ಅವನತಿಯತ್ತ ಪ್ರಾಚೀನ ಕಲ್ಮೇಶ್ವರ ದೇವಾಲಯ

Team Udayavani, Mar 11, 2019, 7:07 AM IST

bid-3.jpg

ಹುಮನಾಬಾದ: ಹೊಯ್ಸಳ ಶಿಲ್ಪಗಳಿಗೆ ಮಾದರಿಯಾದ ಮದನಿಕೆಯರ ಕೆತ್ತನೆ ಇರುವ ಜಲಸಂಗವಿ ಗ್ರಾಮದ ಕಲ್ಮೇಶ್ವರ ದೇವಾಲಯ ಸೂಕ್ತ ರಕ್ಷಣೆ ಇಲ್ಲದೆ ಉಂಡಾಡಿಗಳು ಹಾಗೂ ದುರ್ವೆಸನಿಗಳ ಕೇಂದ್ರವಾಗಿ ಪರಿಣಮಿಸಿದೆ.

ಕಲಾತ್ಮಕತೆ ಮತ್ತು ಐತಿಹಾಸಿಕ ಕಾರಣಗಳಿಂದ ಮಹತ್ವ ಪಡೆದಿರುವ ಶಿಲಾಬಾಲಿಕೆಯರು, ಪ್ರಾಚ್ಯವಸ್ತು, ಪ್ರವಾಸೋದ್ಯಮ ಇಲಾಖೆ ಜೊತೆಗೆ ಈ ಭಾಗದ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ದಿನದಿಂದ ದಿನಕ್ಕೆ ಶಿಥಿಲಾವಸ್ಥೆ ತಲುಪುತ್ತಿದೆ. ದೇವಾಲಯ ಗೋಡೆಗಳಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಗಿಡಗಳು ಬೆಳೆದು, ಶಿಲ್ಪಗಳು ಶಿಥಿಲಗೊಳ್ಳುತ್ತಿವೆ. ಅದೆಷ್ಟೋ ಮೂರ್ತಿಗಳು ಸೂಕ್ತ ವ್ಯವಸ್ಥೆ ಕೊರತೆಯಿಂದ ಪ್ರಾಂಗಣದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸಂಬಂಧಪಟ್ಟ ಇಲಾಖೆ ವಿಶೇಷ ಮುತುವರ್ಜಿ ವಹಿಸಿ, ಈ ಐತಿಹಾಸಿಕ ದೇವಸ್ಥಾನವನ್ನು ಅಭಿವೃದ್ಧಿಪಡಿಸಬೇಕಿದೆ.

ಕಲ್ಯಾಣ ಚಾಲುಕ್ಯ ದೊರೆ 6ನೇ ವಿಕ್ರಮಾದಿತ್ಯನ ಕಾಲದಲ್ಲಿ ನಿರ್ಮಿಸಲಾದ ಈ ದೇವಾಲಯವು ವಿಶಿಷ್ಟ ಕಲಾಕೃತಿಯ ಮೂರ್ತಿ ನೋಡುಗರನ್ನು ಆಕರ್ಷಿಸುತ್ತಿವೆ. ಈ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಶ್ರೇಷ್ಟ ಪ್ರವಾಸಿ ತಾಣಗಳೆಂದು ಹೇಳಲಾಗುವ ಬೇಲೂರು-ಹಳೆಬೀಡು ದೇಗುಲಗಳ ನಿರ್ಮಾಣಕ್ಕೂ ಮುನ್ನವೇ ಈ ದೇವಾಲಯದ ಗೋಡೆಗಳ ಮದನಿಕೆಯರು ಕಾಣಿಸಿಕೊಂಡಿದ್ದರು ಎಂಬುದನ್ನು ಇತಿಹಾಸ ತಿಳಿಸುತ್ತದೆ. 

ಸದಾ ಪ್ರವಾಸಿಗರಿಂದ ತುಂಬಿ ತುಳುಕಬೇಕಾದ ಈ ಶಿಲ್ಪಕಲಾ ದೇವಾಲಯಕ್ಕೆ ಅಪೂರ್ಣ ಆವರಣಗೋಡೆ ಇರುವ ಕಾರಣ ಇಲ್ಲಿ ಜನರಿಗಿಂತ ಹಂದಿಗಳೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸಂಶೋಧನಾ ವಿದ್ಯಾರ್ಥಿಗಳಿರಬೇಕಾದ ಈ ಪವಿತ್ರ ಸ್ಥಳದಲ್ಲಿ ಜೂಜು, ಕುಡಿತ ಮತ್ತು ಆಗಾಗ ರಾತ್ರಿ ಹೊತ್ತು ಅನೈತಿಕ ಚಟುವಟಿಕೆ ಕೂಡ ಇಲ್ಲಿ ನಡೆಯುತ್ತವೆ. ಪ್ರವಾಸಿಗರಿಗೆ ನೆರಳು ನೀಡಬೇಕಾದ ವಿಶಾಲ ಆಲದ ಮರದ ಕೆಳಗೆ ಗುಜರಿ ಸೇರಬೇಕಾದ ಟ್ರಾಕ್ಟರ್‌ ಮತ್ತಿತರ ಸಾಮಗ್ರಿಗಳು ತುಂಬಿವೆ. ಪ್ರಾಂಗಣದ ಮೂಲೆ ಒಂದರಲ್ಲಿ ಜನ ಮೂತ್ರ ವಿಸರ್ಜನೆ ಮಾಡುತ್ತಿರುವ ಕಾರಣ ಇಡೀ ಪರಿಸರದಲ್ಲಿ ದುರ್ನಾಥ ಹರಡಿದೆ. ಅಷ್ಟು ಸಾಲದೆಂಬುದಂತೆ ಊರುಲ್ಲಿ ಮನೆ ಕೆಡವಿದ, ಚರಂಡಿ ಸ್ವತ್ಛಗೊಳಿಸಿದ ತ್ಯಾಜ್ಯ ಕೂಡ ಇಲ್ಲಿ ಸಂಗ್ರಹವಾಗಿದೆ. 

ಆವರಣಗೋಡೆ ಅಪೂರ್ಣ ಸ್ಥಿತಿಯಲ್ಲಿ ಇರುವ ಕಾರಣ ಆಗಾಗ ವಿಷ ಜಂತುಗಳು ಸುತ್ತಾಡುತ್ತವೆ. ಪ್ರವಾಸಿಗರ ಅನುಕೂಲಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಆರಂಭಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉಂಡಾಡಿಗಳು ಸಂಪೂರ್ಣ ಹಾಳು ಮಾಡಿದ್ದರಿಂದ ಅದೀಗ ಸಂಪೂರ್ಣ ಹಾಳಾಗಿದೆ.

ಐತಿಹಾಸಿಕ ಮಹತ್ವ ಪರಿಚಯಿಸುವ ಈ ದೇಗುಲ ಈ ಸ್ಥಿತಿಗೆ ತಲುಪಲು ಪ್ರಾಚ್ಯವಸ್ತು ಮತ್ತು ಪ್ರವಾಸೋದ್ಯಮ ಇಲಾಖೆ ತಾಳಿರುವ ನಿರ್ಲಕ್ಷ್ಯವೇ ಕಾರಣ. ಈ ಮಧ್ಯ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ, ಇದೇ ಜಿಲ್ಲೆಯವರೇ ಆದ ಯುವಜನ ಮತ್ತು ಕ್ರೀಡಾ ಖಾತೆ ಸಚಿವ ರಹಿಂಖಾನ್‌ ಸೇರಿ ಮೂವರು ಸಚಿವರಿದ್ದರೂ ಐತಿಹಾಸಿಕ ದೇವಸ್ಥಾನ ಅಭಿವೃದ್ಧಿ ಕಾಣದೇ ಇರುವುದು ನೋವಿನ ಸಂಗತಿ. ಈ ಎಲ್ಲದರ ಜೊತೆಗೆ ಜಿಲ್ಲಾ ಆಡಳಿತ ಇಂಥ ಕೇಂದ್ರಗಳ ಅಭಿವೃದ್ಧಿಗೆ ಮುಂದಾಗಬೇಕು ಎಂಬುದು ಐತಿಹಾಸಿಕ ಸ್ಮಾರಕ ಪ್ರಿಯರ ಒತ್ತಾಸೆ. ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ದೇವಸ್ಥಾನ ಅಭಿವೃದ್ಧಿಗೆ ಒತ್ತು ನೀಡಬೇಕಿದೆ.

ನಮ್ಮೂರ ಕಲ್ಮೇಶ್ವರ ಶಿಲ್ಪಕಲಾ ದೇಗುಲ ಬೇರಾವುದಾದರೂ ಜಿಲ್ಲೆಯಲ್ಲಿದ್ದಿದ್ದರೆ ಎಷ್ಟೆಲ್ಲ ಅಭಿವೃದ್ಧಿ ಆಗುತ್ತಿತ್ತು. ಬೀದರ ಜಿಲ್ಲೆಯ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳಿಗೆ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಕಿಂಚಿತ್ತೂ ಆಸಕ್ತಿ ಇಲ್ಲದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಹಿಂದೆ ಹೋದದ್ದು ಹೋಗಲಿ ಮುಂದಾದರೂ ನಮ್ಮ ಜಿಲ್ಲೆಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಇಂಥ ಸ್ಮಾರಕಗಳ ಅಭಿವೃದ್ಧಿಗೊಳಿಸಲು ಮುಂದಾಗಬೇಕು.
 ಖಾಸೀಂ-ಅಲಿ, ಜಲಸಂಗವಿ ಗ್ರಾಮಸ್ಥ

ಪ್ರಾಚ್ಯವಸ್ತು ಮತ್ತು ಪ್ರವಾಸೋದ್ಯಮ ಇಲಾಖೆಗೆ ಈ ದೇವಸ್ಥಾನ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆಗೊಮ್ಮೆ ಈಗೊಮ್ಮೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಬೆರಳೆಣಿಕೆಯಷ್ಟು ಸಂಶೋಧಕರು ಬರುತ್ತಾರೆ ಎಂಬ ಕಾರಣಕ್ಕಾಗಿ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಲವರು ಹಾಳು ಮಾಡಿದ್ದಾರೆ. ದೇವಸ್ಥಾನ ಪ್ರಾಂಗಣ ಸ್ವತ್ಛತೆ ಇತ್ಯಾದಿ ಸಣ್ಣಪುಟ್ಟ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಬಗೆ ಹರಿಸುತ್ತೇವೆ. ಉಳಿದದ್ದನ್ನು ಸಂಬಂಧಪಟ್ಟ ಇಲಾಖೆಯವರೆ ಮಾಡಬೇಕು.
 ಸರಸ್ವತಿ ಘಂಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಜಲಸಂಗವಿ

„ಶಶಿಕಾಂತ ಕೆ. ಭಗೋಜಿ

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.