Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ


Team Udayavani, Nov 18, 2024, 5:54 PM IST

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

ಬೀದರ್:‌ ಜಗತ್ತಿನಲ್ಲಿ ಭಾರತ ಆರ್ಥಿಕ ಮತ್ತು ಸಾಮಾಜಿಕವಾಗಿ ಪ್ರಗತಿ ಸಾಧಿಸಿದ್ದರೆ ಸಹಕಾರ ಕ್ಷೇತ್ರದ ಬಹುದೊಡ್ಡ ಕೊಡುಗೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಸೋಮವಾರ (ನ.18) ರಾಜ್ಯ ಸಹಕಾರ ಮಹಾ ಮಂಡಳ, ವಿವಿಧ ಸಹಕಾರ ಮಹಾ ಮಂಡಳ ಮತ್ತು ಸಂಘಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 71ನೇ ಆಖಿಲ ಭಾರತ ಸಹಕಾರ ಸಪ್ತಾಹ-2224ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡಿದ್ದ ಸಹಕಾರಿ ಚಳುವಳಿಯು ಇಂದು ಕ್ರಾಂತಿಯ ರೀತಿಯಲ್ಲಿ ಬೆಳೆದು ನಿಂತಿದೆ. ಸ್ವಾತಂತ್ರ್ಯ ನಂತರದ ಅನಕ್ಷರತೆ, ಬಡತನದ ಮಧ್ಯ ಸಹಕಾರ ಕ್ಷೇತ್ರ ಬೆಳವಣಿಗೆ ಸಾಧಿಸಿದ್ದು, ಪ್ರಗತಿಯಲ್ಲಿ ಕರ್ನಾಟಕದ ದೇಶದಲ್ಲಿ ಮೂರನೇ ಸ್ಥಾನದಲ್ಲಿ ಎಂದು ನುಡಿದರು.

ಸಹಕಾರ ಕ್ಷೇತ್ರದ ಮೂಲಕ ಹಾಲು ಉತ್ಪಾದನೆ, ಗೃಹ ನಿರ್ಮಾಣ, ಸಕ್ಕರೆ ಕಾರ್ಖಾನೆ, ಬ್ಯಾಂಕ್‌ ಗಳು, ಪಿಕೆಪಿಎಸ್‌ಗಳ ಸೇವೆ ಸ್ಮರಣೀಯ. ಮಹಿಳೆಯರಲ್ಲಿ ಆರ್ಥಿಕ ಸಬಲೀಕರಣ ಮತ್ತು ಜಾಗೃತಿಗೆ ಸಹಕಾರ ರಂಗವೇ ಕಾರಣ. ಮನೆಯಿಂದ ಹೊರಗೆ ಬಾರದ ಮಹಿಳೆಯರು ಇಂದು ಸ್ವಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಪ್ರಗತಿ ಸಾಧಿಸಿ, ಬ್ಯಾಂಕಿಂಗ್ ಸೇವೆಯನ್ನು ಪಡೆಯುದ್ದಾರೆ ಎಂದು ಹೇಳಿದರು.

ಗಡಿನಾಡು ಬೀದರ ಶ್ರೀಮಂತ ಜಿಲ್ಲೆಯಾಗಿದ್ದರೂ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿನ್ನಡೆ ಸಾಧಿಸಿತ್ತು. ಆದರೆ, ಇಂದು ಆ ಪರಿಸ್ಥಿತಿ ಬದಲಾಗಿದೆ. ಜಿಲ್ಲೆಯಲ್ಲಿ ಎಪ್ಪತ್ತರ ದಶಕದಲ್ಲಿ ಆರಂಭಿಸಿದ್ದ ಕೃಷಿ ಆಧಾರಿತ ಕಾರ್ಖಾನೆಗಳಿಂದ ರೈತರು ಹಣ ನೋಡುವಂತಾಯಿತು. ಶತಮಾನೋತ್ಸವದ ಸಂಭ್ರಮದಲ್ಲಿರುವ ಡಿಸಿಸಿ ಬ್ಯಾಂಕ್ ಸಹ ಬೃಹತ್ ಆಗಿ ಬೆಳೆದಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ವಿತರಣೆಯಲ್ಲಿ ಬೀದರ ಬ್ಯಾಂಕ್ ಮುಂಚೂಣಿಯಲ್ಲಿದೆ ಎಂದರು.

ಸಹಕಾರ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಬೀದರ ಜಿಲ್ಲೆಯಲ್ಲಿ ವಿಪುಲ ಅವಕಾಶಗಳಿವೆ. ರೈತರು ಒಗ್ಗೂಡಿ, ಸಹಕಾರ ಸಂಘ ರಚಿಸಿಕೊಂಡು ಉತ್ತಮ ಬೆಳೆ ಉತ್ಪಾದನೆಗೆ ಸೌಲಭ್ಯಗಳನ್ನು ಪಡೆಯಲು, ಹೈನುಗಾರಿಕೆ, ಕುರಿ- ಕೋಳಿ ಸಾಕಾಣಿಕೆ ಉದ್ಯಮದ ಮೂಲಕ ಆರ್ಥಿಕವಾಗಿ ಬೆಳೆಯಬಹುದು. ಸಂಘಗಳಿದ್ದರೆ ಯಾವುದೇ ಶೋಷಣೆ ಇಲ್ಲದೇ ಸರ್ಕಾರದ ಯೋಜನೆ ಹಾಗೂ ಸಾಲ ಸೌಲಭ್ಯದ ಲಾಭಗಳನ್ನು ಪಡೆಯಬಹುದು ಎಂದು ತಿಳಿಸಿದರು.

ಲೋಪಗಳು, ಸೋರಿಕೆ ತಡೆಗಟ್ಟಿದರೆ ಸಹಕಾರ ಸಂಘಗಳು ಮತ್ತಷ್ಟು ಬಲವರ್ಧನೆಗೊಂಡು ಜಿಲ್ಲೆಯ ಪ್ರಗತಿಗೆ ಸಹಕಾರ ಸಿಗುತ್ತದೆ. ಸಹಕಾರ ಕ್ಷೇತ್ರ ಗಟ್ಟಿಯಾಗಿ ಬೆಳೆಯಬೇಕಾಗಿದ್ದು, ಈ ದಿಸೆಯಲ್ಲಿ ಸರ್ಕಾರ ಸಹಕಾರಿಗಳ ಪರವಾಗಿ ಇರಲಿದೆ ಎಂದು ಸಚಿವ ಖಂಡ್ರೆ ಭರವಸೆ ನೀಡಿದರು.

ಸಹಕಾರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನ ಮತ್ತು ಡಿಸಿಸಿ ಬ್ಯಾಂಕ್‌ಗಳಿಗೆ ಇನ್ನಷ್ಟು ಶಕ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಈ ದಿಸೆಯಲ್ಲಿ ಸಿಎಂ, ಸಹಕಾರ ಸಚಿವರ ಗಮನ ಸೆಳೆಯುವುದಾಗಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಬಿಎಸ್‌ಎಸ್‌ಕೆ ಕಾರ್ಖಾನೆ ಮೇಲಿನ ಸಾಲ 350 ಕೋಟಿ ರೂ.ಗೆ ತಲುಪಿದ್ದು, ಸಾಲ ಮರು ಪಾವತಿ ಸ್ಥಿತಿಯಲ್ಲಿ ಕಾರ್ಖಾನೆಯಿಲ್ಲ. ಆದರೆ, ಡಿಸಿಸಿ ಬ್ಯಾಂಕ್ ಉಳಿಯಬೇಕಾದರೆ ತಾನು ಕೊಟ್ಟ ಸಾಲವನ್ನು ಮರು ಪಾವತಿ ಮಾಡಿಕೊಳ್ಳುವುದು ಮತ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು.

ಪೌರಾಡಳಿತ ಸಚಿವ ರಹೀಮ್ ಖಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ, ನಗರಸಭೆ ಅಧ್ಯಕ್ಷ ಮಹ್ಮದ್ ಗೌಸ್, ಡಿಸಿಸಿ ಬ್ಯಾಂಕ್ ಅದ್ಯಕ್ಷ ಅಮರಕುಮಾರ ಖಂಡ್ರೆ, ಉಪಾಧ್ಯಕ್ಷ ಅಭಿಷೇಕ ಪಾಟೀಲ, ಸಹಕಾರ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಸಿಇಒ ಡಾ. ಗಿರೀಶ್ ಬದೋಲೆ, ಸಹಕಾರ ಸಂಘಗಳ ಉಪ ನಿಬಂಧಕಿ ಮಂಜುಳಾ ಎಸ್. ಗುರುನಾಥ ಜ್ಯಾಂತಿಕರ್, ವಿಜಯಕುಮಾರ ಪಾಟೀಲ ಗಾದಗಿ ಮತ್ತಿತರರಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.