ ಮತ್ತು ಉರ್ದು ವಿಷಯಕ್ಕೆ ಸಂಬಂಧ ಪಟ್ಟ ಶೇ.40ರಷ್ಟು ಪುಸ್ತಗಳು ಸಂಬಂಧ ಪಟ್ಟ ಇಲಾಖೆ ಯಿಂದ ಸರಬರಾಜು ಆಗಿಲ್ಲ. ಅವುಗಳನ್ನು ಕೆಲವು ದಿನಗಳಲ್ಲಿ ತರಿಸಿ ಆಯಾ ಶಾಲೆ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ಒಂದು ವೇಳೆ ವಿಳಂಬವಾದಲ್ಲಿ, ಕಳೆದ ವರ್ಷ ಉಳಿದ ಅಲ್ಪಸ್ವಲ್ಪ ಪುಸ್ತಕಗಳನ್ನು ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಬಾರದ ಪುಸ್ತಕಗಳು: 3ನೇ ತರಗತಿಯ ಗಣಿತ, ನಲಿಕಲಿ, 4ನೇ ತರಗತಿಯ ಗಣಿತ ಮತ್ತು ಪರಿಸರ ವಿಷಯ, 6ನೇ ತರಗತಿಯ ಗಣಿತ ಭಾಗ-2, ವಿಜ್ಞಾನ, ಸಮಾಜ ವಿಜ್ಞಾನ ಭಾಗ-2, ಇಂಗ್ಲಿಷ್‌, 7ನೇ ತರಗತಿಯ ಗಣಿತ ಭಾಗ-1 ಮತ್ತು ವಿಜ್ಞಾನ ಭಾಗ-2, ಸಮಾಜ ವಿಜ್ಞಾನ ಭಾಗ-2, 8ನೇ ತರಗತಿಯ ವಿಜ್ಞಾನ ಭಾಗ-1, ಸಮಾಜ ವಿಜ್ಞಾನ ಭಾಗ-2, ದೈಹಿಕ ಶಿಕ್ಷಣ, 9ನೇ ತರಗತಿಯ ವಿಜ್ಞಾನ ಭಾಗ-1 ಮತ್ತು 2, ಇಂಗ್ಲಿಷ್‌ ಮತ್ತು 10ನೇ ತರಗತಿಯ ವಿಜ್ಞಾನ ಭಾಗ-2 ಪುಸ್ತಕಗಳ ಕೊರತೆ ಇದೆ.

•ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.