ಲಾಠಿ ಪ್ರಹಾರ: ಪಿಎಸ್‌ಐ ಅಮಾನತಿಗೆ ಆಗ್ರಹ


Team Udayavani, Aug 22, 2017, 11:59 AM IST

bid 3.jpg

ಬೀದರ: ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಲು ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು
ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪಿಎಸ್‌ಐ ಖಾಜಾ ಹುಸೇನ್‌ ಲಾಠಿ ಪ್ರಹಾರ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ಅವರನ್ನು ಅಮಾನತ್ತು ಮಾಡಬೇಕೆಂದು ಜಿಲ್ಲಾ ಬಿಜೆಪಿ ಆಗ್ರಹಿಸಿದೆ.
ಪಕ್ಷದ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಮತ್ತು ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ ನೇತೃತ್ವದಲ್ಲಿ ಪ್ರಮುಖರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಪ್ರತಿಭಟನೆ ಆಯೋಜನೆ ಮತ್ತು ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡುವ ಕುರಿತು ಮಾರ್ಕೇಟ್‌ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿತ್ತು. ಕಾನೂನಿನಲ್ಲಿ ಅವಕಾಶವಿದ್ದರೂ ಪ್ರತಿಕೃತಿ ದಹನಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ರವಿವಾರ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ಕಾರ್ಯಕರ್ತರ ಮೇಲೆ ಪಿಎಸ್‌ಐ ಖಾಜಾ ಹುಸೇನ್‌
ಅವರು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ತಾಲೂಕು ಪ್ರಧಾನ
ಕಾರ್ಯದರ್ಶಿ ಅರವಿಂದ ನೀಲಕಂಠರಾವ್‌ ಅವರ ಎಡಗೈ ಮುರಿದಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಉರಿಯುತ್ತಿರುವ ಬೆಂಕಿಯ ಪ್ರತಿಕೃತಿಯನ್ನು ಅರವಿಂದರ ಮೇಲೆ ಎಸೆದು ಅಮಾನುಷವಾಗಿ ವರ್ತಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಏಜೆಂಟರಂತೆ ವರ್ತನೆ ಮಾಡಿದ್ದು ಸಾಮಾನ್ಯ ಜನರು ಬೆಚ್ಚಿಬೀಳುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ದೂರಲಾಗಿದೆ. ಕಾನೂನು ಮೀರಿ ವರ್ತನೆ ಮಾಡಿರುವ ಪಿಎಸ್‌ಐ ಹುಸೇನ್‌ ಅವರನ್ನು ಕೂಡಲೇ ಅಮಾನತು ಮಾಡಬೇಕು. ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.