ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಯತ
Team Udayavani, Feb 25, 2018, 2:45 PM IST
ಬಸವಕಲ್ಯಾಣ: ನಿರ್ಭಯ ಹಾಗೂ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಯಾರು ದಡ್ಡರಲ್ಲ, ಎಲ್ಲರೂ ಜಾಣರು. ಪರೀಕ್ಷೆ ಹಬ್ಬ ಎನ್ನುವಂತೆ ಖುಷಿಯಾಗಿ ಸಂಭ್ರಮಿಸಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯ ಎಂದು ಮೈಸೂರಿನ ಚೇತನರಾಮ್ ಸಲಹೆ ನೀಡಿದರು.
ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಸಕ ಮಲ್ಲಿಕಾರ್ಜುನ ಖೂಬಾ ಅವರ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ 10ನೇ ತರಗತಿ ವಿದ್ಯಾರ್ಥಿಗಳಿಗೆ ನಗರದ ರಥ ಮೈದಾನದಲ್ಲಿಯ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಪುನಶ್ಚೇತನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಾಧನೆಗೆ ಗುರಿ ಮತ್ತು ಆತ್ಮವಿಶ್ವಾಸ ಮುಖ್ಯ. ಈ ಭಾಗದಲ್ಲಿ ಸಾಕಷ್ಟು ವಿದ್ಯಾರ್ಥಿಗಳಲ್ಲಿ ಗುರಿಯೇ ಇರುವುದಿಲ್ಲ ಎಂದರು.
ಶಾಸಕ ಮಲ್ಲಿಕಾರ್ಜುನ ಖೂಬಾ ಕಾರ್ಯಾಗಾರ ಉದ್ಘಾಟಿಸಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಸವಿತಾ ರಮೇಶ ಹಾಗೂ ಜಿಲ್ಲಾಮಟ್ಟದ ಸಂಪನ್ಮೂಲ ವ್ಯಕ್ತಿ ವಿಜಯಕುಮಾರ ಮಳಚಾಪುರ ಉಪನ್ಯಾಸ ನೀಡಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ ಜಡಗೆ ಹಾಗೂ ಸಾವಿತ್ರಿ ಬಿರಾದಾರ ನಿರೂಪಿಸಿದರು. ಬಿಇಒ ಸಿ. ನಾಗರಾಜ ವಂದಿಸಿದರು.
ತಾಲೂಕು ಮಟ್ಟದ ಅಧಿಕಾರಿಗಳು, ಇಸಿಒ, ಬಿಆರ್‌ಪಿ, ಸಿಆರ್‌ಪಿ, ತಾಲೂಕಿನ ಪ್ರೌಢಶಾಲೆಗಳ ಮುಖ್ಯಗುರುಗಳು, ಶಿಕ್ಷಕರು, ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಮತ್ತು ನಗರ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಿಕ್ಷಕರಿಗೆ ವಿದೇಶ ಪ್ರವಾಸ ವ್ಯವಸ್ಥೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಭಾಗ ಮಟ್ಟದಲ್ಲಿ ಸಾಧನೆ ಮಾಡುವ ತಾಲೂಕಿನ ಶಾಲೆಯ ನಾಲ್ಕು ಜನ ಶಿಕ್ಷಕರಿಗೆ ವಿದೇಶ ಪ್ರವಾಸ, ಜಿಲ್ಲಾಮಟ್ಟದಲ್ಲಿ ಸಾಧನೆ ಮಾಡುವ ಶಾಲೆಯ ನಾಲ್ಕು ಜನ ಶಿಕ್ಷಕರಿಗೆ ದೇಶ ಪ್ರವಾಸ ಮತ್ತು ತಾಲೂಕು ಮಟ್ಟದಲ್ಲಿ ಸಾಧನೆ ಮಾಡುವ ಶಾಲೆಯ ನಾಲ್ವರು ಶಿಕ್ಷಕರಿಗೆ ರಾಜ್ಯ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಘೋಷಿಸಿದರು.
ಜನಪ್ರತಿನಿಧಿಗಳ ಬಹಿಷ್ಕಾರ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನೆ ವೇಳೆ ವೇದಿಕೆಗೆ ಆಹ್ವಾನಿಸಿಲ್ಲ. ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕೆಲ ಜನಪ್ರತಿಧಿಗಳು ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿ ಹೊರನಡೆದ ಪ್ರಸಂಗ ಜರುಗಿತು. ಕಾರ್ಯಕ್ರಮ ಆರಂಭದಲ್ಲಿ ಉದ್ಘಾಟನೆ ವೇಳೆ ಶಾಸಕರಿಗೆ ಮಾತ್ರ ವೇದಿಕೆಗೆ ಆಹ್ವಾನಿಸಿದಕ್ಕೆ ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ ಆಕ್ಷೇಪ ವ್ಯಕ್ತಪಡಿಸಿ ಬಿಇಒ ಅವರನ್ನು ತರಾಟೆಗೆ ತಗೆದುಕೊಂಡರು. ತಾಪಂ ಅಧ್ಯಕ್ಷರ ಮಾತಿಗೆ ಧ್ವನಿಗೂಡಿಸಿದ ನಗರಸಭೆ ಅಧ್ಯಕ್ಷ ಮೀರ ಅಜರ ಅಲಿ, ಜಿಪಂ ಸದಸ್ಯರಾದ ಸುಧೀರ ಕಾಡಾದಿ ಹಾಗೂ ನಿರ್ಮಲಾ ಮಾನೆಗೋಪಾಲೆ ಅಸಮಾಧಾನಗೊಂಡು ಹೊರನಡೆದರು. ಇಲಾಖೆ ಆಹ್ವಾನದ ಮೇರೆಗೆ ಭಾಗವಹಿಸಲು ಆಗಮಿಸಿದ ನಗರಸಭೆ ಅಧ್ಯಕ್ಷ, ತಾಪಂ ಅಧ್ಯಕ್ಷೆ ಮತ್ತು ಜಿಪಂ ಸದಸ್ಯರಿಗೆ ವೇದಿಕೆಗೆ ಕರೆಯದ ಹಿನ್ನೆಲೆಯಲ್ಲಿ ಭವನದಿಂದ ಹೊರ ನಡೆದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.